ISI ಸಂಚು; ದೆಹಲಿಯಲ್ಲಿ ಬೇಹುಗಾರಿಕೆ ನಡೆಸುತ್ತಿದ್ದ ಪಾಕ್ ನ ಇಬ್ಬರು ಅಧಿಕಾರಿಗಳ ಬಂಧನ
ಈ ಅಧಿಕಾರಿಗಳಿಗೆ ಪಾಕಿಸ್ತಾನ ಸೇನೆಯ ಜತೆ ಸಂಪರ್ಕ ಇದ್ದಿರುವುದಾಗಿ ಮೂಲಗಳು ಹೇಳಿವೆ
Team Udayavani, Jun 1, 2020, 1:51 PM IST
ನವದೆಹಲಿ:ಭಾರತೀಯ ಅಧಿಕಾರಿಗಳನ್ನು ಹಿಂಬಾಲಿಸಿ ಗೂಢಚರ್ಯೆ ನಡೆಸುತ್ತಿದ್ದ ದೆಹಲಿಯಲ್ಲಿರುವ ಪಾಕಿಸ್ತಾನ ಹೈ ಕಮೀಷನ್ ನ ಇಬ್ಬರು ಅಧಿಕಾರಿಗಳು ಹಾಗೂ ಚಾಲಕನನ್ನು ಭಾನುವಾರ ಬಂಧಿಸಿರುವ ಘಟನೆ ನಡೆದಿದೆ ಎಂದು ವರದಿ ತಿಳಿಸಿದೆ.
ದೆಹಲಿಯಲ್ಲಿರುವ ಪಾಕಿಸ್ತಾನ ರಾಯಭಾರಿ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಈ ಅಧಿಕಾರಿಗಳಿಗೆ ಪಾಕಿಸ್ತಾನ ಸೇನೆಯ ಜತೆ ಸಂಪರ್ಕ ಇದ್ದಿರುವುದಾಗಿ ಮೂಲಗಳು ಹೇಳಿರುವುದಾಗಿ ವರದಿ ವಿವರಿಸಿದೆ.
ಸೇನಾ ಗುಪ್ತಚರ ಇಲಾಖೆ, ಐಬಿ ಅಧಿಕಾರಿಗಳು ಮತ್ತು ದೆಹಲಿಯ ವಿಶೇಷ ಸೆಲ್ ಜಂಟಿಯಾಗಿ ನಡೆಸಿದ ಕಾರ್ಯಾಚರಣೆಯಲ್ಲಿ ನವ ದೆಹಲಿಯ ಕರೋಲ್ ಬಾಗ್ ನಲ್ಲಿ ಮೂವರು ರೆಡ್ ಹ್ಯಾಂಡ್ ಆಗಿ ಬಲೆ ಬಿದ್ದಿರುವುದಾಗಿ ವರದಿ ಹೇಳಿದೆ.
ವರದಿಯ ಪ್ರಕಾರ, ಇಬ್ಬರು ಅಧಿಕಾರಿಗಳನ್ನು ಅಬಿದ್ ಹುಸೈನ್ ಮತ್ತು ತಾಹೀರ್ ಹುಸೈನ್ ಎಂದು ಗುರುತಿಸಲಾಗಿದೆ. ಪಾಕಿಸ್ತಾನದ ಐಎಸ್ ಐ ರಹಸ್ಯ ಸಂಚಿನ ಪ್ರಕಾರ ಇಬ್ಬರೂ ಪಾಕಿಸ್ತಾನ ಹೈಕಮೀಷನ್ ನ ವೀಸಾ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದರು ಎಂದು ವರದಿ ವಿವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.