Tragedy: ಘೋರ ದುರಂತ… ಟ್ರ್ಯಾಕ್ಟರ್ ಕೆರೆಗೆ ಬಿದ್ದು 7 ಮಕ್ಕಳು ಸೇರಿ 15 ಮಂದಿ ಮೃತ್ಯು
Team Udayavani, Feb 24, 2024, 1:34 PM IST
ಉತ್ತರ ಪ್ರದೇಶ: ಭಕ್ತರನ್ನು ಹೊತ್ತೊಯ್ಯುತ್ತಿದ್ದ ಟ್ರ್ಯಾಕ್ಟರ್ ಟ್ರಾಲಿಯೊಂದು ಕೊಳಕ್ಕೆ ಬಿದ್ದ ಪರಿಣಾಮ ಕನಿಷ್ಠ 15 ಜನರು ಸಾವನ್ನಪ್ಪಿರುವ ಘೋರ ದುರಂತ ಉತ್ತರ ಪ್ರದೇಶದ ಕಸ್ಗಂಜ್ ಜಿಲ್ಲೆಯಲ್ಲಿ ಶನಿವಾರ ಸಂಭವಿಸಿದೆ .
ಮಾಘ ಪೂರ್ಣಿಮೆಯ ಶುಭ ದಿನದಂದು ಪುಣ್ಯಸ್ನಾನಕ್ಕಾಗಿ ಗಂಗಾನದಿಗೆ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಗ್ರಾಮಸ್ಥರು ತೆರಳುತ್ತಿದ್ದರು ಈ ವೇಳೆ ಎದುರಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋದ ಟ್ರ್ಯಾಕ್ಟರ್ ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ನ ಹಿಂಬದಿ ಟ್ರಾಲಿ ಕೆರೆಗೆ ಬಿದ್ದಿದೆ. ಈ ದುರ್ಘಟನೆಯಲ್ಲಿ ಎಂಟು ಮಕ್ಕಳು ಮತ್ತು ಏಳು ಮಹಿಳೆಯರು ಸೇರಿದಂತೆ 15 ಮಂದಿ ಸಾವನ್ನಪ್ಪಿದ್ದಾರೆ. ಈ ವೇಳೆ ಹಲವರನ್ನು ರಕ್ಷಣೆ ಮಾಡಲಾಗಿದ್ದು ಅವರನ್ನು ಕಾಸ್ಗಂಜ್‌ನ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಮೃತ ಕುಟುಂಬಕ್ಕೆ ಪರಿಹಾರ ಘೋಷಿಸಿದ ಸಿಎಂ:
ಘಟನೆಯ ಬಗ್ಗೆ ತೀವ್ರ ದುಃಖ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಸಂತ್ರಸ್ತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ. ಮೃತರ ಸಂಬಂಧಿಕರಿಗೆ 2 ಲಕ್ಷ ಮತ್ತು ಗಾಯಗೊಂಡವರಿಗೆ ಐವತ್ತು ಸಾವಿರ ಪರಿಹಾರ ಘೋಷಿಸಿದ್ದಾರೆ.
ಅಪಘಾತದಲ್ಲಿ ಗಾಯಗೊಂಡವರಿಗೆ ತ್ವರಿತ ಮತ್ತು ಸಮರ್ಪಕ ಚಿಕಿತ್ಸೆ ನೀಡುವಂತೆ ಮುಖ್ಯಮಂತ್ರಿಗಳು ಕಸ್ಗಂಜ್ ಜಿಲ್ಲೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.ರಕ್ಷಣಾ ಕಾರ್ಯಾಚರಣೆಗೂ ಬೇಕಾದ ಅಗತ್ಯ ವ್ಯವಸ್ಥೆಯನ್ನು ಮಾಡುವಂತೆ ಸೂಚಿಸಿದ್ದಾರೆ.
ಇದನ್ನೂ ಓದಿ: ದೆಹಲಿಯಲ್ಲಿ ಆಪ್ – ಕಾಂಗ್ರೆಸ್ ಸೀಟು ಹಂಚಿಕೆ ಫೈನಲ್… ಯಾವ ಕ್ಷೇತ್ರದಿಂದ ಯಾರು ಸ್ಪರ್ಧೆ?
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ
BBK11: ಕ್ಯಾಪ್ಟನ್ ಹನುಮಂತುಗೆ ನಿಯತ್ತಿನ ಪ್ರಶ್ನೆ ಹಾಕಿ, ರೇಗಾಡಿದ ಚೈತ್ರಾ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.