Electrocuted: ರಥೋತ್ಸವದ ವೇಳೆ ಅವಘಡ… ವಿದ್ಯುತ್ ತಂತಿ ಸ್ಪರ್ಶಿಸಿ 13 ಮಕ್ಕಳಿಗೆ ಗಾಯ
Team Udayavani, Apr 11, 2024, 1:52 PM IST
ಆಂಧ್ರಪ್ರದೇಶ: ಯುಗಾದಿ ಉತ್ಸವದ ಆಚರಣೆಯ ವೇಳೆ ರಥವೊಂದನ್ನು ಎಳೆಯುತ್ತಿದ್ದ ಸಂದರ್ಭ ರಥದ ತುದಿ ವಿದ್ಯುತ್ ತಂತಿಗೆ ತಗುಲಿದ ಪರಿಣಾಮ ಕನಿಷ್ಠ 13 ಮಕ್ಕಳು ಗಾಯಗೊಂಡಿರುವ ಘಟನೆ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಚಿನ್ನ ಟೇಕೂರ್ ಗ್ರಾಮದಲ್ಲಿ ಗುರುವಾರ ಸಂಭವಿಸಿದೆ.
ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ಇಲ್ಲಿನ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ರಥೋತ್ಸವ ನಡೆದಿತ್ತು ಈ ವೇಳೆ ರಥವನ್ನು ಎಳೆದುಕೊಂಡು ಸಾಗುವ ವೇಳೆ ಈ ದುರ್ಘಟನೆ ಸಂಭವಿಸಿದೆ.
ಕರ್ನೂಲ್ ಗ್ರಾಮಾಂತರ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್‌ಪೆಕ್ಟರ್ ಕಿರಣ್ ಕುಮಾರ್ ಮಾತನಾಡಿ ರಥೋತ್ಸವ ಸಂದರ್ಭ ನಡೆದ ಘಟನೆಯಲ್ಲಿ ಕನಿಷ್ಠ ಹದಿಮೂರು ಮಂದಿ ಮಕ್ಕಳು ಗಾಯಗೊಂಡಿದ್ದು ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ ಎಂದು ಹೇಳಿದ್ದಾರೆ.
ವೈಎಸ್‌ಆರ್‌ಸಿಪಿ ಮುಖಂಡ ಮತ್ತು ಪಾಣ್ಯಂ ಶಾಸಕ ಕಟಸಾನಿ ರಾಮಭೂಪಾಲ್ ರೆಡ್ಡಿ ಮತ್ತು ನಂದ್ಯಾಲ್ ಟಿಡಿಪಿ ಅಭ್ಯರ್ಥಿ ಬೈರೆಡ್ಡಿ ಶಬರಿ ಆಸ್ಪತ್ರೆಗೆ ಭೇಟಿ ನೀಡಿ ಗಾಯಗೊಂಡ ಮಕ್ಕಳ ಅರೋಗ್ಯ ವಿಚಾರಿಸಿದರು.
ಇದನ್ನೂ ಓದಿ: Davanagere ಪಕ್ಷಾಂತರ ಪರ್ವ; ಬಿಜೆಪಿ ಸೇರಿದ ರಮೇಶ್, ಕಾಂಗ್ರೆಸ್ ಸೇರಿದ ವಾಗೀಶ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್ ಜೈಲಿಗೆ
Road Project: ಶಿರಾಡಿ ಘಾಟ್ ಸುರಂಗ ಯೋಜನೆಗೆ ಡಿಪಿಆರ್ ರಚಿಸಿ: ಕೇಂದ್ರ ಸೂಚನೆ
Hosur ವಿಮಾನ ನಿಲ್ದಾಣಕ್ಕೆ 2 ಸ್ಥಳ ನಿಗದಿಪಡಿಸಿದ ತಮಿಳುನಾಡು
GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.