ದಿಲ್ಲಿಯಲ್ಲಿ ಎಲ್ಪಿಜಿ ಬ್ಲಾಸ್ಟ್: ಇಬ್ಬರು ಅಗ್ನಿಶಾಮಕ ಸಿಬಂದಿ ಸಾವು
Team Udayavani, Feb 24, 2017, 11:43 AM IST
ಹೊಸದಿಲ್ಲಿ : ಪಶ್ಚಿಮ ದಿಲ್ಲಿಯ ವಿಕಾಸ್ಪುರಿಯ ಅಂಗಡಿಯೊಂದರಲ್ಲಿ ಸಂಭವಿಸಿದ ಎಲ್ಪಿಜಿ ಸಿಲಿಂಡರ್ ಬ್ಲಾಸ್ಟ್ನಿಂದ ಉಂಟಾದ ಭಾರೀ ಬೆಂಕಿಯನ್ನು ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿದ್ದ ಅಗ್ನಿಶಾಮಕ ದಳದ ಇಬ್ಬರು ಸಿಬಂದಿಗಳು ದಾರುಣವಾಗಿ ಮೃತಪಟ್ಟಿರುವುದು ವರದಿಯಾಗಿದೆ.
ಇಂದು ನಸುಕಿನ 5.35ರ ಹೊತ್ತಿಗೆ ಅಂಗಡಿಯೊಂದರಲ್ಲಿ ಎಲ್ಪಿಜಿ ಸಿಲಿಂಡರ್ ಬ್ಲಾಸ್ಟ್ ಆಗಿತ್ತು. ಸುದ್ದಿ ತಿಳಿದ ಅಗ್ನಿಶಾಮಕ ದಳ ಒಡನೆಯೇ ಅಲ್ಲಿಗೆ ಧಾವಿಸಿತ್ತು. ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿದ್ದವರ ಪೈಕಿ ಇಬ್ಬರು ಅಗ್ನಿ ಶಾಮಕ ದಳದ ಹರಿ ಸಿಂಗ್ ಮೀಣ ಮತ್ತು ಹರಿ ಓಂ ಎಂಬವರು ಬೆಂಕಿಯ ಕೆನ್ನಾಲಗೆಗೆ ಸಿಲುಕಿ ಸುಟ್ಟು ಕರಕಲಾದರು.
ಇನ್ನಿಬ್ಬರು ಅಗ್ನಿ ಶಾಮಕದಳದ ಸಿಬಂದಿಗಳಾದ ನವೀನ್ ಮತ್ತು ರವೀಂದರ್ ಎಂಬವರಿಗೆ ತೀವ್ರ ಸುಟ್ಟ ಗಾಯಗಳಾಗಿದ್ದು ಅವರನ್ನು ಬಿ ಎಲ್ ಕಪೂರ್ ಆಸ್ಪತ್ರೆಗೆ ಸೇರಿಸಲಾಗಿದೆ. ಇವರ ಸ್ಥಿತಿ ಚಿಂತಾಜನಕವಿದೆ ಎಂದು ತಿಳಿದು ಬಂದಿದೆ.
ಬೆಳಗ್ಗೆ 5.30ರ ಹೊತ್ತಿಗೆ ವಿಕಾಸ್ಪುರಿಯ ಲಾಲ್ ಮಾರ್ಕೇಟ್ನ ಎಚ್ ಬ್ಲಾಕ್ನಲ್ಲಿರುವ 10 ಅಡಿ x 10 ಅಡಿ ಸ್ಥಳಾವಕಾಶದ ಸಣ್ಣ ಅಂಗಡಿಯೊಂದರಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ ಸಂಭವಿಸಿತ್ತು. ಆದರೆ ಇದಕ್ಕೆ ಕಾರಣವೇನು ಎಂಬುದು ಇನ್ನಷ್ಟೇ ಗೊತ್ತಾಗಬೇಕಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
MUST WATCH
ಹೊಸ ಸೇರ್ಪಡೆ
BBK11: ಬಿಗ್ ಬಾಸ್ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ
Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್ ಮದುವೆ?
ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್ ಪಡೆದು ಸಿನಿಮಾದಲ್ಲಿ ಫೇಮ್ ಆದ ಕಲಾವಿದರು
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Desi Swara: ಲಕ್ಸಂಬರ್ಗ್ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.