ಜೀಪಿಗೆ ಟ್ರ್ಯಾಕ್ಟರ್ ಟ್ರಾಲಿ ಢಿಕ್ಕಿ: ಒಂದೇ ಕುಟುಂಬದ 12 ಮಂದಿ ಸಾವು
Team Udayavani, Jun 21, 2018, 12:00 PM IST
ಮೊರೆನಾ, ಮಧ್ಯಪ್ರದೇಶ : ಇಂದು ಬೆಳಗ್ಗೆ ಟ್ರ್ಯಾಕ್ಟರ್ ಟ್ರಾಲಿಯೊಂದು ಜೀಪಿಗೆ ಢಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ 12 ಮಂದಿ ಮಡಿದು ಇತರ ಎಂಟು ಮಂದಿ ಗಾಯಗೊಂಡ ದಾರುಣ ಘಟನೆ ಈ ಜಿಲ್ಲೆಯಲ್ಲಿ ನಡೆದಿದೆ. ಜೀಪಿನಲ್ಲಿದ್ದವರು ಈಚೆಗೆ ಅಗಲಿದ ತಮ್ಮ ಕುಟುಂಬದ ಸದಸ್ಯರೋರ್ವರ ಶ್ರದ್ಧಾಂಜಲಿ ಕಾರ್ಯಕ್ರಮಕ್ಕೆ ಹೋಗುತ್ತಿದ್ದರು
ಜೀಪಿನಲ್ಲಿ ಒಂದೇ ಕುಟುಂಬದ ಸುಮಾರು ಇಪ್ಪತ್ತು ಮಂದಿ ಪ್ರಯಾಣಿಸುತ್ತಿದ್ದರು. ಹಾಗಾಗಿ ಅದು ಓವರ್‌ಲೋಡ್ ಆಗಿತ್ತು. ಈ ಜೀಪಿಗೆ ಬೆಳಗ್ಗೆ 6 ಗಂಟೆಯ ಸುಮಾರಿಗೆ ಗಂಜ್ರಾಮ್‌ಪುರ ಗ್ರಾಮಕ್ಕೆ ಸಮೀಪ ಕ್ರಾಸ್ ರೋಡ್ ಒಂದರಲ್ಲಿ ಉಸುಕು ತುಂಬಿದ ಟ್ರ್ಯಾಕ್ಟರ್ ಟ್ರಾಲಿ ಢಿಕ್ಕಿ ಹೊಡೆಯಿತು ಎಂದು ಮೊರೆನಾ ಎಸ್‌ಪಿ ಅಮಿತ್ ಸಾಂಗಿ ಹೇಳಿದರು.
ಅಪಘಾತದ ಭೀಕರತೆ ಎಷ್ಟಿತ್ತೆಂದರೆ 12 ಮಂದಿ ಸ್ಥಳದಲ್ಲೇ ಮೃತಪಟ್ಟರು. ಗಾಯಾಳುಗಳಾದ ಇತರ 8 ಮಂದಿಯನ್ನು ಒಡನೆಯೇ ಜಿಲ್ಲಾ ಸರಕಾರಿ ಅಸ್ಪತ್ರೆಗೆ ಸೇರಿಸಲಾಯಿತು.
ಮೃತಪಟ್ಟವರೆಲ್ಲರೂ ಗ್ವಾಲಿಯರ್ ಜಿಲ್ಲೆಯವರಾಗಿದ್ದಾರೆ. ಅವರು ಗುರ್ಗಾನ್ ಗ್ರಾಮಕ್ಕೆ ಹೋಗುತ್ತಿದ್ದರು.
ರಾಷ್ಟ್ರೀಯ ಚಂಬಲ್ ಸ್ಯಾಂಕ್‌ಚುವರಿಯಿಂದ ಅಕ್ರಮವಾಗಿ ಉಸುಕು ತುಂಬಿಕೊಂಡು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಟ್ರಾಲಿ ಚಾಲಕ ಅಪಘಾತ ನಡೆದೊಡನೆಯೇ ಪರಾರಿಯಾಗಿದ್ದಾನೆ.
ಪೊಲೀಸರು ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar Remarks: ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್ ಶಾ
Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.