12 ದಿನಗಳಲ್ಲಿ 2 ಲಕ್ಷ ಪ್ರಕರಣ: ರಷ್ಯಾ ಹಿಂದಿಕ್ಕಿ ಮೂರನೇ ಸ್ಥಾನ ಪಡೆಯಲಿದೆಯೇ ಭಾರತ?


Team Udayavani, Jul 2, 2020, 12:01 PM IST

12 ದಿನಗಳಲ್ಲಿ 2 ಲಕ್ಷ ಪ್ರಕರಣ: ರಷ್ಯಾ ಹಿಂದಿಕ್ಕಿ ಮೂರನೇ ಸ್ಥಾನ ಪಡೆಯಲಿದೆಯೇ ಭಾರತ?

ಸಾಂದರ್ಭಿಕ ಚಿತ್ರ

ಹೊಸದಿಲ್ಲಿ: ದೇಶದಲ್ಲಿ ಕೋವಿಡ್ ವ್ಯಾಪಿಸು­ವಿಕೆಯ ವೇಗ ದಿನ ಕಳೆದಂತೆ ಹೆಚ್ಚುತ್ತಿದ್ದು, ಕೇವಲ ಜೂನ್‌ ತಿಂಗಳೊಂದರಲ್ಲೇ 3.86 ಲಕ್ಷಕ್ಕೂ ಹೆಚ್ಚು ಮಂದಿ ಸೋಂಕಿಗೆ ಗುರಿಯಾಗಿದ್ದಾರೆ. ವಿಶ್ವದ ಕೋವಿಡ್ ಹಾಟ್‌ಸ್ಪಾಟ್‌ ದೇಶಗಳ ಪೈಕಿ ಅಮೆರಿಕ, ಬ್ರೆಜಿಲ್‌ ಮತ್ತು ರಷ್ಯಾದ ಅನಂತರದ ಸ್ಥಾನದಲ್ಲಿ ಭಾರತ­ವಿದ್ದು, ಸೋಂಕಿತರ ಸಂಖ್ಯೆ ಇದೇ ರೀತಿ ಹೆಚ್ಚುತ್ತಾ ಹೋದರೆ ಮುಂದಿನ ಒಂದೇ ವಾರದಲ್ಲಿ ನಾವು ರಷ್ಯಾ­ವನ್ನೂ ಹಿಂದಿಕ್ಕಿ 3ನೇ ಸ್ಥಾನಕ್ಕೇರುವ ಆತಂಕವಿದೆ.

ಮೇ 31ರಂದು ಭಾರತದಲ್ಲಿ 1.98 ಲಕ್ಷ ಮಂದಿಗೆ ಸೋಂಕು ದೃಢಪಟ್ಟಿತ್ತು. ಅನಂತರದ ಒಂದು ತಿಂಗಳಲ್ಲಿ ಈ ಸಂಖ್ಯೆ 5.85 ಲಕ್ಷಕ್ಕೇರಿಕೆಯಾಯಿತು. ಕಳೆದ 12 ದಿನಗಳಲ್ಲೇ 2 ಲಕ್ಷ ಸೋಂಕಿತರನ್ನು ದೇಶ ಕಂಡಿದೆ. ಮೇ ಅಂತ್ಯದಲ್ಲಿ 97 ಸಾವಿರವಿದ್ದ ಸಕ್ರಿಯ ಪ್ರಕರಣ­ಗಳ ಸಂಖ್ಯೆ ಈಗ 2.2 ಲಕ್ಷಕ್ಕೇರಿದ್ದು, ಆಸ್ಪತ್ರೆಗಳು ಹಾಗೂ ಆರೋಗ್ಯ ಸೇವಾಕರ್ತರಿಗೆ ಅತಿ ದೊಡ್ಡ ಸವಾಲು ಎದುರಾಗಿದೆ.

