ದಿನಗೂಲಿ ನೌಕರರಲ್ಲಿಯೇ ಆತ್ಮಹತ್ಯೆ ಹೆಚ್ಚು
ದೇಶದಲ್ಲಿ ಆತ್ಮಹತ್ಯೆಗೂ,ಬಡತನಕ್ಕೂ ಇದೆ ನಂಟು ಎನ್‌ಸಿಆರ್‌ಬಿಯ 2018ರ ವರದಿಯಲ್ಲಿ ಉಲ್ಲೇಖ
Team Udayavani, Jan 9, 2020, 8:02 PM IST
ನವದೆಹಲಿ: ದೇಶದಲ್ಲಿ ದಿನಗೂಲಿ ನೌಕರರು, ಸಾಧಾರಣ ಶಿಕ್ಷಣ ಪಡೆದವರು, 1 ಲಕ್ಷ ರೂ.ಗಳೊಳಗೆ ವಾರ್ಷಿಕ ಆದಾಯ ಇರುವವರಲ್ಲಿ ಆತ್ಮಹತ್ಯೆಯ ಪ್ರಮಾಣ ಹೆಚ್ಚಿದೆ. ಹೀಗಾಗಿ, ಆತ್ಮಹತ್ಯೆಗೂ ಬಡತನಕ್ಕೂ ನೇರ ಸಂಬಂಧ ಇದೆ ಎಂಬ ಅಂಶ ರಾಷ್ಟ್ರೀಯ ಅಪರಾಧ ದಾಖಲೆಗಳ ಕೇಂದ್ರ (ಎನ್‌ಸಿಆರ್‌ಬಿ)ದ 2018ನೇ ಸಾಲಿನ “ಭಾರತದಲ್ಲಿ ಆಕಸ್ಮಿಕ ಸಾವುಗಳು ಮತ್ತು ಆತ್ಮಹತ್ಯೆ’ ಎಂಬ ಶಿರೋನಾಮೆಯ ವರದಿಯಲ್ಲಿ ಉಲ್ಲೇಖಗೊಂಡಿದೆ.
ಮತ್ತೂಂದು ಗಮನಾರ್ಹ ಅಂಶವೆಂದರೆ ದೇಶದಲ್ಲಿ ಅತ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ಆತ್ಮಹತ್ಯೆ ನಡೆಯುತ್ತಿದ್ದ ಕ್ಷೇತ್ರವೆಂದರೆ ಕೃಷಿ. ಎನ್‌ಸಿಆರ್‌ಬಿ ಮಾಹಿತಿ ಪ್ರಕಾರ ಸತತ ಮೂರನೇ ವರ್ಷ ಈ ಕ್ಷೇತ್ರದಿಂದ ವರದಿಯಾದ ಆತ್ಮಹತ್ಯೆಗಳ ಸಂಖ್ಯೆ ಕಡಿಮೆ.
ಬಡತನಕ್ಕೆ ನಂಟು:
2018ನೇ ಸಾಲಿನಲ್ಲಿ 1,34,516 ಆತ್ಮಹತ್ಯೆ ಪ್ರಕರಣಗಳು ನಡೆದಿವೆ. ಈ ಪೈಕಿ ವಾರ್ಷಿಕ 1 ಲಕ್ಷ ರೂ.ಗಿಂತ ಕಡಿಮೆ ಆದಾಯ ಹೊಂದಿರುವವರು ಹೆಚ್ಚು. ಇದೇ ವ್ಯಾಪ್ತಿಯಲ್ಲಿ ಶಿಕ್ಷಣ ಪಡೆದವರ ಅಂಶದ ಲೆಕ್ಕಾಚಾರ ತೆಗೆದುಕೊಂಡರೆ, ಸಾಧಾರಣ ಶಿಕ್ಷಣ ಪಡೆದವರು ಮತ್ತು ದಿನಗೂಲಿ ನೌಕರರು ಆತ್ಮಹತ್ಯೆಗೆ ಶರಣಾಗುವವರ ಸಂಖ್ಯೆಯಲ್ಲಿ ಹೆಚ್ಚಿದ್ದಾರೆ ಎನ್ನುತ್ತಿದೆ ವರದಿ.
ಇದೇ ವೇಳೆ, 2018ರಲ್ಲಿ ದೇಶಾದ್ಯಂತ ಪ್ರತಿದಿನ ಸರಾಸರಿ 80 ಕೊಲೆಗಳು, 289 ಅಪಹರಣಗಳು ಮತ್ತು 91 ಅತ್ಯಾಚಾರ ಪ್ರಕರಣಗಳು ದಾಖಲಾಗಿವೆ.
ಕರ್ನಾಟಕಕ್ಕೆ 2ನೇ ಸ್ಥಾನ
ಇನ್ನು 2018ರಲ್ಲಿ ಕೃಷಿ ಕ್ಷೇತ್ರಕ್ಕೆ ಸಂಬಂಧಿಸಿದಂತೆ 10,349 ಆತ್ಮಹತ್ಯೆ ಪ್ರಕರಣಗಳು ದಾಖಲಾಗಿವೆ. ಈ ಪೈಕಿ 5,763 ಮಂದಿ ಬೆಳೆಗಾರರು ಮತ್ತು 4,586 ಮಂದಿ ಕೃಷಿ ಕಾರ್ಮಿಕರು. ಮಹಾರಾಷ್ಟ್ರ ಮತ್ತು ಕರ್ನಾಟಕ ರೈತರ ಆತ್ಮಹತ್ಯೆಯಲ್ಲಿ ಮೊದಲ ಎರಡು ಸ್ಥಾನಗಳಲ್ಲಿವೆ. ಅಂದರೆ ಈ ರಾಜ್ಯಗಳಲ್ಲಿ ಕ್ರಮವಾಗಿ 3,594 ಮತ್ತು 2,405 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಿಹಾರ, ಪಶ್ಚಿಮ ಬಂಗಾಳ, ಒಡಿಶಾಗಳಲ್ಲಿ ರೈತರು ಆತ್ಮಹತ್ಯೆಯನ್ನೇ ಮಾಡಿಕೊಂಡಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿಮ ಬಂಗಾಲ ಗವರ್ನರ್
Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್: ನದಿಗೆ ಬಿದ್ದು ಮೂವರ ಸಾವು
Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ
NCP Vs NCP: ಶರದ್ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್ ಬಣ
Maharashtra: ಉದ್ದವ್ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.