ಬಾಲಕಿಗೆ ಲೈಂಗಿಕ ಕಿರುಕುಳ: 103 ವರ್ಷದ ಅಜ್ಜನಿಗೆ 10 ವರ್ಷ ಜೈಲುಶಿಕ್ಷೆ
Team Udayavani, Mar 19, 2022, 7:20 AM IST
ಚೆನ್ನೈ: 103 ವರ್ಷದ ವೃದ್ಧನಿಗೆ ತಮಿಳುನಾಡಿನ ನ್ಯಾಯಾಲಯ 10 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಆತ 2018ರಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ಹಲ್ಲೆ ನಡೆಸಿರುವ ಹಿನ್ನೆಲೆ ಈ ಶಿಕ್ಷೆ ನೀಡಲಾಗಿದೆ.
ಸರ್ಕಾರಿ ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯನಾಗಿರುವ ಕೆ.ಪರಶುರಾಮನ್ ಚೆನ್ನೈನ ಹೊರವಲಯದಲ್ಲಿರುವ ಚೆನ್ನೀರಕುಪ್ಪಂನಲ್ಲಿ ಐದು ಮನೆಗಳನ್ನು ಬಾಡಿಗೆಗೆ ಕೊಟ್ಟಿದ್ದ. ಅಲ್ಲೇ ಹತ್ತಿರದಲ್ಲಿ ಮತ್ತೂಂದು ಮನೆಯಲ್ಲಿ ವಾಸಿಸುತ್ತಿದ್ದ ಆತ ತನ್ನ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಬಾಲಕಿಗೆ ಚಾಕಲೇಟ್ ತೋರಿಸಿ ಮನೆಗೆ ಕರೆದುಕೊಂಡು ಹೋಗಿದ್ದಾನೆ. ಅಲ್ಲಿ ಆಕೆಗೆ ಲೈಂಗಿಕ ಕಿರುಕುಳ ಕೊಟ್ಟಿದ್ದಾನೆ. ಈ ವಿಚಾರವನ್ನು ಬಾಲಕಿ ತಂದೆ ತಾಯಿ ಮುಂದೆ ಬಾಯಿ ಬಿಟ್ಟಿದ್ದಳು.
ಆ ಹಿನ್ನೆಲೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು. ಗುರುವಾರ ಈ ಪ್ರಕರಣದ ತೀರ್ಪು ಹೊರಬಿದ್ದಿದ್ದು, ಅಪರಾಧಿಗೆ 10 ವರ್ಷ ಜೈಲು ಶಿಕ್ಷೆ ಮತ್ತು 5000 ರೂ. ದಂಡ ವಿಧಿಸಲಾಗಿದೆ. ಬಾಲಕಿಯ ಕುಟುಂಬಕ್ಕೆ 45,000 ರೂ. ಪರಿಹಾರ ನೀಡಲೂ ಆದೇಶಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi Polls: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ಕೇಜ್ರಿವಾಲ್ ವಿರುದ್ಧ ವರ್ಮಾ
New Delhi; ಸಹಪಾಠಿಗಳೊಂದಿಗೆ ವಾಗ್ವಾದ; 7ನೇ ತರಗತಿ ವಿದ್ಯಾರ್ಥಿಯನ್ನು ಇರಿದು ಹತ್ಯೆ
Thane; ಕ್ರಿಮಿನಲ್ ಕೇಸ್ ನ ಮುಖ್ಯ ಸಾಕ್ಷಿ, ಉದ್ಯಮಿಯನ್ನು ಗುಂಡಿಕ್ಕಿ ಹತ್ಯೆ
ಹಿರಿಯ ಪರಮಾಣು ವಿಜ್ಞಾನಿ ರಾಜಗೋಪಾಲ್ ಚಿದಂಬರಂ ವಿಧಿವಶ: ಪ್ರಧಾನಿ ಮೋದಿ ಸಂತಾಪ
Tamilnadu: ಪಟಾಕಿ ತಯಾರಿಕೆ ಕಾರ್ಖಾನೆಯಲ್ಲಿ ಸ್ಫೋಟ- ಆರು ಮಂದಿ ಸಾ*ವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.