ಸರ್ದಾರ್ ಪಟೇಲ್ ಪ್ರತಿಮೆ ವೀಕ್ಷಿಸಿದವರು 1.28 ಲಕ್ಷ
Team Udayavani, Nov 12, 2018, 8:25 AM IST
ವಡೋದರಾ: ಗುಜರಾತ್ನ ನರ್ಮದಾ ಜಿಲ್ಲೆಯಲ್ಲಿ ನಿರ್ಮಾಣಗೊಂಡಿರುವ ಸರ್ದಾರ್ ವಲ್ಲಭ ಭಾಯ್ ಪಟೇಲ್ ಅವರ ಪ್ರತಿಮೆಯನ್ನು ಭಾನುವಾರದವರೆಗೆ 1.28 ಲಕ್ಷ ಮಂದಿ ಪ್ರವಾಸಿಗರು ವೀಕ್ಷಿಸಿದ್ದಾರೆ. ಅ.31ರಂದು 182 ಮೀಟರ್ ಎತ್ತರದ ವಿಶ್ವದ ಅತ್ಯಂತ ದೊಡ್ಡ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ್ದರು. ನ.1ರಿಂದ ಅದು ಸಾರ್ವಜನಿಕರ ವೀಕ್ಷಣೆಗೆ ಮುಕ್ತವಾಗಿತ್ತು. ನ.10 ಮತ್ತು ನ.11 (ಶನಿವಾರ ಮತ್ತು ಭಾನುವಾರ)ರಂದು ಸುಮಾರು 50 ಸಾವಿರ ಮಂದಿ ಭೇಟಿ ನೀಡಿದ್ದಾರೆ. ನ.1ರ ಪ್ರವಾಸಿಗರ ಲೆಕ್ಕ ತೆಗೆದುಕೊಂಡರೆ ಒಟ್ಟು 1.28 ಲಕ್ಷ ಮಂದಿ ಭೇಟಿ ನೀಡಿದ್ದಾರೆ ಎಂದು ಸರ್ದಾರ್ ಸರೋವರ ನರ್ಮದಾ ನಿಗಮ್ ಲಿಮಿಟೆಡ್ (ಎಸ್ಎಸ್ಎನ್ಎಲ್) ಸೂಪರಿಟೆಂಡಿಂಗ್ ಎಂಜಿನಿಯರ್ ಆರ್.ಜಿ. ಕೌನ್ಗೋ ತಿಳಿಸಿದ್ದಾರೆ.
ಭಾನುವಾರ 24 ಸಾವಿರ, ಶನಿವಾರ 27 ಸಾವಿರ ಮಂದಿ ಭೇಟಿ ನೀಡಿದ್ದಾರೆ ಎಂದು ಕೌನ್ಗೋ ತಿಳಿಸಿದ್ದಾರೆ. ಇದೇ ವೇಳೆ ಗುಜರಾತ್ ಪ್ರವಾಸೋದ್ಯಮ ಖಾತೆ ಪ್ರಧಾನ ಕಾರ್ಯದರ್ಶಿ ಎಸ್.ಜೆ.ಹೈದರ್ ಮಾತನಾಡಿ ಮೊದಲ ದಿನ 10 ಸಾವಿರ ಮಂದಿ ಪ್ರವಾಸಿಗರು ಭೇಟಿ ನೀಡಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Stock market; ಲಾಭದ ಆಸೆಗೆ 11 ಕೋಟಿ ರೂ. ಕಳಕೊಂಡ್ರು!
Panchayat Raj University; ಇನ್ನು ಸಿಎಂ ಕುಲಾಧಿಪತಿ!: ರಾಜ್ಯಪಾಲರ ಅಧಿಕಾರಕ್ಕೆ ಕೊಕ್
America:ಭಾರತೀಯ ಮೂಲದ ವೈದ್ಯರಿಗೆ 17 ಕೋಟಿ ರೂ. ದಂಡ
UGC; ಪದವಿ ಕಲಿಕೆ ಅವಧಿ ನಿರ್ಧಾರ ಆಯ್ಕೆ ಶೀಘ್ರ: ಚೇರ್ಮನ್ ಹೇಳಿದ್ದೇನು?
Bangladesh; ಚಿನ್ಮಯಿ ಕೃಷ್ಣದಾಸ್ಗೂ ನಮಗೂ ಸಂಬಂಧವಿಲ್ಲ: ಇಸ್ಕಾನ್ ಸ್ಪಷ್ಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.