Delhi; ಸರಕಾರದ ಶೆಲ್ಟರ್ ಹೋಮ್‌ನಲ್ಲಿ 20 ದಿನಗಳಲ್ಲಿ 14 ಮಂದಿ ನಿಗೂಢ ಸಾವು !!

ಆಮ್ ಆದ್ಮಿ ಪಕ್ಷ ಮತ್ತು ಬಿಜೆಪಿ ನಡುವೆ ಮತ್ತೊಂದು ರಾಜಕೀಯ ಸಮರ

Team Udayavani, Aug 2, 2024, 6:04 PM IST

1-delhi

ಹೊಸದಿಲ್ಲಿ : ದೆಹಲಿ ಸರ್ಕಾರ ನಡೆಸುತ್ತಿರುವ ವಿಶೇಷಚೇತನರ ಆಶ್ರಯಧಾಮದಲ್ಲಿ 14 ಮಂದಿ ನಿಗೂಢವಾಗಿ ಸಾವನ್ನಪ್ಪಿದ್ದಾರೆ ಎಂದು ಉಪ ವಿಭಾಗೀಯ ಮ್ಯಾಜಿಸ್ಟ್ರೇಟ್ ತನಿಖೆಯಿಂದ ತಿಳಿದುಬಂದಿದೆ.ರೋಹಿಣಿಯಲ್ಲಿರುವ ‘ಆಶಾ ಕಿರಣ್’ ಆಶ್ರಯ ಮನೆಯಲ್ಲಿ ಜನವರಿಯಿಂದ 27 ಸಾವುಗಳು ವರದಿಯಾಗಿವೆ. ನಿರ್ಲಕ್ಷ್ಯ ಮತ್ತು ಕಳಪೆ ನಿರ್ವಹಣೆ ಮಾಡಲಾಗಿದೆ ಎಂದು ಬಿಜೆಪಿ ಆರೋಪಿಸಿದ್ದು ಇನ್ನೊಂದು ರಾಜಕೀಯ ಸಮರಕ್ಕೆ ಕಾರಣವಾಗಿದೆ.

ಪ್ರಾಥಮಿಕ ವರದಿಗಳ ಪ್ರಕಾರ, ಮೃತರಲ್ಲಿ 14 ವರ್ಷದ ಅಪ್ರಾಪ್ತ ವಯಸ್ಕ, ಉಳಿದ 13 ಮಂದಿ 20 ವರ್ಷಕ್ಕಿಂತ ಮೇಲ್ಪಟ್ಟವರು. ಜುಲೈ 15 ಮತ್ತು 31 ರ ನಡುವೆ 13 ಮಂದಿ ಸಾವನ್ನಪ್ಪಿದ್ದು, 8 ಮಹಿಳೆಯರು ಮತ್ತು 5 ಪುರುಷರು ಸೇರಿದ್ದಾರೆ ಜುಲೈ 1 ಮತ್ತು 15 ರ ನಡುವೆ ಒಬ್ಬರು ಸಾವನ್ನಪ್ಪಿದ್ದರು ಎಂದು ತಿಳಿದು ಬಂದಿದೆ.

ಆಶಾಕಿರಣ್ ಆಶ್ರಯ ಮನೆಯಲ್ಲಿ ಸಾವಿಗೆ ಕಾರಣ ಇನ್ನೂ ತಿಳಿದುಬಂದಿಲ್ಲ. ಸಾವಿನ ಸಂಖ್ಯೆ ಕಳೆದ ವರ್ಷಕ್ಕಿಂತ ಹೆಚ್ಚು ಎಂದು ಗಮನಿಸಿದ SDM, ಮರಣೋತ್ತರ ಪರೀಕ್ಷೆಯ ವರದಿಗಳ ನಂತರ ಸಾವಿನ ನಿಜವಾದ ಕಾರಣ ತಿಳಿಯಲಿದೆ ಎಂದು ಹೇಳಿದ್ದಾರೆ. SDM ವರದಿಯು ಕೈದಿಗಳಿಗೆ ನೀಡುತ್ತಿರುವ ಕುಡಿಯುವ ನೀರಿನ ಗುಣಮಟ್ಟದ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ರಾಷ್ಟ್ರೀಯ ಮಹಿಳಾ ಆಯೋಗ (NCW) ನಿರ್ಲಕ್ಷ್ಯಕ್ಕಾಗಿ ಆಮ್ ಆದ್ಮಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿ ಸತ್ಯಶೋಧನಾ ತಂಡವನ್ನು ಶೆಲ್ಟರ್ ಹೋಮ್‌ ಗೆ ಕಳುಹಿಸಿದ್ದಾರೆ.

ದೆಹಲಿ ಸರ್ಕಾರ ನಡೆಸುತ್ತಿರುವ ಆಶಾ ಕಿರಣ್ ಆಶ್ರಯ ಮನೆ ಎಲ್ಲರ ಭರವಸೆ ಕಳೆದುಕೊಂಡಿದ್ದು ಜನರು ಅದರಲ್ಲಿ ನರಳುತ್ತಿದ್ದಾರೆ ಮತ್ತು ಸಾಯುತ್ತಿದ್ದಾರೆ. ದೆಹಲಿ ಸರ್ಕಾರವು ಏನನ್ನೂ ಮಾಡುತ್ತಿಲ್ಲ, ವಿಚಾರಣೆಗೆ ನಮ್ಮ ತಂಡವನ್ನು ಕಳುಹಿಸಲಾಗಿದೆ” ಎಂದು NCW ಅಧ್ಯಕ್ಷೆ ರೇಖಾ ಶರ್ಮ ಹೇಳಿದ್ದಾರೆ.

