ಜಾರ್ಖಂಡ್ : ಬಸ್-ಟ್ರಕ್ ಢಿಕ್ಕಿ; 16 ಸಾವು; 26 ಮಂದಿಗೆ ಗಾಯ
Team Udayavani, Jan 5, 2022, 8:56 PM IST
ಪಕುರ: ಜಾರ್ಖಂಡ್‌ನ ಪದೇರ್ಕೊಲ ಎಂಬ ಗ್ರಾಮದಲ್ಲಿ ಬುಧವಾರ ಗ್ಯಾಸ್ ಸಿಲಿಂಡರ್‌ಗಳನ್ನು ಸಾಗಿಸುತ್ತಿದ್ದ ಟ್ರಕ್ ಮತ್ತು ಬಸ್ ನಡುವೆ ಭೀಕರ ಅಪಘಾತದಲ್ಲಿ 16 ಮಂದಿ ಮೃತಪಟ್ಟಿದ್ದಾರೆ, 26 ಮಂದಿ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಪೈಕಿ ಮೂವರ ಸ್ಥಿತಿ ಗಂಭೀರವಾಗಿದೆ. 40 ಮಂದಿ ಪ್ರಯಾಣಿಕರಿದ್ದ ಬಸ್, ಅನಿಲ ಸಿಲಿಂಡರ್‌ಗಳು ತುಂಬಿಕೊಂಡಿದ್ದ ಟ್ರಕ್ ಢಿಕ್ಕಿ ಹೊಡೆದು ಈ ದುರಂತ ನಡೆದಿದೆ.
ಬಸ್‌ನಲ್ಲಿ ಸಿಕ್ಕಿ ಹಾಕಿಕೊಂಡಿದ್ದ ಹಲವರನ್ನು ಪಾರು ಮಾಡಲಾಗಿದೆ. ಡಿಕ್ಕಿ ಹೊಡೆದ ರಭಸಕ್ಕೆ ಎರಡೂ ವಾಹನಗಳು ಸಿಲುಕಿಕೊಂಡಿದ್ದವು.
ಇದನ್ನೂ ಓದಿ:ಚಾರ್ಮಾಡಿ ಘಾಟ್ ನಲ್ಲಿ ರಸ್ತೆಗೆ ಉರುಳಿದ ಮರ : ಕೆಲ ಕಾಲ ರಸ್ತೆ ಸಂಚಾರ ಸ್ಥಗಿತ
ಬಸ್ ಮತ್ತು ಟ್ರಕ್ ಎರಡೂ ವೇಗವಾಗಿ ಚಲಿಸುತ್ತಿದ್ದವು. ಈ ಪ್ರದೇಶದಲ್ಲಿ ದಟ್ಟವಾದ ಮಂಜಿನ ಪರಿಣಾಮ ಎದುರಿನಿಂದ ಬರುವ ವಾಹನ ಕಾಣದ ಕಾರಣ ಈ ಅಪಘಾತ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್
Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು
ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್ ನೇಮಕ: ಚಿನ್ನದ ಪದಕ ವಿಜೇತ VN ಪರಿಚಯ…
Atul Subhash Case: ಮೊಮ್ಮಗನನ್ನು ಟೆಕಿ ಅತುಲ್ ತಾಯಿಯ ಸುಪರ್ದಿಗೆ ವಹಿಸಲು ಸುಪ್ರೀಂ ನಕಾರ
Earthquakes: ಹಿಮಾಲಯದ ತಪ್ಪಲಲ್ಲಿ ಅತೀ ಹೆಚ್ಚು ಭೂಕಂಪ ಸಂಭವಿಸುವುದೇಕೆ?
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್
VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್
Dandeli: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ : ಪೋಕ್ಸೋ ಪ್ರಕರಣದಡಿ ಓರ್ವನ ಬಂಧನ
Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು
Naxalites ಶರಣಾಗತಿಯಲ್ಲಿ ಟ್ವಿಸ್ಟ್; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.