Wooden Block: ರೈಲು ಹಳಿ ಮೇಲೆ ಮರದ ದಿಮ್ಮಿ ಇಟ್ಟು ದುಷ್ಕೃತ್ಯ… ತಪ್ಪಿದ ದುರಂತ
Team Udayavani, Oct 26, 2024, 12:50 PM IST
ಉತ್ತರಪ್ರದೇಶ: ಇತ್ತೀಚಿನ ದಿನಗಳಲ್ಲಿ ರೈಲು ಹಳಿ ತಪ್ಪಿಸುವ ದುಷ್ಕೃತ್ಯ ಹಲವೆಡೆ ನಡೆದಿದ್ದು ಇದೀಗ ಉತ್ತರ ಪ್ರದೇಶದ ಮಲಿಹಾಬಾದ್ ರೈಲು ನಿಲ್ದಾಣದ ಬಳಿ ರೈಲು ಹಳಿಯ ಮೇಲೆ 6 ಕೆ.ಜಿ.ಗೂ ಅಧಿಕ ಭಾರದ ಮರದ ದಿಮ್ಮಿಯನ್ನು ಇಟ್ಟು ರೈಲು ಹಳಿ ತಪ್ಪಿಸುವ ಯತ್ನ ಗುರುವಾರ(ಅ.24) ತಡರಾತ್ರಿ ನಡೆದಿದ್ದು ಇದೀಗ ಬೆಳಕಿಗೆ ಬಂದಿದೆ.
ರೈಲು ಸಂಖ್ಯೆ 14236 ಬರೇಲಿ-ವಾರಣಾಸಿ ಎಕ್ಸ್‌ಪ್ರೆಸ್ ರೈಲು ದೆಹಲಿ ಮತ್ತು ಲಕ್ನೋ ನಡುವೆ ಸಂಚರಿಸುತ್ತಿದ್ದ ಸಮಯದಲ್ಲಿ ಈ ಘಟನೆ ಸಂಭವಿಸಿದ್ದು ರೈಲು ಹಳಿಗಳ ಮೇಲಿದ್ದ ಮರದ ದಿಮ್ಮಿಗೆ ಡಿಕ್ಕಿ ಹೊಡೆದಿದೆ ಪರಿಣಾಮ ಎಚ್ಚೆತ್ತ ಪೈಲೆಟ್ ಕೂಡಲೇ ರೈಲನ್ನು ನಿಲ್ಲಿಸಿದ್ದಾರೆ, ಪರಿಣಾಮ ಹೆಚ್ಚಿನ ಅವಘಡ ತಪ್ಪಿದೆ, ಇದಾದ ಬಳಿಕ ಪೈಲೆಟ್ ರೈಲ್ವೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು ಅಧಿಕಾರಿಗಳು ಘಟನಾ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಪರಿಶೀಲನೆ ನಡೆಸಿದ ವೇಳೆ ಹಳಿಗಳ ಮೇಲೆ ಮರದ ದಿಮ್ಮಿಗಳು ಪತ್ತೆಯಾಗಿರುವುದು ಬೆಳಕಿಗೆ ಬಂದಿದ್ದು ಇದೊಂದು ವಿಧ್ವಂಸಕ ಕೃತ್ಯ ಎಂದು ಹೇಳಿದ್ದಾರೆ. ಅಲ್ಲದೆ ಸುಮಾರು ಎರಡು ಗಂಟೆಗಳ ತಪಾಸಣೆ ಬಳಿಕ ರೈಲು ಸಂಚಾರ ಮುಂದುವರೆಯಿತು.
ಒಂದು ತಿಂಗಳ ಹಿಂದೆಯಷ್ಟೇ ಉತ್ತರಾಖಂಡದ ರೂರ್ಕಿ ಬಳಿ ರೈಲ್ವೆ ಹಳಿಗಳ ಮೇಲೆ ಖಾಲಿ ಎಲ್‌ಪಿಜಿ ಸಿಲಿಂಡರ್ ಪತ್ತೆಯಾತ್ತು, ಇದಾದ ಬಳಿಕ ರೈಲು ಹಳಿಗಳ ಮೇಲೆ ಸಿಮೆಂಟ್ ಬ್ಲಾಕ್ ಇಟ್ಟು ಹಳಿ ತಪ್ಪಿಸುವ ಯತ್ನ ಕೂಡ ನಡೆದಿತ್ತು, ಆದರೆ ಲೋಕೋ ಪೈಲೆಟ್ ಸಮಯ ಪ್ರಜ್ಞೆಯಿಂದ ಭಾರಿ ಅವಘಡ ತಪ್ಪಿತ್ತು.
ಇದನ್ನೂ ಓದಿ: Bengaluru: ತುಪ್ಪದ 5 ಸ್ಯಾಂಪಲ್‌ಗಳಲ್ಲಿ ಅಪಾಯದ ಅಂಶಗಳು ಪತ್ತೆ: ಸಚಿವ ಗುಂಡೂರಾವ್
14236 Bareilly-Varanasi Express heading Lucknow hit the two-feet-long piece of wood weighing over 6 kg and dragged it for some distance near Malihabad.
FIR lodged. pic.twitter.com/9yFrr4BjgZ
— Arvind Chauhan, very allergic to ‘ya ya’. (@Arv_Ind_Chauhan) October 26, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
Mumbai; ಚುನಾವಣೆಗೆ ಏಕಾಂಗಿ ಸ್ಪರ್ಧೆ: ಉದ್ಧವ್ ಶಿವಸೇನೆ ಇಂಗಿತ!
Kota; ಮತ್ತೊಬ್ಬ ವಿದ್ಯಾರ್ಥಿ ಆತ್ಮಹ*ತ್ಯೆ: ವರ್ಷದ 17ನೇ ಕೇಸು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.