Mumbai: ಹೋರ್ಡಿಂಗ್ ಕುಸಿದು ಬಿದ್ದ ಪ್ರಕರಣ; ಮೃತರ ಸಂಖ್ಯೆ 14ಕ್ಕೆ ಏರಿಕೆ, 74 ಮಂದಿಗೆ ಗಾಯ
ಅನುಮತಿ ಪಡೆಯದೇ ಹೋರ್ಡಿಂಗ್ ನಿರ್ಮಿಸಿದ ಜಾಹೀರಾತು ಏಜೆನ್ಸಿ ವಿರುದ್ಧ ಪ್ರಕರಣ
Team Udayavani, May 14, 2024, 9:24 AM IST
ಮುಂಬಯಿ: ಬಿರುಗಾಳಿ ಸಹಿತ ಮಳೆಯ ಅವಾಂತರಕ್ಕೆ ಸೋಮವಾರ ಮುಂಬೈನ ಘಾಟ್ಕೋಪರ್ ಪ್ರದೇಶದಲ್ಲಿ ಪೆಟ್ರೋಲ್ ಬಂಕ್ ಮೇಲೆ ದೈತ್ಯ ಜಾಹೀರಾತು ಫಲಕ ಬಿದ್ದ ಪ್ರಕರಣದಲ್ಲಿ ಮೃತರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ ಅಲ್ಲದೆ 74 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ನಗರದಲ್ಲಿ ಸೋಮವಾರ ಬಿರುಗಾಳಿ ಸಹಿತ ಭಾರೀ ಮಳೆಯಾಗಿದ್ದು ಹಲವೆಡೆ ಮರಗಳು ಧರೆಗುರುಳಿವೆ, ಅಲ್ಲದೆ ಜನಜೀವನ ಅಸ್ತವ್ಯಸ್ತಗೊಂಡಿದೆ, ಇದೆ ವೇಳೆ ಪಂತನಗರದ ಈಸ್ಟರ್ನ್ ಎಕ್ಸ್‌ಪ್ರೆಸ್ ಹೆದ್ದಾರಿಯ ಬಳಿ ಇರುವ ಪೆಟ್ರೋಲ್ ಬಂಕ್ ಮೇಲೆ ಅತೀ ದೊಡ್ಡ ಹೋರ್ಡಿಂಗ್ ಕುಸಿದು ಬಿದ್ದ ಪರಿಣಾಮ ಪೆಟ್ರೋಲ್ ಬಂಕ್ ಸೇರಿದಂತೆ ಹಲವಾರು ಕಾರುಗಳ ಮೇಲೆ ಬಿದ್ದಿದೆ ಪರಿಣಾಮ ಎಪ್ಪತ್ತಕ್ಕೂ ಹೆಚ್ಚು ಮಂದಿ ಅವಶೇಷಗಳಿ ಸಿಲುಕಿದ್ದರು ಕೂಡಲೇ ಕಾರ್ಯಪ್ರವೃತ್ತರಾದ ರಕ್ಷಣಾ ತಂಡ ಅವಶೇಷಗಳಡಿ ಸಿಲುಕಿದ್ದ ಜನರನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಿದ್ದಾರೆ ಆದರೆ ಈ ಅವಘಡದಲ್ಲಿ ಇದುವರೆಗೆ ಸುಮಾರು ಹದಿನಾಲ್ಕು ಮಂದಿ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದ್ದು ಜೊತೆಗೆ 74 ಮಂದಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನಲಾಗಿದೆ ಘಟನಾ ಸ್ಥಳದಲ್ಲಿ ಇನ್ನೂ ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಹೋರ್ಡಿಂಗ್ ಮಾಲೀಕನ ವಿರುದ್ಧ ಪ್ರಕರಣ ದಾಖಲು
ಹದಿನಾಲ್ಕು ಜನರ ಜೀವ ತೆಗೆದುಕೊಂಡ ಹೋರ್ಡಿಂಗ್ಸ್ ಅಳವಡಿಸಿದ್ದ ಅದರ ಮಾಲೀಕ ಭವೇಶ್ ಭಿಡೆ ವಿರುದ್ಧ ಮುಂಬೈ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಭವೇಶ್ ಭಿಂಡೆ ಇಗೋ ಮೀಡಿಯಾ ಪ್ರೈವೇಟ್ ಲಿಮಿಟೆಡ್ ನ ನಿರ್ದೇಶಕರಾಗಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ.
