ಶಾಲೆ ಟಾಯ್ಲೆಟ್‌ನಲ್ಲಿ ವಿದ್ಯಾರ್ಥಿಯ ಕೊಲೆ
Team Udayavani, Feb 3, 2018, 11:15 AM IST
ಹೊಸದಿಲ್ಲಿ /ಹೈದರಾಬಾದ್: ಗುರುಗ್ರಾಮದ ರ್ಯಾನ್ ಇಂಟರ್‌ನ್ಯಾಷನಲ್ ಶಾಲೆಯಲ್ಲಿ 7 ವರ್ಷದ ಬಾಲಕ ಪ್ರದ್ಯುಮನ್‌ನನ್ನು ಅದೇ ಶಾಲೆಯ ಹಿರಿಯ ವಿದ್ಯಾರ್ಥಿ ಹತ್ಯೆಗೈದ ಪ್ರಕರಣ ದೇಶವನ್ನೇ ಬೆಚ್ಚಿ ಬೀಳಿಸಿದ ಬೆನ್ನಲ್ಲೇ ಶುಕ್ರವಾರ ದಿಲ್ಲಿಯಲ್ಲಿ ಅಂಥದ್ದೇ ಘಟನೆ ನಡೆದಿದೆ. 16 ವರ್ಷದ ಬಾಲಕನೊಬ್ಬ ಶಾಲೆಯ ಟಾಯ್ಲೆಟ್‌ನಲ್ಲಿ ನಿಗೂಢ ರೀತಿಯಲ್ಲಿ ಸಾವಿಗೀಡಾಗಿದ್ದಾನೆ. ಈ ಸಂಬಂಧ ಮೂವರು ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ದಿಲ್ಲಿಯ ಕರವಾಲ್ ನಗರದ ಶಾಲೆಯೊಂದರಲ್ಲಿ 9ನೇ ತರಗತಿಯಲ್ಲಿ ಓದುತ್ತಿದ್ದ ತುಶಾರ್ ಶಾಲೆಯ ಶೌಚಾಲಯದ ಬಳಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದ. ಆತನನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅದಾಗಲೇ ಆತ ಮೃತಪಟ್ಟಿದ್ದ. ಬಾಲಕ ತುಶಾರ್ ಶೌಚಾಲಯದ ಬಳಿ ಕೆಲ ವಿದ್ಯಾರ್ಥಿಗಳ ಜೊತೆ ಜಗಳ ಮಾಡುತ್ತಿದ್ದದ್ದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದರ ಆಧಾರದಲ್ಲಿ ಮೂವರು ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ.
14 ವರ್ಷದ ಬಾಲಕಿ ಆತ್ಮಹತ್ಯೆ: ಇನ್ನೊಂದೆಡೆ, ಶಾಲೆ ಶುಲ್ಕ ಪಾವತಿಸಿಲ್ಲ ಎಂಬ ಕಾರಣಕ್ಕೆ ಸಿಬಂದಿ ತನ್ನನ್ನು ಪರೀಕ್ಷೆ ಕೊಠಡಿಯಿಂದ ಹೊರಹಾಕಿದ್ದಕ್ಕೆ ಮನನೊಂದು 14 ವರ್ಷ ವಯಸ್ಸಿನ ಬಾಲಕಿ ಆತ್ಮಹತ್ಯೆಗೆ ಶರಣಾದ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ. ‘ನನಗೆ ಅವರು ಪರೀಕ್ಷೆ ಬರೆಯಲು ಅನುವು ಮಾಡಲಿಲ್ಲ. ಕ್ಷಮಿಸು ಅಮ್ಮಾ’ ಎಂದು ಆತ್ಮಹತ್ಯೆ ಪತ್ರದಲ್ಲಿ ಬರೆದಿದ್ದಾಳೆ. ಪ್ರಕರಣ ಸಂಬಂಧ ಶಾಲಾ ಶಿಕ್ಷಕಿ ಹಾಗೂ ಇಬ್ಬರು ಅಧಿಕಾರಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್ ಅಸ್ತ್ರ !
Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ
Maharashtra: ಮತಗಟ್ಟೆ ಬಳಿ ಚಪ್ಪಲಿ ನಿಷೇಧಿಸಿ ಎಂದು ಮಹಾಪಕ್ಷೇತರ ಅಭ್ಯರ್ಥಿ ಮನವಿ!
ಮನುಷ್ಯ ನೀನು ದಂಡ, ಸತ್ತು ಹೋಗು!: ಎಐ ಚಾಟ್‌ಬಾಟ್ ಹೇಳಿಕೆ
Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ
MUST WATCH
ಹೊಸ ಸೇರ್ಪಡೆ
Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ ಜನರ ಭೇಟಿ
Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ
Kyiv: ಉಕ್ರೇನ್ ವಿದ್ಯುತ್ ಸ್ಥಾವರ ಮೇಲೆ ರಷ್ಯಾ 120 ಕ್ಷಿಪಣಿ ದಾಳಿ
Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್ ಅಸ್ತ್ರ !
Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.