Building Collapses: ನಿರ್ಮಾಣ ಹಂತದ ಕಟ್ಟಡ ಕುಸಿದು ಇಬ್ಬರು ಮೃತ್ಯು , 17 ಮಂದಿಗೆ ಗಾಯ
Team Udayavani, Apr 15, 2024, 10:32 AM IST
ಉತ್ತರಪ್ರದೇಶ: ನಿರ್ಮಾಣ ಹಂತದ ಕಟ್ಟಡದ ಮೇಲ್ಛಾವಣಿ ಕುಸಿದು ಇಬ್ಬರು ಕಾರ್ಮಿಕರು ಮೃತಪಟ್ಟು 17 ಮಂದಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಮುಜಾಫರ್ನಗರದಲ್ಲಿ ನಡೆದಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಮುಜಾಫರ್ನಗರದ ಮಾರುಕಟ್ಟೆ ಪ್ರದೇಶದಲ್ಲಿ ಈ ಅವಘಡ ಸಂಭವಿಸಿದ್ದು ಕಟ್ಟಡದ ಅವಶೇಷಗಳಡಿ ಸಿಲುಕಿದ್ದ 19 ಕಾರ್ಮಿಕರನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಲಾಗಿದೆ. 19 ಕಾರ್ಮಿಕರ ಪೈಕಿ ಇಬ್ಬರು ಗಂಭೀರ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಘಟನೆ ಕುರಿತು ಮಾಹಿತಿ ನೀಡಿದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಧ್ರುವ ಕಾಂತ್ ಠಾಕೂರ್ ಗಾಯಗೊಂಡ ಕಾರ್ಮಿಕರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಗೆ ಸಂಬಂಧಿಸಿ ಕಟ್ಟಡ ಮಾಲೀಕ ಹಾಗೂ ಗುತ್ತಿಗೆದಾರನನ್ನು ಬಂಧಿಸಲಾಗಿದೆ ಎಂದು ಹೇಳಿದ್ದಾರೆ.
ಘಟನೆಗೆ ಸಂಬಂಧಿಸಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮೃತ ಕಾರ್ಮಿಕರಿಗೆ ಸಂತಾಪ ಸೂಚಿಸಿದ್ದು, ಗಾಯಗೊಂಡ ಕಾರ್ಮಿಕರಿಗೆ ಉತ್ತಮ ಚಿಕಿತ್ಸೆ ನೀಡುವಂತೆ ವೈದ್ಯಾಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಇದನ್ನೂ ಓದಿ: Hospitalized: ದೇವಸ್ಥಾನದ ಪ್ರಸಾದ ಸೇವಿಸಿ, ಓರ್ವ ಮೃತ್ಯು, 75ಕ್ಕೂ ಹೆಚ್ಚು ಮಂದಿ ಅಸ್ವಸ್ಥ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.