ಪೊಲೀಸರನ್ನು ಕೊಂದು ಪಂಜಾಬ್ ನಿಂದ ಪರಾರಿಯಾಗಿದ್ದ ಇಬ್ಬರು ಸ್ಮಗ್ಲರ್ ಗಳು ಗುಂಡೇಟಿಗೆ ಬಲಿ
Team Udayavani, Jun 11, 2021, 11:09 AM IST
ಕೋಲ್ಕತ್ತಾ: ಪಂಜಾಬ್ ನ ಇಬ್ಬರು ಡ್ರಗ್ ಸ್ಮಗ್ಲರ್ ಗಳನ್ನು ಪಶ್ಚಿಮ ಬಂಗಾಳದಲ್ಲಿ ಹತ್ಯೆ ಮಾಡಲಾಗಿದೆ. ಪಂಜಾಬ್ ನ ಲೂಧಿಯಾನದಲ್ಲಿ ಇಬ್ಬರು ಪೊಲೀಸರನ್ನು ಹತ್ಯೆ ಮಾಡಿ ಪರಾರಿಯಾಗಿದ್ದ ಇಬ್ಬರನ್ನು ಕೋಲ್ಕತ್ತಾದ ಹೊರವಲಯದಲ್ಲಿ ಪೊಲೀಸರು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.
ಜೈಪುಲ್ ಸಿಂಗ್ ಭುಲ್ಲಾರ್ ಮತ್ತು ಜಸ್ಪ್ರೀತ್ ಸಿಂಗ್ ಎನ್ ಕೌಂಟರ್ ನಲ್ಲಿ ಹತ್ಯೆಯಾದ ಡ್ರಗ್ ಸ್ಮಗ್ಲರ್ ಗಳು. ಅಪಾರ್ಟ್ ಮೆಂಟ್ ಒಂದರಲ್ಲಿ ಕ್ರಿಮಿನಲ್ ಗಳು ಇದ್ದಾರೆಂಬ ಮಾಹಿತಿಯ ಮೇರೆಗೆ ವಿಶೇಷ ಟಾಸ್ಕ್ ಫೋರ್ಸ್ ದಾಳಿ ನಡೆಸಿತ್ತು. ಈ ವೇಳೆ ದುಷ್ಕರ್ಮಿಗಳು ಪೊಲೀಸರತ್ತ ಗುಂಡಿನ ದಾಳಿ ನಡೆಸಿದ್ದು, ಪ್ರತಿದಾಳಿ ನಡೆಸಲಾಗಿದೆ. ಘಟನೆಯಲ್ಲಿ ಇಬ್ಬರು ಗುಂಡೇಟು ತಿಂದು ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ:ಭಾರತದಲ್ಲಿ ಕಳೆದ 24ಗಂಟೆಯಲ್ಲಿ 91 ಸಾವಿರ ಕೋವಿಡ್ ಪ್ರಕರಣ ಪತ್ತೆ, 3,403 ಸಾವು
ಘಟನೆಯಲ್ಲಿ ಓರ್ವ ಪೊಲೀಸ್ ಇನ್ಸ್ ಪೆಕ್ಟರ್ ಗಾಯಗೊಂಡಿದ್ದಾರೆ. ಸ್ಥಳದಿಂದ ಏಳು ಲಕ್ಷ ರೂ ನಗದು, ಐದು ಆಯುಧಗಳನ್ನು ವಶಪಡಿಸಿಕೊಳ್ಳಲಾಗಿದೆ.
ಈ ಇಬ್ಬರು ಸ್ಮಗ್ಲರ್ ಗಳು ಲೂಧಿಯಾನದಲ್ಲಿ ಇಬ್ಬರು ಪೊಲೀಸರನ್ನು ಹತ್ಯೆ ಮಾಡಿ ಪರಾರಿಯಾಗಿದ್ದರು. ಜೈಪಾಲ್ ಭುಲ್ಲರ್ ಮತ್ತು ಜಸ್ಪ್ರೀತ್ ಸಿಂಗ್ ತಲೆಗೆ ಕ್ರಮವಾಗಿ ಹತ್ತು ಲಕ್ಷ ರೂ ಮತ್ತು ಐದು ಲಕ್ಷ ರೂ ಬಹುಮಾನ ಘೋಷಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್
ನಾನು ಶೀಶಮಹಲ್ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್
Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್… ರಸ್ತೆಯಲ್ಲೇ ನಡೆಯಿತು ಪವಾಡ
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್
Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್ ಜಾಮೀನ ಮಂಜೂರು
Vijay Hazare; ವಾಸುಕಿ,ಗೋಪಾಲ್ ಬೊಂಬಾಟ್ ಬೌಲಿಂಗ್; ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ
ಗದಗ: ಮಾವು ಬಂಪರ್ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.