ತೀವ್ರ ವಿರೋಧದ ನಡುವೆ ಕೃಷಿಗೆ ಸಂಬಂಧಿಸಿದ 2 ಮಸೂದೆಗಳಿಗೆ ರಾಜ್ಯಸಭೆಯಲ್ಲಿ ಅಂಗೀಕಾರ
Team Udayavani, Sep 20, 2020, 3:25 PM IST
ನವದೆಹಲಿ: ತೀವ್ರ ವಿರೋಧದ ನಡುವೆಯೂ ಕೃಷಿಗೆ ಸಂಬಂಧಿಸಿದ ಎರಡು ಮಸೂದೆಗಳನ್ನು ಧ್ವನಿ ಮತದ ಮೂಲಕ ರಾಜ್ಯಸಭೆಯಲ್ಲಿ ಅಂಗಿಕರಿಸಲಾಗಿದೆ.
ರೈತರು ಮತ್ತು ಬೆಳೆಗಳ ವ್ಯಾಪಾರ, ವಾಣಿಜ್ಯ ಮಸೂದೆ 2020 (ಪ್ರಚಾರ ಮತ್ತು ಸೌಲಭ್ಯ) ಮತ್ತು ರೈತರು (ಸಬಲೀಕರಣ ಮತ್ತು ಸಂರಕ್ಷಣೆ) ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಮಸೂದೆ 2020 ಮಸೂದೆಗಳಿಗೆ ಅಂಗಿಕಾರವನ್ನು ಪಡೆಯಲು ಕೇಂದ್ರ ಸರ್ಕಾರ ಯಶಸ್ವಿಯಾಗಿದೆ.
ತೃಣಮೂಲ ಕಾಂಗ್ರೆಸ್, ಆಮ್ ಆದ್ಮಿ, ಕಾಂಗ್ರೆಸ್ ಸೇರಿದಂತೆ ಇತರ ವಿರೋಧ ಪಕ್ಷಗಳು ಮಸೂದೆಯನ್ನು ವಿರೋಧಿಸಿ ತೀವ್ರ ಪ್ರತಿಭಟನೆ ನಡೆಸಿದವು, ಪ್ರತಿಭಟನೆಯ ನಡುವೆಯೇ ಮಸೂದೆಯನ್ನು ಅಂಗೀಕರಿಸಲಾಗಿದೆ. ಮಾತ್ರವಲ್ಲದೆ ಪ್ರತಿಪಕ್ಷಗಳ ಗದ್ದಲದ ಹಿನ್ನೆಲೆಯಲ್ಲಿ ರಾಜ್ಯಸಭೆಯ ಕಲಾಪವನ್ನು ಸೋಮವಾರ ಬೆಳಿಗ್ಗೆ 9 ಗಂಟೆವರೆಗೆ ಮುಂದೂಡಲಾಗಿದೆ.
ಇದನ್ನೂ ಓದಿ:ಕೃಷಿ ಮಸೂದೆ ರಾಜ್ಯಸಭೆಯಲ್ಲಿ ಮಂಡನೆ: ರೈತರ ಡೆತ್ ವಾರೆಂಟ್ ಗೆ ಸಹಿ ಮಾಡಲ್ಲವೆಂದ ಕಾಂಗ್ರೆಸ್ !
ಧ್ವನಿ ಮತದ ವೇಳೆ, ವಿರೋಧ ಪಕ್ಷದ ಸದಸ್ಯರು ಸದನದ ಬಾವಿಗೆ ಧಾವಿಸಿ ನಿಯಮ ಪುಸ್ತಕ ಹರಿದು ಹಾಕಿದ್ದಾರೆ. ಮಾತ್ರವಲ್ಲದೆ ಉಪಸಭಾಧ್ಯಕ್ಷರ ಮೈಕ್ರೋಫೋನ್ ಕಸಿದುಕೊಳ್ಳಲು ಯತ್ನಿಸಿದ್ದಾರೆ. ಇದರಿಂದ ಚರ್ಚೆಯೂ ಗೊಂದಲದಲ್ಲಿ 10 ನಿಮಿಷಗಳ ಕಾಲ ಮುಂದೂಡಿಕೆಯಾಗಿತ್ತು. ನಂತರ ಸದನ ಆರಂಭಗೊಂಡಾಗ ಧ್ವನಿ ಮತದ ಮೂಲಕ ಕೃಷಿ ಮಸೂದೆಗೆ ಅಂಗೀಕಾರ ದೊರೆತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.