ಕೊರೊನಾ ಕಂಟಕ: ಇರಾನ್ ನಿಂದ 120 ಭಾರತೀಯರನ್ನು ಕರೆತರಲಿರುವ ಏರ್ ಇಂಡಿಯಾ ವಿಮಾನ
Team Udayavani, Mar 13, 2020, 9:00 AM IST
ನವದೆಹಲಿ: ಕೊರೊನಾಘಾತಕ್ಕೆ ಸಿಲುಕಿರುವ ಇರಾನ್ ನಿಂದ 120 ಭಾರತೀಯರು ಇಂದು(ಶುಕ್ರವಾರ) ಏರ್ ಇಂಡಿಯಾ ವಿಮಾನದ ಮೂಲಕ ಭಾರತಕ್ಕೆ ಮರಳಲಿದ್ದಾರೆ. ಇವರನ್ನು ರಾಜಸ್ಥಾನದ ಜೈಸಲ್ಮೇರ್ ನಲ್ಲಿ ನಿರ್ಮಿಸಲಾಗಿರುವ ಸೇನಾ ಕೇಂದ್ರದ ತೀವ್ರ ನಿಗಾ ಘಟಕದಲ್ಲಿ ಇರಿಸಲಾಗುವುದು ಎಂದು ಮಾಧ್ಯಮದ ವರದಿ ತಿಳಿಸಿದೆ.
120 ಭಾರತೀಯರನ್ನು ವಿಮಾನ ನಿಲ್ದಾಣದಲ್ಲಿ ಕೂಡ ಪರೀಕ್ಷೆಗೆ ಒಳಪಡಿಸಲಾಗುವುದು. ನಂತರ ಭಾರತೀಯ ಸೇನೆಯ ಜೈಸಲ್ಮೇರ್ ಕೇಂದ್ರದಲ್ಲಿ ತೀವ್ರ ನಿಗಾ ಘಟಕದಲ್ಲಿ ಇರಿಸಲಾಗುವುದು ಎಂದು ರಕ್ಷಣಾ ವಕ್ತಾರ ಕರ್ನಲ್ ಸೋಂಬಿತ್ ಘೋಷ್ ತಿಳಿಸಿದ್ದಾರೆ.
ಮಾರ್ಚ್ 14 ರಂದು ಉಳಿದ 250 ಜನರು ಇರಾನ್ ನಿಂದ ಭಾರತಕ್ಕೆ ಕರೆತರಲಾಗುದು. ಇವರನ್ನು ಕೂಡ ಜೈಸಲ್ಮೇರ್ ಕೇಂದ್ರದಲ್ಲೆ ತಪಾಸಣೆಗೊಳಪಡಿಸಲಾಗುವುದು ಎಂದು ವರದಿ ತಿಳಿಸಿದೆ
ಭಾರತದ ರಕ್ಷಣಾ ಸಚಿವಾಲಯ ಈಗಾಗಲೇ ಕೊರೊನಾ ಮಹಾಮಾರಿ ಆವರಿಸಿರುವ ದೇಶಗಳಿಂದ ಭಾರತೀಯರನ್ನು ಸುರಕ್ಷಿತವಾಗಿ ಕರೆತರುವ ಪ್ರಯತ್ನದಲ್ಲಿದೆ. ಮಾತ್ರವಲ್ಲದೆ ಇವರ ರಕ್ಷಣೆಗಾಗಿ ಜೋಧ್ ಪುರ್, ಜಾನ್ಸಿ, ಕೊಲ್ಕತ್ತಾ, ಚೆನ್ನೈ, ಸೂರತ್ ಘಢ್, ಮುಂತಾದ ಕಡೆ ವಿಶೇಷ ಕೇಂದ್ರಗಳನ್ನು ತೆರಯಲಾಗಿದೆ.
ವಿದೇಶಾಂಗ ಸಚಿವ ಎಸ್ ಜೈಶಂಕರ್ ಈ ಕುರಿತು ಪ್ರತಿಕ್ರಿಯಿಸಿ, ಇರಾನ್ ನಿಂದ ಕರೆತರಲಾಗುವ ಭಾರತೀಯರ ಸುರಕ್ಷತೆಗೆ ಹೆಚ್ಚಿನ ಗಮನ ಕೊಡಲಾಗುವುದು. ಮಹರಾಷ್ಟ್ರ ಮತ್ತು ಜಮ್ಮು ಕಾಶ್ಮೀರದ 1100 ಯಾತ್ರಿಗಳು ಸೇರಿದಂತೆ ಇರಾನ್ ನಲ್ಲಿ 6,000 ಭಾರತೀಯರಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttarakhand: ಕಂದಕಕ್ಕೆ ಬಿದ್ದ ಬಸ್ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ
Uttar Pradesh: 16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾ*ಚಾರ; ಇಬ್ಬರ ಬಂಧನ
Atul Subhash Case: ಮೊಮ್ಮಗನನ್ನು ನೀಡದಿದ್ದರೆ ಆತ್ಮಹತ್ಯೆ; ಅತುಲ್ ತಂದೆ
Delhi: ನಕಲಿ ಕೇಸ್ ನಲ್ಲಿ ಸಿಎಂ ಅತಿಶಿ ಬಂಧನಕ್ಕೆ ಇ.ಡಿ, ಸಿಬಿಐಗೆ ಬಿಜೆಪಿ ಆದೇಶ: ಕೇಜ್ರಿ!
Jammu and Kashmir: ಕಂದಕಕ್ಕೆ ಉರುಳಿದ ಸೇನಾ ವಾಹನ; ಕುಂದಾಪುರದ ಯೋಧ ಅನೂಪ್ ಹುತಾತ್ಮ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.