ಕಾಶ್ಮೀರ: ಭದ್ರತಾ ಪಡೆಗಳ ಎನ್ ಕೌಂಟರ್ ಗೆ ಇಬ್ಬರು ಉಗ್ರರು ಬಲಿ
Team Udayavani, Jun 10, 2020, 8:19 AM IST
ಶ್ರೀನಗರ: ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಸುಗೂ ಹೆಂಧಾಮ ಪ್ರದೇಶದಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಬುಧವಾರ (10=06-2020) ಭೀಕರ ಗುಂಡಿನ ಚಕಮಕಿ ನಡೆದಿದೆ ಎಂದು ವರಿದಯಾಗಿದೆ. ಗುಂಡಿನ ಕಾಳಗದಲ್ಲಿ ಸೇನಾಪಡೆ , ಇಬ್ಬರು ಭಯೋತ್ಪಾದಕರನ್ನು ಎನ್ಕೌಂಟರ್ ಮೂಲಕ ಹತ್ಯೆಗೈದಿದ್ದು, ಇನ್ನು ಕಾರ್ಯಾಚರಣೆ ಪ್ರಗತಿಯಲ್ಲಿದೆ.
ಪೊಲೀಸ್, ಭಾರತೀಯ ಸೇನೆ ಮತ್ತು ಸಿಆರ್ಪಿಎಫ್ ಜಂಟಿ ತಂಡವು ಬುಧವಾರ ಬೆಳಿಗ್ಗೆ ಸುಗೂ ಹೆಂಧಮಾದಲ್ಲಿ ಉಗ್ರರು ಅಡಗಿರುವ ಖಚಿತ ಮಾಹಿತಿ ಪಡೆದು ಕಾರ್ಯಾಚರಣೆಗಿಳಿದಿದ್ದವು. ಈ ವೇಳೆ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ. ಭದ್ರತಾ ಪಡೆಗಳು ಕೂಡ ಪ್ರತ್ಯುತ್ತರ ನೀಡಿದ್ದು ಇಬ್ಬರು ಉಗ್ರರನ್ನು ಹೊಡೆದುರುಳಿಸಿವೆ.
ಈ ಕುರಿತು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಾಧ್ಯಮಕ್ಕೆ ಮಾಹಿತಿ ನೀಡಿದ್ದು, ಬುಧವಾರ ಮುಂಜಾನೆ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಲಾಯಿತು. ಸ್ಥಳದಲ್ಲಿ ಇನ್ನು ಹಲವು ಉಗ್ರರು ಅಡಗಿರುವ ಸಾಧ್ಯತೆ ಇದ್ದು ಶೋಧ ಕಾರ್ಯ ನಡೆಯುತ್ತಿದೆ ಎಂದರು.
ಈ ವಾರದಲ್ಲಿ ಶೋಪಿಯಾನ್ ಜಿಲ್ಲೆಯಲ್ಲಿ ನಡೆದ ಮೂರನೇ ಎನ್ ಕೌಂಟರ್ ಇದಾಗಿದೆ. ಭಾನುವಾರ ಮತ್ತು ಸೋಮವಾರ ನಡೆದ ಎರಡು ಎನ್ಕೌಂಟರ್ ಗಳಲ್ಲಿ 9 ಉಗ್ರರನ್ನು ಹತ್ಯೆಗೈಯಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳಿವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.