Uttar Pradesh: ವೈಶಾಲಿ ಸೂಪರ್ಫಾಸ್ಟ್ ಎಕ್ಸ್ಪ್ರೆಸ್ನಲ್ಲಿ ಅಗ್ನಿ ಅವಘಡ, 19 ಮಂದಿಗೆ ಗಾಯ
Team Udayavani, Nov 16, 2023, 8:39 AM IST
ಲಕ್ನೋ: ದೆಹಲಿ-ಸಹರ್ಸಾ ವೈಶಾಲಿ ಸೂಪರ್ಫಾಸ್ಟ್ ಎಕ್ಸ್ಪ್ರೆಸ್ನ ಕೋಚ್ನಲ್ಲಿ ಬೆಂಕಿ ಕಾಣಿಸಿಕೊಂಡು ಕನಿಷ್ಠ 19 ಪ್ರಯಾಣಿಕರು ಗಾಯಗೊಂಡಿರುವ ಘಟನೆ ಗುರುವಾರ ಮುಂಜಾನೆ ಉತ್ತರ ಪ್ರದೇಶದ ಇಟಾವಾದಲ್ಲಿ ಸಂಭವಿಸಿದೆ.
ರೈಲು ದೆಹಲಿಯಿಂದ ಬಿಹಾರದ ಸಹರ್ಸಾಗೆ ಪ್ರಯಾಣಿಸುತ್ತಿದ್ದಾಗ ಪ್ಯಾಂಟ್ರಿ ಕಾರ್ ಬಳಿಯ S6 ಕೋಚ್ನಲ್ಲಿ ಬೆಳಗಿನ ಜಾವ 2:30 ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ ಎಂದು ರೈಲ್ವೇ ಅಧಿಕಾರಿ ಉದಯ್ ಶಂಕರ್ ತಿಳಿಸಿದ್ದಾರೆ. ಬೆಂಕಿ ಹೊತ್ತಿಕೊಳ್ಳಲು ಕಾರಣ ಏನು ಎಂಬುದು ತಕ್ಷಣಕ್ಕೆ ತಿಳಿದುಬಂದಿಲ್ಲ.
“ಪ್ಯಾಂಟ್ರಿ ಕಾರ್ ಬಳಿ ಕೋಚ್ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಘಟನೆಯಲ್ಲಿ ಕನಿಷ್ಠ ಹತ್ತೊಂಬತ್ತು ಜನರು ಗಾಯಗೊಂಡಿದ್ದಾರೆ. ಬೆಂಕಿ ಏಕೆ ಸಂಭವಿಸಿದೆ ಎಂಬುದರ ಕುರಿತು ತನಿಖೆ ನಡೆಯಲಿದೆ” ಎಂದು ಶಂಕರ್ ಹೇಳಿದ್ದಾರೆ.
ಬೆಂಕಿ ಅವಘಡ ಸಂಭವಿಸಿದ ಬಳಿಕ ಕೋಚ್ ಒಳಗೆ ಸಿಲುಕಿಕೊಂಡಿದ್ದ ಸುಮಾರು ಹನ್ನೊಂದು ಪ್ರಯಾಣಿಕರು ಉಸಿರಾಟದ ಸಮಸ್ಯೆಗೆ ಒಳಗಾಗಿದ್ದರು, ಉಳಿದ ಎಂಟು ಮಂದಿಗೆ ಸಣ್ಣಪುಟ್ಟ ಸುಟ್ಟ ಗಾಯಗಳೊಂದಿಗೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಇದನ್ನೂ ಓದಿ: Daily Horoscope: ಉದ್ಯೋಗ ಸ್ಥಾನದಲ್ಲಿ ಪ್ರತಿಭೆ ಪ್ರಕಟಿಸಲು ಅವಕಾಶ
ಎರಡನೇ ಘಟನೆ:
ಬುಧವಾರ, ನವದೆಹಲಿ-ದರ್ಭಾಂಗಾ ಸೂಪರ್ಫಾಸ್ಟ್ ಎಕ್ಸ್ಪ್ರೆಸ್ನ ಮೂರು ಬೋಗಿಗಳು ಬೆಂಕಿಗೆ ಆಹುತಿಯಾಗಿವೆ. ಘಟನೆಯಲ್ಲಿ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಾಥಮಿಕ ತನಿಖೆಯಿಂದ ಬೆಂಕಿ ಅವಘಡಕ್ಕೆ ಶಾರ್ಟ್ ಸರ್ಕ್ಯೂಟ್ ಕಾರಣ ಎನ್ನಲಾಗಿದೆ ಎಂದು ಹಿರಿಯ ಪೊಲೀಸ್ ಅಧೀಕ್ಷಕ ಇಟಾವಾಹ್ ಹೇಳಿದ್ದಾರೆ.
ಬೆಂಕಿ ಹೊತ್ತಿಕೊಂಡ ತಕ್ಷಣ ಹಲವಾರು ಪ್ರಯಾಣಿಕರು ರೈಲಿನಿಂದ ಜಿಗಿದು ಪ್ರಾಣ ಉಳಿಸಿಕೊಂಡಿದ್ದಾರೆ ಎಂದು ಹೇಳಲಾಗಿದ್ದು ಇದರ ನಡುವೆ ರೈಲಿನಲ್ಲಿ ಸಾಮರ್ಥ್ಯಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ
Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು
Gujarat: 700 ಕೆ.ಜಿ. ಡ್ರಗ್ಸ್ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ
Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್
Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.