Road Mishap: ಮಧ್ಯಪ್ರದೇಶದಲ್ಲಿ ಪಿಕ್ ಅಪ್ ವಾಹನ ಪಲ್ಟಿ: 14 ಮಂದಿ ಮೃತ್ಯು, 21 ಮಂದಿಗೆ ಗಾಯ
Team Udayavani, Feb 29, 2024, 8:29 AM IST
ಮಧ್ಯಪ್ರದೇಶ: ಚಾಲಕನ ನಿಯಂತ್ರಣ ತಪ್ಪಿದ ಪಿಕ್ ಅಪ್ ವಾಹನವೊಂದು ಪಲ್ಟಿಯಾದ ಪರಿಣಾಮ ಹದಿನಾಲ್ಕು ಮಂದಿ ಮೃತಪಟ್ಟು ಇಪ್ಪತ್ತೊಂದು ಮಂದಿ ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ ದಿಂಡೋರಿಯಲ್ಲಿ ಬುಧವಾರ ರಾತ್ರಿ ಸಂಭವಿಸಿದೆ.
ದಿಂಡೋರಿ ಜಿಲ್ಲೆಯ ಬಡ್ಜರ್ ಗ್ರಾಮದ ಬಳಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಗ್ರಾಮಸ್ಥರು ದೇವಾರಿ ಗ್ರಾಮಕ್ಕೆ ಹಿಂತಿರುಗುವ ವೇಳೆ ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸ್ಥಳೀಯರು ಮತ್ತು ಪೊಲೀಸರು ಸೇರಿ ಗಾಯಾಳುಗಳನ್ನು ಚಿಕಿತ್ಸೆಗಾಗಿ ಸಮೀಪದ ಸಮುದಾಯ ಆರೋಗ್ಯ ಕೇಂದ್ರಕ್ಕೆ ರವಾನಿಸಿದ್ದಾರೆ.
ಸಿಎಂ ಸಂತಾಪ:
ಘಟನೆಯಲ್ಲಿ ಮೃತಪಟ್ಟವರಿಗೆ ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಸಂತಾಪ ಸೂಚಿಸಿದ್ದಾರೆ ಅಲ್ಲದೆ ಮೃತರ ಕುಟುಂಬಗಳಿಗೆ ನಾಲ್ಕು ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಿದ್ದಾರೆ. ಗಾಯಾಳುಗಳಿಗೆ ಉತ್ತಮ ವೈದ್ಯಕೀಯ ಚಿಕಿತ್ಸೆ ನೀಡುವಂತೆ ಸ್ಥಳೀಯ ಆಡಳಿತಕ್ಕೆ ಮುಖ್ಯಮಂತ್ರಿ ಸೂಚಿಸಿದ್ದಾರೆ.
ಇದನ್ನೂ ಓದಿ: Sandeshkhali Case: ಸಂದೇಶಖಾಲಿ ಪ್ರಕರಣದ ಪ್ರಮುಖ ಆರೋಪಿ ಶೇಖ್ ಷಹಜಹಾನ್ ತಡರಾತ್ರಿ ಬಂಧನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar Remarks: ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್ ಶಾ
Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.