Delhi: ಪೈಂಟ್ ಕಾರ್ಖಾನೆಯಲ್ಲಿ ಭಾರಿ ಅಗ್ನಿ ಅನಾಹುತ: 11 ಮಂದಿ ಮೃತ್ಯು ಇಬ್ಬರು ನಾಪತ್ತೆ
Team Udayavani, Feb 16, 2024, 8:33 AM IST
ನವದೆಹಲಿ: ದೆಹಲಿಯ ಅಲಿಪುರದ ದಯಾಲ್‌ಪುರ ಕೈಗಾರಿಕಾ ಘಟಕದಲ್ಲಿ ಭಾರಿ ಅಗ್ನಿ ಅನಾಹುತ ಸಂಭವಿಸಿದ್ದು ಪರಿಣಾಮ 11 ಮಂದಿ ಮೃತಪಟ್ಟಿರುವುದಾಗಿ ವರದಿಯಾಗಿದೆ.
ಗುರುವಾರ ಸಂಜೆ ಸುಮಾರು 5.45 ರ ಹೊತ್ತಿಗೆ ಪೈಂಟ್ ಕಾರ್ಖಾನೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಘಟನೆ ಸಂಭವಿಸಿದೆ ಕೂಡಲೇ ಅಗ್ನಿ ಶಾಮಕ ಸಿಬ್ಬಂದಿಗಳಿಗೆ ಮಾಹಿತಿ ನೀಡಿದ್ದು ಕೂಡಲೇ ಸ್ಥಳಕ್ಕೆ ಬಂದ ತಂಡ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದೆ ಈ ವೇಳೆ ದೊಡ್ಡ ಪ್ರಮಾಣದಲ್ಲಿ ಬೆಂಕಿ ವ್ಯಾಪಿಸಿದ ಪರಿಣಾಮ ಕಾರ್ಖಾನೆಯ ಒಳಗಿದ್ದ ಸಿಬ್ಬಂದಿಗಳನ್ನು ಹೊರಗೆ ತರುವುದು ಹರಸಾಹಸದ ಕೆಲಸವಾಗಿದೆ ಇನ್ನೂ ಕೆಲವರು ಕಾರ್ಖಾನೆಯ ಒಳಗೆ ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು ಅಗ್ನಿ ಶಾಮಕ ಸಿಬಂದಿಗಳು ಶೋಧ ಕಾರ್ಯ ನಡೆಸುತ್ತಿದ್ದಾರೆ.
ಘಟನೆಯಲ್ಲಿ ಇದುವರೆಗೆ ಸುಮಾರು ಹನ್ನೊಂದು ಮಂದಿ ಮೃತಪಟ್ಟಿದ್ದು ಅಗ್ನಿಶಾಮಕ ಸಿಬಂದಿ ಸೇರಿ ಹಲವರು ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಮೃತರ ಗುರುತು ಪತ್ತೆ ಹಚ್ಚುವ ಕಾರ್ಯ ನಡೆಸಲಾಗುತ್ತಿದೆ, ಜೊತೆಗೆ ಕಾರ್ಖಾನೆಯ ಒಳಗೆ ಇನ್ನೂ ಇಬ್ಬರು ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು ಅವರನ್ನು ಪತ್ತೆ ಹಚ್ಚುವ ಕಾರ್ಯ ನಡೆಯುತ್ತಿದೆ ಎನ್ನಲಾಗಿದೆ.
ಘಟನಾ ಸ್ಥಳದಲ್ಲಿ ಸುಮಾರು ಹತ್ತಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು ಕಾರ್ಯ ನಿರ್ವಹಿಸುತ್ತಿದ್ದು ಪ್ರದೇಶ ತುಂಬಾ ದಟ್ಟ ಹೊಗೆಯಿಂದ ಆವರಿಸಿದೆ, ಅಲ್ಲದೆ ಮುಂಜಾಗ್ರತಾ ಕ್ರಮವಾಗಿ ಸುತ್ತ ಮುತ್ತಲ ಮನೆಗಳಲ್ಲಿದ್ದ ಜನರನ್ನು ಬೇರೆಡೆಗೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಗಾಯಗೊಂಡವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು ಬೆಂಕಿ ಅವಘಡಕ್ಕೆ ಕಾರಣ ಪತ್ತೆಹಚ್ಚಲು ತನಿಖಾ ತಂಡ ಕಾರ್ಯ ನಿರ್ವಹಿಸುತ್ತಿದೆ.
ಇದನ್ನೂ ಓದಿ: Daily Horoscope: ಸಜ್ಜನರ ಸೋಗಿನ ಗೋಮುಖ ವ್ಯಾಘ್ರರ ಬಗ್ಗೆ ಎಚ್ಚರ, ಆರೋಗ್ಯ ಉತ್ತಮ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
Mumbai; ಚುನಾವಣೆಗೆ ಏಕಾಂಗಿ ಸ್ಪರ್ಧೆ: ಉದ್ಧವ್ ಶಿವಸೇನೆ ಇಂಗಿತ!
Kota; ಮತ್ತೊಬ್ಬ ವಿದ್ಯಾರ್ಥಿ ಆತ್ಮಹ*ತ್ಯೆ: ವರ್ಷದ 17ನೇ ಕೇಸು
Ambedkar; ಅವಮಾನ ಖಂಡಿಸಿ ಕಾಂಗ್ರೆಸ್ ಆಂದೋಲನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.