ಸಾವಿನ ಸಂಖ್ಯೆಯೂ ಹೆಚ್ಚಳ: ಜೂನ್‌ ತಿಂಗಳೊಂ­ದರಲ್ಲಿ 11,800 ಮಂದಿ ಕೊರೊನಾಕ್ಕೆ ಬಲಿಯಾಗಿ­ದ್ದಾರೆ. ಕಳೆದ ಮೂರು ತಿಂಗಳಲ್ಲಿ ಸಂಭವಿಸಿದ ಸಾವುಗಳಿಗೆ ಹೋಲಿಸಿದರೆ ಇದು ಎರಡು ಪಟ್ಟು ಅಧಿಕ. ಸಮಾಧಾನಕರ ವಿಷಯವೆಂದರೆ, ಮೇ ಅಂತ್ಯದಲ್ಲಿ ಸೋಂಕು ದೃಢಪಟ್ಟವರ ಸಂಖ್ಯೆ ಶೇ.4.78ರ ದರದಲ್ಲಿ ಏರಿಕೆಯಾಗುತ್ತಿದ್ದರೆ, ಈಗ ಅದು ಶೇ.3.16ಕ್ಕಿಳಿದಿದೆ. ಮಹಾರಾಷ್ಟ್ರದಲ್ಲಿ ಪ್ರತಿ ದಿನವೂ ಅತಿ ಹೆಚ್ಚು ಪ್ರಕರಣಗಳು ಪತ್ತೆಯಾಗುತ್ತಿವೆ. ಇತ್ತೀಚೆಗೆ ದಿಲ್ಲಿ, ತಮಿಳುನಾಡು ಮಾತ್ರವಲ್ಲದೆ, ತೆಲಂಗಾಣ, ಆಂಧ್ರಪ್ರದೇಶ ಮತ್ತು ಕರ್ನಾಟಕ­ದಲ್ಲೂ ಹೆಚ್ಚು ಹೆಚ್ಚು ಮಂದಿಗೆ ಸೋಂಕು ದೃಢಪಡುತ್ತಿರುವುದು ಆತಂಕದ ಸಂಗತಿಯಾಗಿದೆ.

ಒಂದೇ ದಿನ ದೇಶದಲ್ಲಿ 507 ಸಾವು
ಮೊದಲ ಬಾರಿಗೆ ದೇಶದಲ್ಲಿ ಒಂದೇ ದಿನ 507 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಮಂಗಳವಾರ ಬೆಳಗ್ಗೆ 8ರಿಂದ ಬುಧವಾರ ಬೆಳಗ್ಗೆ 8ರವರೆಗೆ ಗರಿಷ್ಠ ಸಂಖ್ಯೆಯ ಸಾವಿನ ಪ್ರಕರಣ ಗಳು ವರದಿಯಾಗಿದ್ದು, 18,653 ಮಂದಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಸತತ 5ನೇ ದಿನವೂ ದೈನಂದಿನ ಪ್ರಕರಣಗಳ ಸಂಖ್ಯೆ 18 ಸಾವಿರದ ಗಡಿ ದಾಟಿದಂತಾಗಿದೆ. ಈವರೆಗಿನ ಸಾವಿನ ಪ್ರಮಾಣದಲ್ಲಿ ಶೇ.70ರಷ್ಟು ಪ್ರಕರಣಗಳು ಮಹಾರಾಷ್ಟ್ರ, ದಿಲ್ಲಿ ಮತ್ತು ತಮಿಳುನಾಡು ರಾಜ್ಯಗಳಿಗೆ ಸೀಮಿತವಾಗಿವೆ. ಇದೇ ವೇಳೆ, 3.47 ಲಕ್ಷಕ್ಕೂ ಹೆಚ್ಚು ಮಂದಿ ಗುಣಮುಖರಾಗುವ ಮೂಲಕ, ಗುಣಮುಖ ಪ್ರಮಾಣ ಶೇ.59.43ಕ್ಕೇರಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಟಾಪ್ ನ್ಯೂಸ್

MONEY (2)

Belagavi; ಸಂಘದ ಹೆಸರಲ್ಲಿ ಮಹಿಳೆಯರಿಗೆ 19.35 ಕೋಟಿ ರೂ. ಮಹಾ ವಂಚನೆ!

