ಅಕ್ರಮ ಹಣ ವರ್ಗಾವಣೆ ಪ್ರಕರಣ: ಮಹಾ ಮಾಜಿ ಗೃಹ ಸಚಿವ ಅನಿಲ್ ದೇಶ್ ಮುಖ್ ಆಪ್ತರಿಬ್ಬರ ಬಂಧನ
Team Udayavani, Jun 26, 2021, 10:07 AM IST
ಮುಂಬೈ: ಮಹಾರಾಷ್ಟ್ರ ಮಾಜಿ ಗೃಹ ಸಚಿವ ಅನಿಲ್ ದೇಶ್ ಮುಖ್ ಅವರ ಆಪ್ತರಿಬ್ಬರನ್ನು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವು ಬಂಧಿಸಿದೆ.
ಅನಿಲ್ ದೇಶ್ ಮುಖ್ ಅವರ ವೈಯಕ್ತಿಕ ಕಾರ್ಯದರ್ಶಿ ಸಂಜೀವ್ ಪಾಲಂಡೆ ಮತ್ತು ಸಹಾಯಕ ಕುಂದನ್ ಶಿಂಧೆ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಬಂಧನಕ್ಕೊಳಪಡಿಸಿದೆ.
ಅನಿಲ್ ದೇಶ್ ಮುಖ್ ಅವರ ನಾಗ್ಪುರ ನಿವಾಸದ ಮೇಲೆ ಶುಕ್ರವಾರ ಇಡಿ ದಾಳಿ ನಡೆಸಿತ್ತು. ನಂತರ ಮುಂಬೈನಲ್ಲಿ ಈ ಇಬ್ಬರು ಆಪ್ತರನ್ನು ಸುಮಾರು ಒಂಬತ್ತು ಗಂಟೆಗಳ ಕಾಲ ಇಡಿ ವಿಚಾರಣೆಗೆ ಒಳಪಡಿಸಿತ್ತು. ವಿಚಾರಣೆಯ ವೇಳೆ ಸಹಕಾರ ತೋರದ ಕಾರಣ ಇಬ್ಬರನ್ನು ಬಂಧಿಸಲಾಗಿದೆ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ:ರತ್ನಗಿರಿ ಸುರಂಗದಲ್ಲಿ ಹಳಿತಪ್ಪಿದ ದೆಹಲಿ-ಗೋವಾ ರಾಜಧಾನಿ ಎಕ್ಸ್ ಪ್ರೆಸ್
ಈ ವರ್ಷದ ಮಾರ್ಚ್‌ನಲ್ಲಿ ಆಗ ಗೃಹ ಸಚಿವರಾಗಿದ್ದ ಅನಿಲ್ ದೇಶ್ ಮುಖ್ ವಿರುದ್ಧ ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಂಬೀರ್ ಸಿಂಗ್ ಅವರು ಭ್ರಷ್ಟಾಚಾರದ ಆರೋಪಗಳನ್ನು ನಡೆಸಿದ್ದರು.
ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಬರೆದ ಪತ್ರದಲ್ಲಿ ಪರಂಬೀರ್ ಸಿಂಗ್, ಅನಿಲ್ ದೇಶ್ ಮುಖ್ ವಿರುದ್ಧ ಭ್ರಷ್ಟಾಚಾರದ ಆರೋಪ ಹೊರಿಸಿದ್ದರು. ಅದಲ್ಲದೆ ದೇಶ್ ಮುಖ್ ಅವರು ಬಾಂಬೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ದೇಶ್ ಮುಖ್ ಅವರು ಮಾಜಿ ಸಹಾಯಕ ಇನ್ಸ್‌ಪೆಕ್ಟರ್ ಸಚಿನ್ ವಾಜೆ ಅವರಿಗೆ ತಿಂಗಳಿಗೆ ಸುಮಾರು 100 ಕೋಟಿ ರೂ.ಗಳನ್ನು ಸುಲಿಗೆ ಮಾಡುವಂತೆ ಗುರಿ ನೀಡಿದ್ದರು. ಬಾರ್ ಮತ್ತು ರೆಸ್ಟೋರೆಂಟ್‌ಗಳನ್ನು ಗುರಿಯಾಗಿಸಿಕೊಂಡು ಹೆಚ್ಚಿನ ಹಣ ಸಂಗ್ರಹ ಮಾಡಬೇಕು ಎಂದು ದೇಶ್ ಮುಖ್ ಸೂಚಿಸಿದ್ದರು ಎಂದು ಆರೋಪಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್ ಬಾಟಲಿ ಸದ್ದು
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.