ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್ ರೈಲು ದುರಂತ: ಮೃತರ ಸಂಖ್ಯೆ 15ಕ್ಕೆ ಏರಿಕೆ, 60 ಜನರಿಗೆ ಗಾಯ
Team Udayavani, Jun 17, 2024, 1:44 PM IST
ಕೋಲ್ಕತ್ತಾ: ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಜಿಲ್ಲೆಯಲ್ಲಿ ಇಂದು ಬೆಳಗ್ಗೆ ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್ ರೈಲು ಗೂಡ್ಸ್ ರೈಲಿಗೆ ಗೂಡ್ಸ್ ರೈಲೊಂದು ಡಿಕ್ಕಿ ಹೊಡೆದ ಪರಿಣಾಮ ಸಂಭವಿಸಿದ ಅವಘಡದಲ್ಲಿ ಮೃತರ ಸಂಖ್ಯೆ ಹದಿನೈದಕ್ಕೆ ಏರಿಕೆಯಾಗಿದ್ದು ಜೊತೆಗೆ 60 ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ.
ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್ ಅಸ್ಸಾಂನ ಸಿಲ್ಚಾರ್‌ನಿಂದ ಕೋಲ್ಕತ್ತಾದ ಸೀಲ್ದಾಗೆ ಪ್ರಯಾಣಿಸುತ್ತಿದ್ದಾಗ ನ್ಯೂ ಜಲ್ಪೈಗುರಿಗೆ ಸಮೀಪವಿರುವ ರಂಗಪಾಣಿ ನಿಲ್ದಾಣದ ಬಳಿ ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್ ರೈಲಿಗೆ ಗೂಡ್ಸ್ ರೈಲು ಹಿಂದಿನಿಂದ ಡಿಕ್ಕಿ ಹೊಡೆದಿದೆ, ಈ ವೇಳೆ ಮೂರೂ ಬೋಗಿಗಳು ಜಖಂಗೊಂಡಿದ್ದು ಹದಿನೈದು ಮಂದಿ ಮೃತಪಟ್ಟಿದ್ದಾರೆ ಜೊತೆಗೆ ಅರುವತ್ತಕ್ಕೂ ಹೆಚ್ಚು ಮಂದಿ ಪ್ರಯಾಣಿಕರು ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡುವ ವ್ಯವಸ್ಥೆ ನಡೆಸಲಾಗುತ್ತಿದೆ.
ಪಶ್ಚಿಮ ಬಂಗಾಳದಲ್ಲಿ ಸಂಭವಿಸಿದ ರೈಲು ಅಪಘಾತದಲ್ಲಿ ಮೃತಪಟ್ಟಿರುವವರಿಗೆ ಪ್ರಧಾನಿ ಮೋದಿ ‘X’ ನಲ್ಲಿ ಸಂತಾಪ ಸೂಚಿಸಿದ್ದು ಗಾಯಗೊಂಡವರು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದು, ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ 2 ಲಕ್ಷ ರೂ, ಹಾಗೂ ಗಾಯಗೊಂಡವರಿಗೆ 50 ಸಾವಿರ ರೂ. ನೆರವು ಘೋಷಣೆ ಮಾಡಿದ್ದಾರೆ.
The railway accident in West Bengal is saddening. Condolences to those who lost their loved ones. I pray that the injured recover at the earliest. Spoke to officials and took stock of the situation. Rescue operations are underway to assist the affected. The Railways Minister Shri…
— Narendra Modi (@narendramodi) June 17, 2024
PM @narendramodi has announced that an ex-gratia of Rs. 2 lakh from PMNRF would be given to the next of kin of each deceased in the railway mishap in West Bengal. The injured would be given Rs. 50,000. https://t.co/2zsG6XJsGx
— PMO India (@PMOIndia) June 17, 2024
ಇನ್ನು ಅಪಘಾತಕ್ಕೆ ಸಂಬಂಧಿಸಿ ಪಶ್ಚಿಮ ಬಂಗಾಲ ಮುಖ್ಯಮಂತ್ರಿ ಕೂಡ X ನಲ್ಲಿ ಪೋಸ್ಟ್ ಹಾಕಿ ಮೃತಪಟ್ಟಪಟ್ಟವರಿಗೆ ಸಂತಾಪ ಸೂಚಿಸಿದ್ದು, ಘಟನೆಯಲ್ಲಿ ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಮಾಹಿತಿ ನೀಡಿರುವುದಾಗಿ ಹೇಳಿಕೊಂಡಿದ್ದಾರೆ.
Shocked to learn, just now, about a tragic train accident, in Phansidewa area of Darjeeling district. While details are awaited, Kanchenjunga Express has reportedly been hit by a goods train. DM, SP, doctors, ambulances and disaster teams have been rushed to the site for rescue,…
— Mamata Banerjee (@MamataOfficial) June 17, 2024
ಘಟನಾ ಸ್ಥಳದಲ್ಲಿ ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ನಿಕಟ ಸಮನ್ವಯದಲ್ಲಿ ಕಾರ್ಯನಿರ್ವಹಿಸುತ್ತಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗುತ್ತಿದೆ. ಹಿರಿಯ ಅಧಿಕಾರಿಗಳು ಸ್ಥಳಕ್ಕೆ ತಲುಪಿದ್ದಾರೆ” ಎಂದು ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರು ಹೇಳಿದ್ದಾರೆ.
Unfortunate accident in NFR zone. Rescue operations going on at war footing. Railways, NDRF and SDRF are working in close coordination. Injured are being shifted to the hospital. Senior officials have reached site.
— Ashwini Vaishnaw (@AshwiniVaishnaw) June 17, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar Remarks: ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್ ಶಾ
Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.