ಮಹಾರಾಷ್ಟ್ರದಲ್ಲಿ 12 ನಿಮಿಷದ ಅಂತರದಲ್ಲಿ2 ಕಡೆ ಕಂಪಿಸಿದ ಭೂಮಿ
Team Udayavani, Jul 25, 2019, 9:31 AM IST
ಮುಂಬೈ: ಕೇವಲ 12 ನಿಮಿಷದ ಅಂತರದಲ್ಲಿ ಮಹಾರಾಷ್ಟ್ರದ ಎರಡು ಕಡೆ ಭೂಮಿ ಕಂಪಿಸಿದ ಬಗ್ಗೆ ವರದಿಯಾಗಿದೆ. ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಭೂಕಂಪನದ ಅನುಭವವಾಗಿದೆ.
ಮೊದಲ ಭೂಕಂಪನವು 1.03 ಗಂಟೆಗೆ ನಡೆದಿದ್ದು, ರಿಕ್ಟರ್ ಮಾಪಕದಲ್ಲಿ 3.8ರಷ್ಟು ತೀವ್ರವಾಗಿತ್ತು. ಎರಡನೇಯ ಭೂಕಂಪವು 1.15ರ ಸುಮಾರಿಗೆ ನಡೆದಿತ್ತು. ಇದು ಕೂಡಾ ಲಘು ಭೂಕಂಪವೇ ಆಗಿದ್ದು, ಇದರ ತೀವ್ರತೆ 3.6ರಷ್ಟು ರಿಕ್ಟರ್ ಮಾಪಕದಲ್ಲಿ ದಾಖಲಾಗಿದೆ.
ಈ ಪ್ರದೇಶದಲ್ಲಿ 2018ರಿಂದ ಪದೇ ಪದೇ ಭೂಕಂಪನದ ಅನುಭವವಾಗುತ್ತಿದೆ. ಭೂಕಂಪನದ ಮೂಲ ದುಧಲ್ವಾಡಿ ಗ್ರಾಮದಲ್ಲಿದೆ ಎಂದು ವರದಿಯಾಗಿದೆ.
ಪಾಲ್ಘರ್ ಜಿಲ್ಲಾಡಳಿತ ಈ ಪ್ರದೇಶದಲ್ಲಿ ಭೂಕಂಪನದಂತಹ ತುರ್ತು ಸಮಯದಲ್ಲಿ ನಡೆಸಬೇಕಾದ ಮುನ್ನೆಚ್ಚರಿಕೆಯ ಕ್ರಮಗಳ ಬಗ್ಗೆ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
Maharashtra poll ; ಕಣದಲ್ಲಿ ಉಳಿದಿದ್ದು 4,140 ಅಭ್ಯರ್ಥಿಗಳು
DMK ನಾಶವೇ ಹೊಸ ಪಕ್ಷದ ಉದ್ದೇಶ: ವಿಜಯ್ ವಿರುದ್ಧ ಸ್ಟಾಲಿನ್ ಕಿಡಿ
WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್ ಅಧಿಕಾರಿ ದೂರು
Elephants; ಮಧ್ಯಪ್ರದೇಶ ಬಳಿಕ ಒಡಿಶಾದಲ್ಲಿ 7 ತಿಂಗಳಿನಲ್ಲಿ 50 ಆನೆಗಳ ಸಾವು
MUST WATCH
ಹೊಸ ಸೇರ್ಪಡೆ
Director Guruprasad: ಗುರುಪ್ರಸಾದ್‌ಗೆ ಸಾಲ ಕೊಟ್ಟವರ ತನಿಖೆಗೆ ಸಿದ್ಧತೆ
Drunk & Drive Case: ಅತಿ ವೇಗದ ಚಾಲನೆ: 522 ಕೇಸ್, 1.29 ಲಕ್ಷ ದಂಡ
Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ
Sandalwood: ಕರಾವಳಿ ಸಂಸ್ಕೃತಿ ಸುತ್ತ ದಿಂಸೋಲ್
Puttur: ವಿದ್ಯುತ್ ಕಂಬ ಏರುವ ತರಬೇತಿ!; ಪವರ್‌ಮನ್ ಉದ್ಯೋಗಕ್ಕೆ ಸ್ಥಳೀಯರಿಗೆ ಪ್ರೋತ್ಸಾಹ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.