ಕೇರಳ ಮಳೆಗೆ ಅಸುನೀಗಿದವರ ಸಂಖ್ಯೆ 102
Team Udayavani, Aug 15, 2019, 5:32 AM IST
ಹೊಸದಿಲ್ಲಿ: ಕೇರಳದಲ್ಲಿ ಮಳೆ, ಪ್ರವಾಹಕ್ಕೆ ಅಸುನೀಗಿದವರ ಸಂಖ್ಯೆ 102ಕ್ಕೆ ಏರಿಕೆಯಾಗಿದೆ. ಅದಕ್ಕೆ ಪೂರಕವಾಗಿ ರಾಜ್ಯದ ವಿವಿಧ ಭಾಗಗಳಲ್ಲಿ ಮಂಗಳ ವಾರ ರಾತ್ರಿಯಿಂದ ಧಾರಾಕಾರ ಮಳೆಯಾಗು ತ್ತಿದೆ. ಮಲಪ್ಪುರಂ, ಕಣ್ಣೂರು, ಕಲ್ಲಿಕೋಟೆ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿ ಸಲಾಗಿದೆ. ತೀರ ಪ್ರದೇಶದ ವ್ಯಾಪ್ತಿಯಲ್ಲಿರುವ ಜಿಲ್ಲೆಗಳ ಮೀನುಗಾರರು ಸಮುದ್ರಕ್ಕೆ ತೆರಳದಂತೆಯೂ ಎಚ್ಚರಿಕೆ ನೀಡಲಾಗಿದೆ. ಕಣ್ಣೂರು ವಿವಿ ವ್ಯಾಪ್ತಿಯಲ್ಲಿನ ಹಲವು ಪರೀಕ್ಷೆಗಳನ್ನು ಮುಂದೂಡಲಾಗಿದೆ.
ತಿರುವನಂತಪುರದಲ್ಲಿ ಅಧಿಕಾರಿಗಳ ಸಭೆ ಬಳಿಕ ಮಾತನಾಡಿದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತತ್‌ಕ್ಷಣದ ಪರಿಹಾರವಾಗಿ ಸಂತ್ರಸ್ತರಿಗೆ ತಲಾ 10 ಸಾವಿರ ರೂ. ನೀಡಲಾಗುತ್ತದೆ. ಮನೆ ಮತ್ತು ಜಮೀನು ಕಳೆದುಕೊಂಡವರಿಗೆ 10 ಲಕ್ಷ, ಮನೆ ಕಳೆದುಕೊಂಡವರಿಗೆ 4 ಲಕ್ಷ ರೂ. ನೀಡಲು ನಿರ್ಧರಿಸಲಾಗಿದೆ ಎಂದರು. 1.95 ಲಕ್ಷ ಮಂದಿ 1,118 ನಿರಾಶ್ರಿತರ ಶಿಬಿರಗಳಲ್ಲಿ ಆಶ್ರಯ ಪಡೆದಿದ್ದಾರೆ ಎಂದರು.
ಸಹಜ ಸ್ಥಿತಿಗೆ: ಇದೇ ವೇಳೆ ಹಲವು ದಿನಗಳಿಂದ ಧಾರಾಕಾರ ಮಳೆಗೆ ನಲುಗಿದ್ದ ಪಶ್ಚಿಮ ಮಹಾರಾಷ್ಟ್ರದ ಜಿಲ್ಲೆಗಳಾಗಿರುವ ಕೊಲಾØಪುರ, ಸಾಂಗ್ಲಿ ಜಿಲ್ಲೆಗಳಲ್ಲಿ ನಿಧಾನವಾಗಿ ಪರಿಸ್ಥಿತಿ ಯಥಾಸ್ಥಿತಿಗೆ ಹಿಂತಿರುಗುತ್ತಿದೆ. ಹೆಚ್ಚಿನ ನದಿಗಳಲ್ಲಿನ ಅಪಾಯದ ಮಟ್ಟಕ್ಕಿಂತ ಕೆಳಗೆ ಹರಿಯುತ್ತಿವೆ. ಮಂಗಳವಾರದ ವರೆಗೆ 6.45 ಲಕ್ಷ ಮಂದಿಯನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಲಾಗಿದೆ.
ಪಾಕ್ ಮಳೆಗೆ 42 ಸಾವು: ಪಾಕಿಸ್ಥಾನದಲ್ಲಿ ಕೂಡ ಧಾರಾಕಾರ ಮಳೆಯಾಗುತ್ತಿದೆ. ವಿಶೇಷವಾಗಿ ಕರಾಚಿಯಲ್ಲಿ ಮಳೆ ಸಂಬಂಧಿತ ದುರಂತಗಳಲ್ಲಿ 42 ಮಂದಿ ಸಾವಿಗೀಡಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Election: ಅಮಿತ್ ಶಾ ಅವರ ಬ್ಯಾಗ್ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
Mumbai: ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್‌ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ: ವರದಿ
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್‌ಗಳಿಗೆ ನಿರ್ಬಂಧ
MUST WATCH
ಹೊಸ ಸೇರ್ಪಡೆ
Organ Donation: ಸಾವಿನ ನಂತರವೂ ನೆರವಾದ ಜೀವ
Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Maharashtra Election: ಅಮಿತ್ ಶಾ ಅವರ ಬ್ಯಾಗ್ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು
Bengaluru: ವೈದ್ಯೆಗೆ ಲೈಂಗಿಕ ಕಿರುಕುಳ: ಪಿಎಸ್‌ಐ ವಿರುದ್ದ ಪೊಲೀಸ್ ಆಯುಕ್ತರಿಗೆ ದೂರು
Bengaluru: ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ಜೀವ ಉಳಿಸಿದ ಸಂಚಾರ ಪೊಲೀಸರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.