11.23 ಕೋ. ರೂ. ಮೌಲ್ಯದ ನಕಲಿ ನೋಟು ವಶಕ್ಕೆ
Team Udayavani, Jul 19, 2017, 3:40 AM IST
ಹೊಸದಿಲ್ಲಿ: ಕಪ್ಪುಹಣ ವಿರುದ್ಧ ಹೋರಾಟ ನಡೆಸುವ ನಿಟ್ಟಿನಲ್ಲಿ 2016ರ ನ.8ರಂದು ನೋಟು ಅಮಾನ್ಯ ಘೋಷಣೆ ಮಾಡಿದ ಬಳಿಕ 11.23 ಕೋಟಿ ರೂ.ನಕಲಿ ನೋಟುಗಳನ್ನು ವಶಪಡಿಸಿಕೊಳ್ಳಲಾಗಿದೆ. ಲೋಕಸಭೆಗೆ ಲಿಖೀತ ಉತ್ತರ ನೀಡಿದ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ 29 ರಾಜ್ಯಗಳಲ್ಲಿ ನಕಲಿ ನೋಟುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದರು. ಇತ್ತೀಚೆಗಷ್ಟೇ ಆರ್‌ಬಿಐ ಬಿಡುಗಡೆ ಮಾಡಿರುವ ಆ್ಯಪ್‌ನಲ್ಲಿ 500 ರೂ. ಮತ್ತು 2 ಸಾವಿರ ರೂ. ಹೊಸ ನೋಟುಗಳ ಭದ್ರತಾ ವಿವರಗಳನ್ನು ಗಮನಿಸಲು ಅವಕಾಶ ಇದೆ ಎಂದು ಹೇಳಿದ್ದಾರೆ. ರಾಷ್ಟ್ರೀಯ ಅಪರಾಧ ದಾಖಲೆಗಳ ಕೇಂದ್ರ ನೀಡಿರುವ ವರದಿ ಪ್ರಕಾರ ದೇಶದಲ್ಲಿ 1,57,797 ನಕಲಿ ನೋಟುಗಳನ್ನು ವಶಪಡಿಸಿಕೊಳ್ಳಲಾಗಿದೆ. ಅವುಗಳ ಮೌಲ್ಯವೇ 11.23 ಕೋಟಿ ರೂ. ಎಂದು ಜೇಟ್ಲಿ ಹೇಳಿದ್ದಾರೆ.
ಲೂಟಿಯಿಂದ ಬ್ಯಾಂಕುಗಳಿಗೆ 180 ಕೋಟಿ ರೂ. ನಷ್ಟ: ಮೂರು ವರ್ಷಗಳ ಅವಧಿಯಲ್ಲಿ ದೇಶದ 51 ಬ್ಯಾಂಕ್‌ಗಳಲ್ಲಿ ನಡೆದ ದರೋಡೆ, ಲೂಟಿ, ಕಳ್ಳತನ ಪ್ರಕರಣಗಳಿಂದ 180 ಕೋಟಿ ರೂ. ನಷ್ಟವಾಗಿದೆ. ಈ ರೀತಿಯ 2,632 ಪ್ರಕರಣ ವರದಿಯಾಗಿದ್ದು, ಎಸ್‌ಬಿಐಗೆ 30 ಕೋಟಿ ರೂ., ಬ್ಯಾಂಕ್ ಆಫ್ ಬರೋಡಾಗೆ 13 ಕೋಟಿ ರೂ. ನಷ್ಟವಾಗಿದೆ ಎಂದು ಹಣಕಾಸು ಖಾತೆ ಸಹಾಯಕ ಸಚಿವ ಸಂತೋಷ್ ಕುಮಾರ್ ಗಂಗ್ವಾರ್ ಅವರು ರಾಜ್ಯಸಭೆಗೆ ನೀಡಿದ ಲಿಖೀತ ಉತ್ತರದಲ್ಲಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Junior Doctor: ಮಾತನಾಡಲು ಕರೆಸಿ ಕಿರಿಯ ವೈದ್ಯೆ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…
Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್
540 ಅಡಿ ಆಳದ ಬೋರ್ವೆಲ್ಗೆ ಬಿದ್ದ ಯುವತಿ: ಯುವಕನ ಜತೆ ಮನಸ್ತಾಪದಿಂದ ಆತ್ಮಹತ್ಯೆಗೆ ಯತ್ನ?
Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ
ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್ನಲ್ಲಿ 7.1 ತೀವ್ರತೆ ಭೂಕಂಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.