#Wesaluteyou: ರಕ್ತದಾನ ಮಾಡಿ ಯುವತಿಯ ಜೀವ ಉಳಿಸಿದ CRPF ಯೋಧರು
Team Udayavani, Nov 25, 2020, 8:02 PM IST
ಶ್ರೀನಗರ: 19 ವರ್ಷದ ಯುವತಿಗೆ ಇಬ್ಬರು ಸಿಆರ್‌ಪಿಎಫ್ ಯೋಧರು ರಕ್ತದಾನ ಮಾಡುವ ಮೂಲಕ ಹೃದಯ ವೈಶಾಲ್ಯತೆ ಮೆರೆದಿದ್ದಾರೆ.
ಶ್ರೀನಗರದ ಶೇರ್-ಇ-ಕಾಶ್ಮೀರ್ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ (ಎಸ್‌ಕೆಐಎಂಎಸ್) ಆಸ್ಪತ್ರೆಯಲ್ಲಿ ಮೂತ್ರಪಿಂಡ ಕಸಿಗೆ ಒಳಗಾಗಿದ್ದ 19 ವರ್ಷದ ಯುವತಿಯೋರ್ವಳಿಗೆ ಸಿಆರ್‌ಪಿಎಫ್ ನ ಇಬ್ಬರು ಯೋಧರು ರಕ್ತದಾನ ಮಾಡಿದ್ದಾರೆ. ಆ ಮೂಲಕ ಗಡಿಯಲ್ಲಿ ನಿಂತು ದೇಶವನ್ನು ರಕ್ಷಣೆ ಮಾಡುವುದು ಮಾತ್ರವಲ್ಲದೆ ದೇಶದ ಒಳಗೂ ಹಲವರ ಜೀವ ಉಳಿಸುವ ಕೈಂಕರ್ಯದಲ್ಲಿ ತೊಡಗಿದ್ದಾರೆ.
ಬುಡ್ಗಾಂ ಜಿಲ್ಲೆಯ ಸಯೀದಾ ಎಂಬ ಯುವತಿ ಮೂತ್ರಪಿಂಡ ಕಸಿ ಚಿಕಿತ್ಸೆಗಾಗಿ ಶ್ರೀನಗರದ ಆಸ್ಪತ್ರೆಗೆ ದಾಖಲಾಗಿದ್ದರು. ಇವರಿಗೆ ರಕ್ತದ ಆವಶ್ಯಕತೆ ಇತ್ತು. ಇದನ್ನು ತಿಳಿದ ಸಿಆರ್‌ಪಿಎಫ್ 73ನೇ ಬೆಟಾಲಿಯನ್‌ನ ಸಹಾಯಕ ಕಮಾಂಡೆಂಟ್ ಜಾವೇದ್ ಅಲಿ ಮತ್ತು ಕಾನ್‌ಸ್ಟೆಬಲ್ ರಂಜನ್ ಕುಮಾರ್ ರಕ್ತದಾನ ಮಾಡಿ ಯುವತಿಯ ಜೀವ ಉಳಿಸಿದ್ದಾರೆ.
ಇದನ್ನೂ ಓದಿ: 26/11 ದಾಳಿ ನಾಳೆಗೆ 12 ವರ್ಷ ಪೂರ್ಣ: ಗಣ್ಯರಿಂದ ಹುತಾತ್ಮರಿಗೆ ಗೌರವ ಸಮರ್ಪಣೆ
Asst Comdt Javed Ali & Constable Ranjan Kumar of 73 bn @crpf_srinagar @JKZONECRPF @crpfindia donated blood to 19 yr old Sayeeda from Budgam, undergoing Kidney transplant at SKIMS.
Wishing her good health & a speedy recovery #HelpUsToHelpYou#DonateBloodSaveLife pic.twitter.com/HHb3VWYfhC
— CRPF Madadgaar (@CRPFmadadgaar) November 24, 2020
ಯೋಧರ ಈ ಕಾರ್ಯಕ್ಕೆ ಸಾಮಾಜಿಕ ಜಾಲತಾಣದಲ್ಲಿ ಶ್ಲಾಘನೆ ವ್ಯಕ್ತವಾಗಿದೆ. ಹಲವರು ಯೋಧರ ಈ ಕಾರ್ಯಕ್ಕೆ ಸೆಲ್ಯೂಟ್ ಎಂದಿದ್ದು, #HelpUsToHelpYou #DonateBloodSaveLife ಎಂಬ ಹ್ಯಾಶ್‌ಟ್ಯಾಗ್ ಟ್ರೆಂಡ್ ಸೃಷ್ಟಿಸಿದೆ.
ಇದನ್ನೂ ಓದಿ: ಪಾಕ್ To ಕಾಂಬೋಡಿಯ: ಏರ್ ಲಿಫ್ಟ್ ಮೂಲಕ ‘ಕಾವನ್’ ಸ್ಥಳಾಂತರ: ಯಾರಿವನು ?
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್… ರಸ್ತೆಯಲ್ಲೇ ನಡೆಯಿತು ಪವಾಡ
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Tragedy: ರೈಲು ಹಳಿ ಮೇಲೆ ಕೂತು PUBG ಆಡುತ್ತಿದ್ದ ಮೂವರು ಯುವಕರ ದೇಹ ಛಿದ್ರ ಛಿದ್ರ…
Fog: ಉತ್ತರ ಭಾರತದಲ್ಲಿ ದಟ್ಟ ಮಂಜು, ಶೂನ್ಯ ಗೋಚರತೆ: ವಿಮಾನ, ರೈಲು ಸಂಚಾರದ ಮೇಲೆ ಪರಿಣಾಮ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ
Bidar; ಗುತ್ತಿಗೆದಾರ ಸಚಿನ್ ಕೇಸ್; ತನಿಖೆ ಆರಂಭಿಸಿದ ಸಿಐಡಿ ತಂಡ
Prajwal Devaraj; ಶಿವರಾತ್ರಿಗೆ ʼರಾಕ್ಷಸʼ ಅಬ್ಬರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.