1-vitla

Vitla; ನಿವೃತ್ತ ಶಿಕ್ಷಕ, ಅರ್ಥಧಾರಿ ಪಕಳಕುಂಜ ಶ್ಯಾಮ ಭಟ್ ವಿಧಿವಶ

1-donald

Trump warns; ಹಮಾಸ್ ಒತ್ತೆಯಾಳುಗಳನ್ನು ಬಿಡುಗಡೆ ಮಾಡದಿದ್ದರೆ ನರಕ…

Yakshagana

Yakshagana: ಕಾಲಮಿತಿ, ಕಾಲಗತಿಯ ಕಾಲದ ಯಕ್ಷಗಾನ-ಚಿಂತನೆ

EC-Comm-sangreshi1

ಜಿ.ಪಂ.,ತಾ.ಪಂ. ಚುನಾವಣೆ ವಿಳಂಬಕ್ಕೆ ಸರಕಾರವೇ ನೇರ ಹೊಣೆ, ನಾವು ಚುನಾವಣೆಗೆ ಸಿದ್ಧ: ಆಯೋಗ

Cong-CM-Dinner-Meet

Dinner Politics: ಡಿಸಿಎಂ ಡಿಕೆಶಿ ದೂರು; ಕಾಂಗ್ರೆಸ್‌ ಡಿನ್ನರ್‌ಗೆ ಹೈ ಕಮಾಂಡ್‌ ತಡೆ

Naxal-Meeting

Naxal Surrender: ಕೊನೆಗೂ ಕರ್ನಾಟಕ ರಾಜ್ಯ ಸಂಪೂರ್ಣ ನಕ್ಸಲ್‌ ಮುಕ್ತವಾಯಿತೇ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Why do most earthquakes occur in the Himalayan foothills?

Earthquakes: ಹಿಮಾಲಯದ ತಪ್ಪಲಲ್ಲಿ ಅತೀ ಹೆಚ್ಚು ಭೂಕಂಪ ಸಂಭವಿಸುವುದೇಕೆ?

“Bharatpol” for international police cooperation

Bharatpol: ಅಂತಾರಾಷ್ಟ್ರೀಯ ಪೊಲೀಸ್‌ ಸಹಕಾರಕ್ಕೆ “ಭಾರತ್‌ಪೋಲ್‌’

Kerala: Skull found in fridge of house that had been abandoned for 20 years!

Kerala: 20 ವರ್ಷದಿಂದ ಪಾಳು ಬಿದಿದ್ದ ಮನೆಯ ಫ್ರಿಡ್ಜಲ್ಲಿ ತಲೆಬುರುಡೆ ಪತ್ತೆ!

Indian astronomers discover the creation of a new galaxy!

Galaxy: ಹೊಸ ಗ್ಯಾಲಕ್ಸಿ ಸೃಷ್ಟಿಯನ್ನು ಕಂಡುಹಿಡಿದ ಭಾರತದ ಖಗೋಳ ವಿಜ್ಞಾನಿಗಳು!

Shahrukh’s wife Gauri converted?: Deep fake photo viral

AI: ಶಾರುಖ್‌ ಪತ್ನಿ ಗೌರಿ ಮತಾಂತರ?: ಡೀಪ್‌ ಫೇಕ್‌ ಫೋಟೋ ವೈರಲ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

MONEY (2)

Belagavi; ಸಂಘದ ಹೆಸರಲ್ಲಿ ಮಹಿಳೆಯರಿಗೆ 19.35 ಕೋಟಿ ರೂ. ಮಹಾ ವಂಚನೆ!

1-vitla

Vitla; ನಿವೃತ್ತ ಶಿಕ್ಷಕ, ಅರ್ಥಧಾರಿ ಪಕಳಕುಂಜ ಶ್ಯಾಮ ಭಟ್ ವಿಧಿವಶ

1-donald

Trump warns; ಹಮಾಸ್ ಒತ್ತೆಯಾಳುಗಳನ್ನು ಬಿಡುಗಡೆ ಮಾಡದಿದ್ದರೆ ನರಕ…

Yakshagana

Yakshagana: ಕಾಲಮಿತಿ, ಕಾಲಗತಿಯ ಕಾಲದ ಯಕ್ಷಗಾನ-ಚಿಂತನೆ

EC-Comm-sangreshi1

ಜಿ.ಪಂ.,ತಾ.ಪಂ. ಚುನಾವಣೆ ವಿಳಂಬಕ್ಕೆ ಸರಕಾರವೇ ನೇರ ಹೊಣೆ, ನಾವು ಚುನಾವಣೆಗೆ ಸಿದ್ಧ: ಆಯೋಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.