ಲೋಕಸಮರ 2019; 110 ಮಹಿಳಾ ಅಭ್ಯರ್ಥಿಗಳ ವಿರುದ್ಧ ಕ್ರಿಮಿನಲ್ ಕೇಸ್! ADR
Team Udayavani, May 18, 2019, 11:55 AM IST
ನವದೆಹಲಿ: 2019ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ 110 ಮಹಿಳಾ ಅಭ್ಯರ್ಥಿಗಳು ತಮ್ಮ ವಿರುದ್ಧ ಕ್ರಿಮಿನಲ್ ಪ್ರಕರಣಗಳು ದಾಖಲಾಗಿರುವುದನ್ನು ಅಫಿಡವಿತ್ ನಲ್ಲಿ ಘೋಷಿಸಿಕೊಂಡಿದ್ದಾರೆ. ಇದರಲ್ಲಿ ಕೊಲೆ ಹಾಗೂ ಅತ್ಯಾಚಾರದಂತಹ ಗಂಭೀರ ಪ್ರಕರಣಗಳು ಸೇರಿವೆ.
ನ್ಯಾಶನಲ್ ಎಲೆಕ್ಸನ್ ವಾಚ್ (ಎನ್ ಇಡಬ್ಲ್ಯು ) ಮತ್ತು ಅಸೋಸಿಯೇಶನ್ ಫಾರ್ ಡೆಮೋಕ್ರಟಿಕ್ ರಿಫಾರ್ಮ್ಸ್ (ಎಡಿಆರ್) 724 ಮಹಿಳಾ ಅಭ್ಯರ್ಥಿಗಳ ಅಫಿಡವಿತ್ ನ ಮಾಹಿತಿಯನ್ನು ಆಧರಿಸಿ ಈ ವರದಿಯನ್ನು ತಯಾರಿಸಿದೆ. ಇದರಲ್ಲಿ ಪೂರ್ಣ ಮಾಹಿತಿ ಇಲ್ಲದ ಕಾರಣ ಎಂಟು ಮಂದಿ ಮಹಿಳಾ ಅಭ್ಯರ್ಥಿಗಳ ಅಫಿಡವಿತ್ ಅನ್ನು ವಿಶ್ಲೇಷಿಸಿಲ್ಲ ಎಂದು ವಿವರಿಸಿದೆ.
ವರದಿಯ ಪ್ರಕಾರ, 110 ಮಂದಿ ಮಹಿಳಾ ಅಭ್ಯರ್ಥಿಗಳು ಕ್ರಿಮಿನಲ್ ಪ್ರಕರಣ ದಾಖಲಾಗಿರುವುದನ್ನು ಘೋಷಿಸಿಕೊಂಡಿದ್ದಾರೆ. 78 ಅಭ್ಯರ್ಥಿಗಳು ಕೊಲೆ, ರೇಪ್, ಕೊಲೆಗೆ ಯತ್ನ ಸೇರಿದಂತೆ ಗಂಭೀರ ಆರೋಪಗಳು ತಮ್ಮ ವಿರುದ್ಧ ದಾಖಲಾಗಿರುವುದಾಗಿ ಅಫಿಡವಿತ್ ನಲ್ಲಿ ವಿವರಿಸಿದ್ದಾರೆ.
ನಾಲ್ಕು ಮಹಿಳಾ ಅಭ್ಯರ್ಥಿಗಳು ಕೊಲೆ(ಐಪಿಸಿ 302) ಪ್ರಕರಣ ದಾಖಲಾಗಿರುವುದಾಗಿ ಘೋಷಿಸಿಕೊಂಡಿದ್ದು, 16 ಮಂದಿ ಮಹಿಳಾ ಅಭ್ಯರ್ಥಿಗಳು ಕೊಲೆ ಯತ್ನ (ಐಪಿಸಿ 307)ದ ಪ್ರಕರಣ ದಾಖಲಾಗಿರುವುದಾಗಿ ಅಫಿಡವಿತ್ ನಲ್ಲಿ ಮಾಹಿತಿ ನೀಡಿದ್ದಾರೆ.
14 ಮಹಿಳಾ ಅಭ್ಯರ್ಥಿಗಳು ಮಹಿಳೆಯರ ಅನುಮತಿ ಇಲ್ಲದೇ ಗರ್ಭಪಾತ ನಡೆಸಿದ ಪ್ರಕರಣ ದಾಖಲಾಗಿರುವುದಾಗಿ ಘೋಷಿಸಿಕೊಂಡಿದ್ದಾರೆ. ಪ್ರಚೋದನಾಕಾರಿ ಭಾಷಣ ಮಾಡಿದ ಏಳು ಮಹಿಳಾ ಅಭ್ಯರ್ಥಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.
ಪ್ರಚೋದನಾಕಾರಿ ಭಾಷಣದಲ್ಲಿ ಪ್ರಕ್ಷವಾರು ದಾಖಲಾದ ಪ್ರಕರಣ; 54 ಮಹಿಳಾ ಅಭ್ಯರ್ಥಿಗಳಲ್ಲಿ 18 ಮಂದಿ ಕಾಂಗ್ರೆಸ್ ಅಭ್ಯರ್ಥಿಗಳ ವಿರುದ್ಧ ಪ್ರಕರಣ ದಾಖಲು, 53 ಮಂದಿ ಬಿಜೆಪಿ ಅಭ್ಯರ್ಥಿಗಳಲ್ಲಿ 18 ಮಂದಿ ವಿರುದ್ಧ ಪ್ರಕರಣ ದಾಖಲು. 24 ಮಂದಿ ಬಹುಜನ್ ಸಮಾಜವಾದಿ ಪಕ್ಷದ ಅಭ್ಯರ್ಥಿಗಳಲ್ಲಿ 2 ಮಹಿಳೆಯರ ವಿರುದ್ದ ಪ್ರಕರಣ ದಾಖಲಾಗಿದೆ, 23 ಟಿಎಂಸಿ ಅಭ್ಯರ್ಥಿಗಳಲ್ಲಿ 6 ಮಂದಿ, 222 ಪಕ್ಷೇತರ ಮಹಿಳಾ ಅಭ್ಯರ್ಥಿಗಳಲ್ಲಿ 22 ಮಂದಿ ವಿರುದ್ಧ ಪ್ರಚೋದನಾಕಾರಿ ಭಾಷಣದ ಪ್ರಕರಣ ದಾಖಲಾಗಿರುವುದಾಗಿ ಅಫಿಡವಿತ್ ನಲ್ಲಿ ಘೋಷಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!
ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ
ಶೀಘ್ರವೇ ದೇಶದ ಬುಲೆಟ್; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್ ಬುಲೆಟ್ ರೈಲು ಯೋಜನೆ
Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!
Enforcement Directorate: ಕ್ರಿಮಿನಲ್ ಪಿತೂರಿಯಡಿ ಮಾತ್ರವೇ ಅಕ್ರಮ ಹಣ ವರ್ಗ ಕೇಸು ಬೇಡ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.