ದೆಹಲಿ ಸಚಿವೆ ಅತಿಶಿ, ಸಾವಿನ ಸಂಖ್ಯೆಯ ಬಗ್ಗೆ ಭಿನ್ನಾಭಿಪ್ರಾಯ ವ್ಯಕ್ತಪಡಿಸಿದ್ದು, ಮ್ಯಾಜಿಸ್ಟ್ರೇಟ್ ತನಿಖೆಯನ್ನು ಪ್ರಾರಂಭಿಸಲು ಮತ್ತು 48 ಗಂಟೆಗಳಲ್ಲಿ ವರದಿಯನ್ನು ಸಲ್ಲಿಸುವಂತೆ ಕಂದಾಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಸೂಚಿಸಿದ್ದಾರೆ. ಜನವರಿ 2024 ರಿಂದ ಆಶ್ರಯ ಮನೆಯಲ್ಲಿ 14 ಸಾವುಗಳು ಸಂಭವಿಸಿವೆ ಎಂದು ಅತಿಶಿ ಹೇಳಿದ್ದಾರೆ.

ನಿರ್ಲಕ್ಷ್ಯದಿಂದ ಸಾವಿಗೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳಲು ಶಿಫಾರಸು ಮಾಡುವಂತೆ ಸಚಿವೆ ಕೋರಿದ್ದಾರೆ. ಭವಿಷ್ಯದಲ್ಲಿ ಇಂತಹ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚನೆ ನೀಡಿದ್ದಾರೆ.

ನಿರ್ಲಕ್ಷ್ಯದಿಂದ ಯಾವುದೇ ಸಾವು ಸಂಭವಿಸಿದ್ದರೆ, ಅದರಲ್ಲಿ ಭಾಗಿಯಾಗಿರುವ ವ್ಯಕ್ತಿಯನ್ನು ಸುಮ್ಮನೆ ಬಿಡುವುದಿಲ್ಲ ಎಂದು ನಾನು ದೆಹಲಿಯ ಜನರಿಗೆ ಭರವಸೆ ನೀಡುತ್ತೇನೆ.ನಾವು ಮರಣೋತ್ತರ ಪರೀಕ್ಷೆಗಳ ವರದಿಗಾಗಿ ಕಾಯುತ್ತಿದ್ದೇವೆ ಮತ್ತು 24 ಗಂಟೆಗಳ ನಂತರ ಮ್ಯಾಜಿಸ್ಟ್ರಿಯಲ್ ವಿಚಾರಣೆಯ ಪ್ರಾಥಮಿಕ ವರದಿ ಹೊರಬರುತ್ತದೆ ಎಂದು ಸಚಿವೆ ಹೇಳಿದ್ದಾರೆ.

BJP VS AAP

ಪರಿಸ್ಥಿತಿ ಅವಲೋಕಿಸಲು ದೆಹಲಿ ಬಿಜೆಪಿಯ ತಂಡದು ಆಶಾ ಕಿರಣ್ ಆಶ್ರಯ ಮನೆಗೆ ತೆರಳಿದೆ. ನಮ್ಮ ಮಾಹಿತಿಯಂತೆ ನಿರಾಶ್ರಿತರಿಗೆ ಗಲೀಜು ನೀರು ಬರುತ್ತಿದೆ, ಊಟ ಸಿಗುತ್ತಿಲ್ಲ, ಚಿಕಿತ್ಸೆ ಸಿಗುತ್ತಿಲ್ಲ, ಈ ಬಗ್ಗೆ ತನಿಖೆ ನಡೆಸಿ, ಇದರಲ್ಲಿ ಭಾಗಿಯಾದ ಎಲ್ಲ ಅಧಿಕಾರಿಗಳನ್ನು ಶಿಕ್ಷಿಸಬೇಕು ಎಂದು ಬಿಜೆಪಿ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ರೇಖಾ ಗುಪ್ತಾ ಹೇಳಿಕೆ ನೀಡಿದ್ದಾರೆ.

ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ದೆಹಲಿ ಸಚಿವ ಗೋಪಾಲ್ ರಾಯ್, ಮಯೂರ್ ವಿಹಾರ್‌ನ ಚರಂಡಿಯಲ್ಲಿ ಮುಳುಗಿ ಸಾವನ್ನಪ್ಪಿದ ತಾಯಿ ಮತ್ತು ಮಗನ ಮನೆಗೆ ಬಿಜೆಪಿ ನಾಯಕರು ಭೇಟಿ ನೀಡಲಿಲ್ಲ ಎಂದು ತಿರುಗೇಟು ನೀಡಿದ್ದಾರೆ.

ಟಾಪ್ ನ್ಯೂಸ್

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

mohan bhagwat

Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

mohan bhagwat

Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಳೆಬಾಳುವ ಎತ್ತು ಬಲಿ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.