Tragedy: ಭೀಕರ ರಸ್ತೆ ಅಪಘಾತದಲ್ಲಿ ಹೊತ್ತಿ ಉರಿದ ಬಸ್… 13 ಮಂದಿ ಸಜೀವ ದಹನ
Team Udayavani, Dec 28, 2023, 8:49 AM IST
ಮಧ್ಯಪ್ರದೇಶ: ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ಸೊಂದು ಟ್ರಕ್ ಗೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡ ಪರಿಣಾಮ ಬಸ್ಸಿನಲ್ಲಿದ್ದ ಕನಿಷ್ಠ 13 ಮಂದಿ ಸಜೀವ ದಹನಗೊಂಡ ಘಟನೆ ಮಧ್ಯಪ್ರದೇಶದ ಗುನಾದಲ್ಲಿ ಬುಧವಾರ ರಾತ್ರಿ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಗುನಾ-ಆರೋನ್ ರಸ್ತೆಯಲ್ಲಿ ಈ ಅವಘಡ ಸಂಭವಿಸಿದ್ದು ಅಪಘಾತದಲ್ಲಿ ಹದಿನೇಳು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗಳಿಗೆ ರವಾನಿಸಲಾಗಿದೆ.
ಗುನಾ ಜಿಲ್ಲಾಧಿಕಾರಿ ತರುಣ್ ರಾಠಿ ಸಾವಿನ ಸಂಖ್ಯೆಯನ್ನು ಖಚಿತಪಡಿಸಿದ್ದು ಜೊತೆಗೆ ಗಾಯಗೊಂಡವರು ಅಪಾಯದಿಂದ ಪಾರಾಗಿದ್ದಾರೆ ಎಂದು ಹೇಳಿದ್ದಾರೆ.
ಮೃತದೇಹಗಳು ಗುರುತಿಸಲಾಗದಷ್ಟು ಸುಟ್ಟು ಕರಕಲಾಗಿದ್ದು, ಅವುಗಳನ್ನು ಗುರುತಿಸಲು ಡಿಎನ್‌ಎ ಪರೀಕ್ಷೆ ನಡೆಸಲಾಗುವುದು ಎಂದು ಅದಿಕಾರಿಗಳು ಹೇಳಿದ್ದಾರೆ.
ಅಪಘಾತದ ಸ್ಥಳದಿಂದ ಎಲ್ಲಾ ದೇಹಗಳನ್ನು ಹೊರತೆಗೆಯಲಾಗಿದ್ದು ಮೃತದೇಹಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ ಎನ್ನಲಾಗಿದೆ.
ಘಟನೆಯ ಸಮಯದಲ್ಲಿ ಬಸ್‌ನಲ್ಲಿ ಸುಮಾರು 30 ಪ್ರಯಾಣಿಕರಿದ್ದರು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ. ಅವರಲ್ಲಿ ನಾಲ್ವರು ಬಸ್ಸಿನಿಂದ ಜಿಗಿದು ಪಾರಾಗಿದ್ದಾರೆ ಎಂದು ಹೇಳಿದ್ದಾರೆ.
ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಘಟನೆಯ ತನಿಖೆಗೆ ಆದೇಶಿಸಿದ್ದು ಮತ್ತು ಅಪಘಾತದಲ್ಲಿ ಮೃತಪಟ್ಟ ಕುಟುಂಬಕ್ಕೆ ತಲಾ 4 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ ತಲಾ 50,000 ರೂಪಾಯಿಗಳನ್ನು ಘೋಷಿಸಿದ್ದಾರೆ.
ಇದನ್ನೂ ಓದಿ: Ranbir Kapoor: ಧಾರ್ಮಿಕ ಭಾವನೆಗಳಿಗೆ ಧಕ್ಕೆ, ಬಾಲಿವುಡ್ ನಟ ರಣಬೀರ್ ಕಪೂರ್ʼ ವಿರುದ್ಧ ದೂರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶೋರೂಮ್ ನಿಂದ ಕದ್ದು ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಕೋಟಿ ಮೌಲ್ಯದ ಐಫೋನ್ ವಶ
Panaji: ಮಣಿರತ್ನಂರ ಕ್ಯಾಮೆರಾ ಕಣ್ಣು ಹಂಪಿ ಕಡೆಗೆ ?
Jharkhand Polls: ಬುಡಕಟ್ಟು ರಾಜ್ಯದಲ್ಲಿ ಅಧಿಕಾರದತ್ತ ಇಂಡಿಯಾ ಒಕ್ಕೂಟ; ಬಿಜೆಪಿಗೆ ಹಿನ್ನಡೆ
Maharashtra Results 2024: ಮಾಹಾಯುತಿಗೆ ಭರ್ಜರಿ ಜನಮನ್ನಣೆ, ಮಹಾವಿಕಾಸ್ ಅಘಾಡಿಗೆ ಮುಖಭಂಗ
Maharashtra: ಫಲಿತಾಂಶಕ್ಕೂ ಮೊದಲೇ ರಾರಾಜಿಸುತ್ತಿದೆ ಅಜಿತ್ ಪವಾರ್ ಗೆಲುವಿನ ಬ್ಯಾನರ್
MUST WATCH
ಹೊಸ ಸೇರ್ಪಡೆ
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Bengaluru: ಠಾಣೆಯಲ್ಲಿ ಪೊಲೀಸ್ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್
Karnataka By Poll Results: ಜೆಡಿಎಸ್ ಅಂತಿಮ ದಿನ ಎಣಿಸತೊಡಗಿದೆ: ಸಿ.ಪಿ.ಯೋಗೇಶ್ವರ್
Bengaluru: ಹನಿಟ್ರ್ಯಾಪ್: ಪ್ರೊಫೆಸರ್‌ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ
By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.