ಶಿಮ್ಲಾ: ಸಾರಿಗೆ ನಿಗಮದ ಕಟ್ಟಡ ಕುಸಿದು ಇಬ್ಬರ ಸಾವು, ಐವರು ಗಂಭೀರ
Team Udayavani, Aug 4, 2017, 5:49 PM IST
ಶಿಮ್ಲಾ : ಇಲ್ಲಿಂದ 32 ಕಿ.ಮೀ. ದೂರದಲ್ಲಿರುವ ತೇವೋಗ್ ಎಂಬಲ್ಲಿ ಉಂಟಾಗಿರುವ ಜಡಿಮಳೆಗೆ ಹಿಮಾಚಲ ಪ್ರದೇಶ ರಸ್ತೆ ಸಾರಿಗೆ ನಿಗಮದ ಕಟ್ಟಡ ಕುಸಿದು ಸಂಭವಿಸಿದ ಭೀಕರ ದುರಂತದಲ್ಲಿ ಇಬ್ಬರು ಜೀವಂತ ಸಮಾಧಿಯಾಗಿ ಆರು ಮಂದಿ ಗಾಯಗೊಂಡಿದ್ದು ಈ ಪೈಕಿ ಐವರ ಸ್ಥಿತಿ ಚಿಂತಾಜನಕವಿದೆ ಎಂದು ವರದಿಯಾಗಿದೆ.
ಈ ದುರ್ಘಟನೆ ಇಂದು ಶುಕ್ರವಾರ ಮಧ್ಯಾಹ್ನ ಸಂಭವಿಸಿತ್ತು. ಜಡಿಮಳೆಗೆ ಎರಡು ಅಂತಸ್ತಿನ ಕಟ್ಟಡ ಕುಸಿದು ಬಿತ್ತು. ಕಟ್ಟಡದ ಒಳಗಿದ್ದವರು ಕುಸಿದ ಅವಶೇಷಗಳಡಿ ಸಿಲುಕಿಕೊಂಡರು ಎಂದು ಹೆಚ್ಚುವರಿ ಜಿಲ್ಲಾ ಮಾಜಿಸ್ಟ್ರೇಟ್ ಸುನೀಲ್ ಶರ್ಮಾ ತಿಳಿಸಿದ್ದಾರೆ.
ಕುಸಿದ ಅವಶೇಷಗಳ ಎಡೆಯಿಂದ ಮೇಲಕ್ಕೆತ್ತಲ್ಪಟ್ಟ ಎಂಟು ಮಂದಿಯಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟರು. ಗಂಭೀರ ಗಾಯಾಳುಗಳಾಗಿರುವ ಐವರನ್ನು ಇಲ್ಲಿನ ಇಂದಿರಾಗಾಂಧಿ ಮೆಡಿಕಲ್ ಕಾಲೇಜ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಒಬ್ಬರನ್ನು ತೇವೋಗ್ ಆಸ್ಪತ್ರೆಗೆ ಸೇರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP: ರಾಜ್ಯಗಳಿಂದಲೇ ಮಾಲಿನ್ಯ ಹೆಚ್ಚಳ: ದಿಲ್ಲಿ ಸಿಎಂ ಆತಿಶಿ ಆರೋಪ
Maharashtra Elections: ವಿಪಕ್ಷ ನಾಯಕ ರಾಹುಲ್ ಛೋಟಾ ಪೋಪಟ್: ಬಿಜೆಪಿ ವಕ್ತಾರ ಲೇವಡಿ
Rahul Gandhi: ಮೋದಿ, ಅದಾನಿ, ಅಂಬಾನಿ ಒಟ್ಟಾದರೆ ಸುರಕ್ಷಿತ, ಇದೇ ಅರ್ಥ
Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು
Akhilesh Yadav: ಉ.ಪ್ರ.ದಲ್ಲಿ ಬಾಬಾ ಸಾಹೇಬ್ ಮತ್ತು ಬಾಬಾ ನಡುವಿನ ಹೋರಾಟ
MUST WATCH
ಹೊಸ ಸೇರ್ಪಡೆ
udupi: ಮಗನ ಅರಸುತ್ತಾ ಬಂದ ತಾಯಿ: ಇಬ್ಬರು ಮಕ್ಕಳ ಸಹಿತ ವೃದ್ಧೆಯ ರಕ್ಷಣೆ
Health Department: ಸರಕಾರಿ ಆಸ್ಪತ್ರೆ, ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ: ಸಚಿವ ದಿನೇಶ್
Mysuru: ಕೋವಿಡ್ ವೇಳೆ ಔಷಧ ಖರೀದಿಯಲ್ಲಿ ನನ್ನ ಪಾತ್ರವಿಲ್ಲ: ಡಾ.ಸಿ.ಎನ್.ಮಂಜುನಾಥ್
Inquiry Report: ಬಿಜೆಪಿಗೆ ’40 ಪರ್ಸೆಂಟ್’ ಕ್ಲೀನ್ಚಿಟ್ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್
Udupi: ಚಿನ್ನ, ವಜ್ರಾಭರಣ ಕದ್ದು ಹೋಂ ನರ್ಸ್ ಪರಾರಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.