ಅಮರನಾಥ ಯಾತ್ರಿಕರಿದ್ದ ಬಸ್ ಕಮರಿಗೆ: 16 ಸಾವು
Team Udayavani, Jul 17, 2017, 3:40 AM IST
ಶ್ರೀನಗರ/ಹೊಸದಿಲ್ಲಿ: ಅಮರನಾಥ ಯಾತ್ರಿಕರ ಮೇಲೆ ಉಗ್ರರು ದಾಳಿ ನಡೆಸಿ ವಾರ ತುಂಬುವುದರೊಳಗೆ ಮತ್ತೂಂದು ದುರಂತ ಸಂಭವಿಸಿದೆ. ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ರವಿವಾರ ಅಮರನಾಥ ಯಾತ್ರಿಕರನ್ನು ಹೊತ್ತೂಯ್ಯುತ್ತಿದ್ದ ಬಸ್ಸೊಂದು ಕಮರಿಗೆ ಉರುಳಿಬಿದ್ದ ಪರಿಣಾಮ, 16 ಮಂದಿ ಯಾತ್ರಾರ್ಥಿಗಳು ಸಾವಿಗೀಡಾಗಿದ್ದಾರೆ.
ರಾಮ್ಬನ್ ಜಿಲ್ಲೆಯ ನಚ್ಲಾನಾ ಜಿಲ್ಲೆಯಲ್ಲಿ ಈ ದುರ್ಘಟನೆ ನಡೆದಿದೆ. ಬಸ್ ಸ್ಕಿಡ್ ಆಗಿ ವಾಲಿದ್ದು, ಅನಂತರ ಕಮರಿಯೊಂದಕ್ಕೆ ಉರುಳಿಬಿದ್ದಿದೆ. ಈ ವೇಳೆ ಇಬ್ಬರು ಮಹಿಳೆಯರ ಸಹಿತ 16 ಮಂದಿ ಮೃತಪಟ್ಟಿದ್ದು, 27 ಮಂದಿ ಗಾಯಗೊಂಡಿದ್ದಾರೆ. ಈ ಪೈಕಿ 19 ಮಂದಿಯ ಸ್ಥಿತಿ ಚಿಂತಾಜನಕವಾಗಿದೆ. ಘಟನೆ ಸಂಭವಿಸಿದ ಕೂಡಲೇ ವಾಯುಪಡೆಯ ಹೆಲಿಕಾಪ್ಟರ್ ಮೂಲಕ 19 ಮಂದಿಯನ್ನು ಮೇಲೆತ್ತಲಾಗಿದೆ ಎಂದು ಹಿರಿಯ ಸುಪರಿಂಟೆಂಡೆಂಟ್ ಆಫ್ಪೊ ಲೀಸ್ ಮೋಹನ್ ಲಾಲ್ ತಿಳಿಸಿದ್ದಾರೆ. ಮೃತರು ಉತ್ತರಪ್ರದೇಶ, ಬಿಹಾರ, ರಾಜಸ್ಥಾನ, ಅಸ್ಸಾಂ, ಹರಿಯಾಣ ಮತ್ತು ಮಧ್ಯಪ್ರದೇಶಕ್ಕೆ ಸೇರಿದವರು ಎಂದೂ ಅವರು ಮಾಹಿತಿ ನೀಡಿದ್ದಾರೆ.
ಘಟನೆ ಕುರಿತು ಆಘಾತ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ, ಯಾತ್ರಿಗಳ ಸಾವು ಅತ್ಯಂತ ದುಃಖ ತಂದಿದೆ ಎಂದಿದ್ದಾರೆ. ಜತೆಗೆ, ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ. ಇದೇ ವೇಳೆ, ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಜಮ್ಮು-ಕಾಶ್ಮೀರ ರಾಜ್ಯಪಾಲ ಎನ್.ಎನ್. ವೋಹ್ರಾ ಮತ್ತು ಸಿಎಂ ಮೆಹಬೂಬಾ ಮುಫ್ತಿ ಅವರೊಂದಿಗೆ ಮಾತುಕತೆ ನಡೆಸಿದ್ದು, ಪರಿಸ್ಥಿತಿ ಬಗ್ಗೆ ವಿವರ ಪಡೆದಿದ್ದಾರೆ.
ಉಗ್ರರ ದಾಳಿ: ಮೃತರ ಸಂಖ್ಯೆ 8ಕ್ಕೇರಿಕೆ
ಕಳೆದ ಸೋಮವಾರ ನಡೆದ ಉಗ್ರರ ದಾಳಿಯಿಂದ ಗಾಯಗೊಂಡಿದ್ದ ಮಹಿಳೆಯೊಬ್ಬರು ರವಿವಾರ ಕೊನೆಯುಸಿರೆಳೆದಿದ್ದಾರೆ. ಈ ಮೂಲಕ ಅಮರನಾಥ ಯಾತ್ರಿಗಳ ಮೇಲೆ ನಡೆದ ಉಗ್ರ ದಾಳಿಗೆ ಮೃತಪಟ್ಟವರ ಸಂಖ್ಯೆ 8ಕ್ಕೇರಿದೆ. ಗಾಯಗೊಂಡಿದ್ದ ಗುಜರಾತ್ನ ಲಲಿತಾ ಬೆನ್(47) ಇಲ್ಲಿನ ಸ್ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆಗೆ ಸ್ಪಂದಿಸದೆ ರವಿವಾರ ಅಸುನೀಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್ ಕ್ಷಮೆಗೆ ವೈದ್ಯರ ಪಟ್ಟು
Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್ ವಿರುದ್ಧ ತಾಬ್ಡೆ 100 ಕೋಟಿ ದಾವೆ!
Adani: ಲಂಚ ಕೇಸ್; ಜಗನ್ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ
Supreme Court: ದಿಲ್ಲಿಯ 113 ಚೆಕ್ಪೋಸ್ಟ್ನಲ್ಲಿ ಪೊಲೀಸರನ್ನು ನೇಮಿಸಿ
Delhi Elections: ಆಪ್ನಿಂದ 7 ಉಚಿತ ಯೋಜನೆ ಘೋಷಣೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.