ಶೋಪಿಯಾನ್ ಗುಂಡಿನ ಕಾಳಗ: ಇಬ್ಬರು ಉಗ್ರರ, ಇತರ ನಾಲ್ವರು ಬಲಿ
Team Udayavani, Mar 5, 2018, 11:42 AM IST
ಶ್ರೀನಗರ : ಜಮ್ಮು ಕಾಶ್ಮೀರದ ದಕ್ಷಿಣ ಶೋಪಿಯಾನ್ ಜಿಲ್ಲೆಯ ದುರ್ಗಮ ಗ್ರಾಮವೊಂದರಲ್ಲಿ ನಿನ್ನೆ ಭಾನುವಾರ ರಾತ್ರಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ನಡೆದಿದ್ದ ಗುಂಡಿನ ಕಾಳಗದಲ್ಲಿ ಮೃತಪಟ್ಟವರ ಸಂಖ್ಯೆ ಆರಕ್ಕೆ ಏರಿದೆ. ಗುಂಡಿನ ಕಾಳಗ ಏರ್ಪಟ್ಟಿದ್ದ ತಾಣದಲ್ಲಿ ಇಂದು ಇನ್ನೂ ಒಂದು ಶವ ಪತ್ತೆಯಾಯಿತು. ಹತರಾದವರಲ್ಲಿ ಇಬ್ಬರು ಎಲ್ ಇ ಟಿ ಉಗ್ರರು ಮತ್ತು ಇತರರು ನಾಲ್ವರು ಎಂದು ಸೇನೆ ತಿಳಿಸಿದೆ.
ಗುಂಡೇಟಿನಿಂದ ತುಂಬಿದ್ದ ಶವವನ್ನು ಲಷ್ಕರ್ ಎ ತಯ್ಯಬ ಸಂಘಟನೆಯ ಉಗ್ರ ಆಶಿಕ್ ಹಸೇನ್ ಭಟ್ ನದ್ದೆಂದು ಗೊತ್ತಾಗಿದೆ. ಸೇನೆಯ 44ನೇ ರಾಷ್ಟ್ರೀಯ ರೈಫಲ್ ಪಡೆ ಮತ್ತು ಉಗ್ರರ ನಡುವೆ ಪಹನೂ ಎಂಬಲ್ಲಿಂದ ಹತ್ತು ಕಿ.ಮೀ. ದೂರದ ಸೈದಾಪೋರಾದಲ್ಲಿನ ಆ್ಯಪಲ್ ತೋಟವೊಂದರಲ್ಲಿ ಭಾನುವಾರ ರಾತ್ರಿ ಗುಂಡಿನ ಕಾಳಗ ನಡೆದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಭದ್ರತಾ ಪಡೆಗಳ ಗುಂಡಿಗೆ ಆರು ಮಂದಿ ಹತರಾದುದನ್ನು ಅನುಸರಿಸಿ ಶೋಪಿಯಾನ್‌ನ ಹಲವು ಭಾಗಗಳಲ್ಲಿ ಭಾರೀ ಪ್ರತಿಭಟನೆ ವ್ಯಕ್ತವಾಗಿತ್ತು. ಕಲ್ಲೆಸೆಯುವ ಪ್ರತಿಭಟನಕಾರರನ್ನು ಎದುರಿಸಲು ಪೊಲೀಸರು ಮತ್ತು ಭದ್ರತಾ ಪಡೆಗಳು ಹರಸಾಹಸ ನಡೆಸಬೇಕಾಯಿತು.
ಇಂದು ಪತ್ತೆಯಾದ ಹತ ಉಗ್ರನನ್ನು ಶೋಪಿಯಾನ್‌ನ ಜಾಮ್‌ನಗರೀ ಗ್ರಾಮದ ನಿವಾಸಿಯಾಗಿರುವ ಶಾಹೀದ್ ಅಹ್ಮದ್ ದಾರ್ ಎಂದು ಗುರುತಿಸಲಾಗಿದೆ. ಸೇನೆಯ ಗುಂಡಿಗೆ ಬಲಿಯಾದ ಪೌರರನ್ನು ಇನ್ನಷ್ಟೇ ಗುರುತಿಸಬೇಕಾಗಿದೆ.
ಉಗ್ರರ ವಿರುದ್ಧದ ಸೇನಾ ಕಾರ್ಯಾಚರಣೆಗೆ ತಡೆಒಡ್ಡಿದವರು ಲಷ್ಕರ್ ಉಗ್ರಸಂಘಟನೆಯ ಮೇಲ್ಪದರದ ಕಾರ್ಯಕರ್ತರಾಗಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ. ಮೃತ ಪೌರರಲ್ಲಿ ಓರ್ವನನ್ನು 24ರ ಹರೆಯದ ಗೌಹರ್ ಅಹ್ಮದ್ ಲೋನ್ ಎಂದು ಸ್ಥಳೀಯರು ಗುರುತಿಸಿದ್ದಾರೆ. ಆತನ ಶವ ಗುಂಡಿನ ಕಾಳಗ ನಡೆದಿದ್ದ ತಾಣಕ್ಕೆ ಸಮೀಪ ವ್ಯಾಗನ್ ಆರ್ ಕಾರಿನಲ್ಲಿ ಪತ್ತೆಯಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP: ರಾಜ್ಯಗಳಿಂದಲೇ ಮಾಲಿನ್ಯ ಹೆಚ್ಚಳ: ದಿಲ್ಲಿ ಸಿಎಂ ಆತಿಶಿ ಆರೋಪ
Maharashtra Elections: ವಿಪಕ್ಷ ನಾಯಕ ರಾಹುಲ್ ಛೋಟಾ ಪೋಪಟ್: ಬಿಜೆಪಿ ವಕ್ತಾರ ಲೇವಡಿ
Rahul Gandhi: ಮೋದಿ, ಅದಾನಿ, ಅಂಬಾನಿ ಒಟ್ಟಾದರೆ ಸುರಕ್ಷಿತ, ಇದೇ ಅರ್ಥ
Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು
Akhilesh Yadav: ಉ.ಪ್ರ.ದಲ್ಲಿ ಬಾಬಾ ಸಾಹೇಬ್ ಮತ್ತು ಬಾಬಾ ನಡುವಿನ ಹೋರಾಟ
MUST WATCH
ಹೊಸ ಸೇರ್ಪಡೆ
Health Department: ಸರಕಾರಿ ಆಸ್ಪತ್ರೆ, ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ: ಸಚಿವ ದಿನೇಶ್
Mysuru: ಕೋವಿಡ್ ವೇಳೆ ಔಷಧ ಖರೀದಿಯಲ್ಲಿ ನನ್ನ ಪಾತ್ರವಿಲ್ಲ: ಡಾ.ಸಿ.ಎನ್.ಮಂಜುನಾಥ್
Inquiry Report: ಬಿಜೆಪಿಗೆ ’40 ಪರ್ಸೆಂಟ್’ ಕ್ಲೀನ್‌ಚಿಟ್ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್
Udupi: ಚಿನ್ನ, ವಜ್ರಾಭರಣ ಕದ್ದು ಹೋಂ ನರ್ಸ್ ಪರಾರಿ!
Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.