ಉತ್ತರಪ್ರದೇಶ: ಪ್ರತ್ಯೇಕ ಘಟನೆಯಲ್ಲಿ ಇಬ್ಬರು ಬಾಲಕಿಯರ ಮೇಲೆ ಆತ್ಯಾಚಾರ ಎಸಗಿದ ದುರುಳರು
Team Udayavani, Oct 16, 2020, 8:06 PM IST
ಕಾನ್ಪುರ: ಹತ್ರಾಸ್ ಘಟನೆ ಮಾಸುವ ಮುನ್ನವೇ ಉತ್ತರ ಪ್ರದೇಶದ ಕಾನ್ಪುರ ಜಿಲ್ಲೆಯಲ್ಲಿ 15 ವರ್ಷದ ಬಾಲಕಿಯ ಮೇಲೆ ಇಬ್ಬರು ದುರುಳರು ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಗುರುವಾರ (ಅ. 15) ರಾತ್ರಿ ಘಟನೆ ನಡೆದಿದ್ದು ಬಾಲಕಿ ಬರ್ಹಿದೆಸೆಗೆ ತೆರಳಿದ್ದ ವೇಳೆ ಅದೇ ಗ್ರಾಮದ 19 ವರ್ಷದ ಗೋವಿಂದ್ ಬಾಲ್ಮಿಕಿ ಮತ್ತು 30 ವರ್ಷದ ಅಜಯ್ ಅಲಿಯಾಸ್ ಶೀವ್ ಭೋಧನ್ ಅತ್ಯಾಚಾರ ಎಸಗಿದ್ದಾರೆ.
ಘಟನೆಯನ್ನು ಬಾಲಕಿ ತನ್ನ ಪೋಷಕರಿಗೆ ತಿಳಿಸಿದ್ದು, ಕೂಡಲೇ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದೀಗ ಎಫ್ ಐಆರ್ ದಾಖಲಾಗಿದ್ದು ಆರೋಪಿಗಳನ್ನು ಕೂಡ ಬಂಧಿಸಲಾಗಿದೆ ಎಂದು ಕಾನ್ಪುರದ ಡಿಐಜಿಪಿ ಡಾ. ಪ್ರಿತಿಂಧರ್ ಸಿಂಗ್ ತಿಳಿಸಿದ್ದಾರೆ.
ಮತ್ತೊಂದು ಘಟನೆಯಲ್ಲಿ ಉತ್ತರಪ್ರದೇಶದ ಜಲೌನ್ ಜಿಲ್ಲೆಯ ಒರಯ್ ಗ್ರಾಮದಲ್ಲಿ 11ನೇ ತರಗತಿ ಬಾಲಕಿಯ ಮೇಲೆ ಇಬ್ಬರು ದುರುಳರು ಅತ್ಯಾಚಾರ ಎಸಗಿದ್ದಾರೆ. ಈ ಬಾಲಕಿ ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲಾಗಿದ್ದ ತಾಯಿಯನ್ನು ಭೇಟಿಯಾಗಲು ರಾತ್ರಿ ವೇಳೆ ತೆರಳಿದ್ದಳು ಎನ್ನಲಾಗಿದೆ.
ಆದರೇ ಕಾಡಿನ ದಾರಿಯಲ್ಲಿ ಇಬ್ಬರು ದುರುಳರು ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಘಟನೆಯ ವೇಳೆ ಆರೋಪಿಯೊಬ್ಬ ತನ್ನ ಸ್ನೇಹಿತನಿಗೆ ಕರೆ ಮಾಡಿದ್ದು, ತನ್ನ ಹೆಸರನ್ನು ಕೂಡ ಪ್ರಸ್ತಾಪಿಸಿದ್ದ. ಇದನ್ನು ಸಂತ್ರಸ್ಥೆ ನೆನಪಿಟ್ಟುಕೊಂಡಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಯ ನಂತರ ಪ್ರಜ್ಞೆ ಕಳೆದುಕೊಂಡಿದ್ದ ಸಂತ್ರಸ್ಥೆ, ಎಚ್ಚರವಾದ ಬಳಿಕ ಆಸ್ಪತ್ರೆಗೆ ತೆರಳಿ ಪೋಷಕರಿಗೆ ವಿಷಯ ತಿಳಿಸಿದ್ದಾಳೆ ಮಾತ್ರವಲ್ಲದೆ ಕೂಡಲೇ ಪೊಲೀಸ್ ಠಾಣೆಗೆ ತೆರಳಿ ಪ್ರಕರಣ ದಾಖಲಿಸಿದ್ದಾರೆ.
ಈ ನಡುವೆ ಆರೋಪಿಯ ಪ್ರೊಫೈಲ್ ಅನ್ನು ಫೇಸ್ ಬುಕ್ ನಲ್ಲಿ ಜಾಲಾಡಿದ ಪೊಲೀಸರು ಸಂತ್ರಸ್ಥೆಗೆ ತೋರಿಸಿ, ಬಳಿಕ ಇಬ್ಬರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಗಳನ್ನು ಒರಯ್ ಗ್ರಾಮದ ಗೌರವ್ ಸೋನಿ ಹಾಗೂ ನೀರಜ್ ಸೋನಿ ಎಂದು ಗುರುತಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar Remarks: ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್ ಶಾ
Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.