ರಕ್ಷಣಾ ತಂಡದಿಂದ ಕಾರ್ಯಾಚರಣೆ:
ಘಟನಾ ಸ್ಥಳದಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ ತಂಡ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದೆ ಎಂದು ಬೃಹತ್ ಮುಂಬೈ ಮಹಾನಗರ ಪಾಲಿಕೆ ಆಯುಕ್ತ ಭೂಷಣ್ ಗಗ್ರಾನಿ (ಬಿಎಂಸಿ) ತಿಳಿಸಿದ್ದಾರೆ.
ಘಟನೆಯಲ್ಲಿ ಗಾಯಗೊಂಡ ಗಾಯಾಳುಗಳನ್ನು ರಾಜವಾಡಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಿತಿಗಿಂತ ಹೆಚ್ಚಿನ ಗಾತ್ರದ ಹೋರ್ಡಿಂಗ್ ಅಳವಡಿಕೆ:
ಮಿತಿಗಿಂತ ದೊಡ್ಡ ಪ್ರಮಾಣದಲ್ಲಿ ಹೋರ್ಡಿಂಗ್ ಹಾಕಿದ್ದ ಏಜೆನ್ಸಿಗೆ ಮುಂಬೈ ಮಹಾನಗರ ಪಾಲಿಕೆ ನೋಟಿಸ್ ಜಾರಿ ಮಾಡಿದೆ. ಮುಂಬೈ ಮಹಾನಗರ ಪಾಲಿಕೆಯ ಸೂಚನೆಯಂತೆ ಗರಿಷ್ಠ 40×40 ಚದರ ಅಡಿ ಗಾತ್ರದ ಹೋರ್ಡಿಂಗ್ ಅಳವಡಿಕೆಗೆ ಅವಕಾಶ ನೀಡಲಾಗಿದೆ ಆದರೆ ನಿನ್ನೆ ಕುಸಿದು ಬಿದ್ದಿರುವ ಹೋರ್ಡಿಂಗ್ಸ್ 120×120 ಚದರ ಅಡಿ ಗಾತ್ರದ್ದಾಗಿತ್ತು ಎಂದು ಅಧಿಕಾರಿಗಳು ಹೇಳಿದ್ದಾರೆ.
ಅನುಮತಿ ಪಡೆದಿಲ್ಲ
ಮುಂಬಯಿಯಲ್ಲಿ ಇದೆ ರೀತಿಯ ಒಟ್ಟು ನಾಲ್ಕು ಹೋರ್ಡಿಂಗ್‌ಗಳಿಗೆ ಇಗೋ ಮೀಡಿಯಾ ನಿರ್ಮಿಸಿದ್ದು, ಹೋರ್ಡಿಂಗ್ ನಿರ್ಮಿಸುವ ಮೊದಲು ಮುಂಬೈ ಮಹಾನಗರ ಪಾಲಿಕೆಯಿಂದ ಯಾವುದೇ ಅನುಮತಿ ಪಡೆದಿಲ್ಲ ಎಂದು ಹೇಳಲಾಗಿದೆ.
14 killed, 74 injured in this giant hoarding collapse in Mumbai’s dust storm yesterday.
The 17,000 sqft hoarding was listed in the Limca Book of Records last year. The BMC says it was illegal, unauthorised.
FOURTEEN lives gone & counting.
Banana republic. pic.twitter.com/uHqx0tW1in
— Shiv Aroor (@ShivAroor) May 14, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.