12 ವಯಸ್ಸಿಗಿಂತ ಮೇಲ್ಪಟ್ಟ ಮಕ್ಕಳಿಗೆ ಸಿದ್ಧವಾದ ಮೊದಲ ಕೋವಿಡ್ ಲಸಿಕೆಗೆ ಭಾರತದಲ್ಲಿ ಅನುಮೋದನೆ
ಕೋವಿಡ್ ಹೊಡೆದೊಡಿಸಲು ಮತ್ತೊಂದು ಅಸ್ತ್ರ| ತುರ್ತು ಬಳಕೆಗೆ ಅನುಮೋದನೆ ಪಡೆದ ಜಗತ್ತಿನ ಮೊದಲ ಡಿಎನ್ಎ ಲಸಿಕೆ
Team Udayavani, Aug 20, 2021, 8:46 PM IST
ದೆಹಲಿ: ಕೋವಿಡ್ ಸೋಂಕಿನ ವಿರುದ್ಧ ಹೋರಾಟಕ್ಕೆ ಇದೀಗ ಮತ್ತೊಂದು ಅಸ್ತ್ರ ಸಿದ್ಧವಾಗಿದ್ದು, ಝೈಡಸ್ ಕ್ಯಾಡಿಲಾ ಸಂಸ್ಥೆ ಸಿದ್ಧಪಡಿಸಿರುವ 3 ಡೋಸ್ ಗಳ ಲಸಿಕೆಯ ತುರ್ತು ಬಳಕೆಗೆ ಇಂದು (ಆ.20) ಅನುಮೋದನೆ ಸಿಕ್ಕಿದೆ
ನೀಡಲ್ ಲೆಸ್ (ಸೂಜಿ ರಹಿತ) ಲಸಿಕೆಯಾಗಿರುವ ಮೂರು ಡೋಸ್ ಪ್ರಮಾಣದ ZyCov-D ಲಸಿಕೆಯನ್ನು ತುರ್ತುಬಳಕೆಗೆ ಅನುಮೋದನೆ ನೀಡುವಂತೆ ಕೇಂದ್ರ ಆರೋಗ್ಯ ತಜ್ಞರು ಶಿಫಾರಸ್ಸು ಮಾಡಿದ ಬೆನ್ನಲ್ಲೇ ಅನುಮೋದನೆ ದೊರೆತಿದೆ.
ಝೈಕೋವ್-ಡಿ ವಿಶ್ವದ ಮೊದಲ ಡಿಎನ್ಎ ಲಸಿಕೆಯಾಗಿದ್ದು, ಈಗಾಗಲೇ ದೇಶದಲ್ಲಿ ಸೆರಂ ಇನ್ಸ್ಟಿಟ್ಯೂಟ್ ನ ಕೋವಿಶೀಲ್ಡ್, ಭಾರತ್ ಬಯೋಟೆಕ್ ನ ಕೊವಾಕ್ಸಿನ್, ರಷ್ಯಾದ ಸ್ಪುಟ್ನಿಕ್ ವಿ ಬಳಕೆಯಲ್ಲಿದ್ದು, ಇದಲ್ಲದೆ ಒಟ್ಟು 2 ಲಸಿಕೆಗಳು ಅಂದರೆ ಅಮೆರಿಕದ ಮಾಡರ್ನಾ ಮತ್ತು ಜಾನ್ಸನ್ ಮತ್ತು ಜಾನ್ಸನ್ ಲಸಿಕೆಗಳು ತುರ್ತು ಬಳಕೆ ಅನುಮೋದನೆ ಪಡೆದಿವೆ. ಆ ಮೂಲಕ ದೇಶದಲ್ಲಿ ತುರ್ತು ಬಳಕೆಗೆ ಅನುಮೋದನೆ ಪಡೆದ 6ನೇ ಲಸಿಕೆ ಎಂಬ ಕೀರ್ತಿಗೆ ZyCoV-D ಪಾತ್ರವಾಗಿದೆ.
ಮೂಲಗಳ ಪ್ರಕಾರ ಭಾರತದ ಔಷಧ ನಿಯಂತ್ರಕ ಜನರಲ್‌ನ ತಜ್ಞರ ಸಮಿತಿಯು ಈ ಲಸಿಕೆಯ ತುರ್ತು ಬಳಕೆಯನ್ನು ಅನುಮೋದಿಸಿದೆ. ಈ ಲಸಿಕೆಯ 2 ಡೋಸ್‌ಗಳ ಪರಿಣಾಮದ ಕುರಿತು ಸಮಿತಿಯು ಫಾರ್ಮಾ ಕಂಪನಿಯಿಂದ ಹೆಚ್ಚುವರಿ ದತ್ತಾಂಶವನ್ನು ಕೋರಿದೆ ಎನ್ನಲಾಗಿದೆ.
ಜೆನೆರಿಕ್ ಫಾರ್ಮಾಸ್ಯುಟಿಕಲ್ ಕಂಪನಿಯಾಗಿರುವ ಕ್ಯಾಡಿಲಾ ಹೆಲ್ತ್‌ಕೇರ್ ಲಿಮಿಟೆಡ್ ಜುಲೈ 1 ರಂದು ZyCoV-D ಯ ತುರ್ತು ಬಳಕೆಗೆ ಅನುಮತಿಗಾಗಿ ಅರ್ಜಿ ಸಲ್ಲಿಸಿತ್ತು. 28 ಸಾವಿರ ಸ್ವಯಂಸೇವಕರ ಮೇಲೆ ನಡೆಸಿದ ಕೊನೆಯ ಹಂತದ ಪ್ರಯೋಗದ ಆಧಾರದ ಮೇಲೆ ಈ ಅರ್ಜಿಯನ್ನು ಸಲ್ಲಿಸಲಾಗಿತ್ತು. ಲಸಿಕೆಯ ಪರಿಣಾಮಕಾರಿತ್ವವು ಶೇ. 66.6 ರಷ್ಟಿದೆ ಎಂದು ಈ ವರದಿಯಿಂದ ತಿಳಿದುಬಂದಿತ್ತು. ಈ ಲಸಿಕೆ 12 ರಿಂದ 18 ವಯೋಮಾನದವರಿಗೂ ಸಂಪೂರ್ಣವಾಗಿ ಸುರಕ್ಷಿತವಾಗಿದೆ ಎಂದು ಹೇಳಲಾಗಿದೆ. ಆದಾಗ್ಯೂ, ಅದರ ಪ್ರಾಯೋಗಿಕ ಡೇಟಾವನ್ನು ಇನ್ನೂ ಪ್ಯಾರ್ ರಿವ್ಯೂ ಮಾಡಲಾಗಿಲ್ಲ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
MUST WATCH
ಹೊಸ ಸೇರ್ಪಡೆ
Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು
NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ
Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ
Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ
Congress: ಜಮೀರ್ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.