ಕವಿತಾ,ರೆಹಾನಾಗೆ ಸಿಗಲಿಲ್ಲ ಶಬರಿ ಮಲೆ ಪ್ರವೇಶ; ಭಾರೀ ಆಕ್ರೋಶ


Team Udayavani, Oct 19, 2018, 10:47 AM IST

553.jpg

ತಿರುವನಂತಪುರಂ: ಶಬರಿಮಲೆ ದೇಗುಲಕ್ಕೆ ಮಹಿಳೆಯರ ಪ್ರವೇಶ ವಿಷಯ ಕೇರಳದಲ್ಲಿ  ಬಿಗುವಿನ ವಾತಾವರಣ ಮುಂದುವರಿದಿದ್ದು, ಶುಕ್ರವಾರ ದೇವಾಲಯದ ಒಳಗೆ ಪ್ರವೇಶಿಸಲು ಭಾರೀ ಪೊಲೀಸ್‌ ಪಡೆಗಳ ಕೋಟೆಯ ನಡುವೆ ಮುಂದಾದ ಇಬ್ಬರು ಮಹಿಳೆಯರಿಗೆ ಅವಾಕಶವನ್ನು ನೀಡಲಾಗಿಲ್ಲ. 

ಹೈದಾರಾಬಾದ್‌ನ ಮೋಜೋ ಟಿವಿಯ ಪತ್ರಕರ್ತೆ ಕವಿತಾ ಜಕ್ಕಲ್‌ ಮತ್ತು ರೆಹನಾ ಫಾತಿಮಾ ಮುಸ್ಲಿಂ ಮಹಿಳೆಯಾಗಿಯೂ ಪೊಲೀಸ್‌ ಕೋಟೆಯ ಬೆಂಬಲದೊಂದಿಗೆ ಶಬರಿ ಮಲೆ ಪ್ರವೇಶಕ್ಕೆ ಮುಂದಾಗಿದ್ದರು. ಆದರೆ ಶುಕ್ರವಾರ ದೇವಾಲಯದ ಮುಂಭಾಗ  ವ್ಯಾಪಕ ವಿರೋಧ ವ್ಯಕ್ತವಾದ ಹಿನ್ನಲೆಯಲ್ಲಿ  ಇಬ್ಬರನ್ನೂ ಹಿಂದಕ್ಕೆ ಕಳುಹಿಸಲಾಗಿದೆ.

ದೇವಾಲಯದ ಸುತ್ತ ಸಾವಿರಾರು ಭಕ್ತರು ಕೋಟೆ ನಿರ್ಮಿಸಿದ ಹಿನ್ನಲೆಯಲ್ಲಿ  ಮಹಿಳೆಯರಿಬ್ಬರಿಗೆ ಕಮಾಂಡೋ ಮಾದರಿಯಲ್ಲಿ 200 ಕ್ಕೂ ಹೆಚ್ಚು ಪೊಲೀಸರ ಭದ್ರತೆ ನಿಯೋಜಿಸಲಾಗಿತ್ತು. 

ದೇವಾಲಯದ 4 ಕಿ.ಮೀ ದೂರದಿಂದ ಇಬ್ಬರು ಪಾದಾಯಾತ್ರೆಯಲ್ಲಿ ದೇವಾಲಯಕ್ಕೆ ತೆರಳಿದ್ದರು.  

ಕಲ್ಲು ತೂರಾಟ ನಡೆಯುವ ಸಾಧ್ಯತೆಗಳಿದ್ದ ಹಿನ್ನಲೆಯಲ್ಲಿ ಪೊಲೀಸರೊಂದಿಗೆ ಮಹಿಳೆಯರಿಬ್ಬರು ಹೆಲ್ಮೆಟ್‌ ಗಳನ್ನು ಧರಿಸಿದ್ದರು. 

ಮಹಿಳೆಯರಿಗೆ ದೇವಾಲಯ ಪ್ರವೇಶಿಸುವ ಹಕ್ಕು ಇದೆ ಹಾಗಾಗಿ ನಾವು ಅವರಿಗೆ ಭದ್ರತೆ ನೀಡಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ. 

ಬುಧವಾರದಿಂದ ಇಲ್ಲಿಯವರೆಗೆ 50 ವರ್ಷದ ಒಳಗಿನ ಯಾವುದೇ ಮಹಿಳೆಗೆ ದೇವಾಲಯ ಪ್ರವೇಶಿಸಲು ಸಾಧ್ಯವಾಗಿಲ್ಲ. ಗುರುವಾರ ನ್ಯೂಯಾರ್ಕ್ ಟೈಮ್ಸ್ ನ ಪತ್ರಕರ್ತೆಗೆ ಭಾರೀ ವಿರೋಧ ತೋರಿ ಹಿಂದಕ್ಕೆ ಕಳುಹಿಸಲಾಗಿತ್ತು.

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರು ಮಹಿಳೆಯರು ದೇವಾಲಯ ಪ್ರವೇಶಿಸುವುದನ್ನು ಯಾರೂ ತಡೆಯಬಾರದು.ಯಾರಿಗೂ ಇದಕ್ಕೆ ಅವಕಾಶ ನೀಡುವುದಿಲ್ಲ ಎಂದಿದ್ದಾರೆ

ರೆಹನಾ ವಿರುದ್ಧ  ಅಯ್ಯಪ್ಪ ಭಕ್ತರು ಸಾಮಾಜಿಕ ತಾಣಗಳಲ್ಲಿ ವ್ಯಾಪಕ ಆಕ್ರೋಶ ಹೊರ ಹಾಕುತ್ತಿದ್ದಾರೆ.

ಕವಿತಾ ಕಾರ್ಯ ನಿರ್ವಹಿಸುವ ಹೈದರಾಬಾದ್‌ನ  ಬಂಜಾರಾ ಹಿಲ್ಸ್‌ನಲ್ಲಿರುವ ಮೋಜೋ ಟಿವಿ ಕಚೇರಿಯ ಮೇಲೆ ಉದ್ರಿಕ್ತರು ಕಲ್ಲು  ತೂರಾಟ ನಡೆಸಿದ್ದಾರೆ ಟಿವಿ ಕಚೇರಿಗೆ ಪೊಲೀಸ್‌ ಭದ್ರತೆ ಒದಗಿಸಲಾಗಿದೆ. 

ಟಾಪ್ ನ್ಯೂಸ್

Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

CT Ravi attacks the state government

Vijayapura: ಕರ್ನಾಟಕ ಸಾವಿನ ಮನೆಯಾಗಿದೆ: ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

Viral: ಇದು ಇರುವೆಗಳ ಎಂಜಿನಿಯರಿಂಗ್‌ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ

Viral: ಇದು ಇರುವೆಗಳ ಎಂಜಿನಿಯರಿಂಗ್‌ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ

Indian Cricket: Former RCB player said goodbye to cricket life

Indian Cricket: ಕ್ರಿಕೆಟ್‌ ಜೀವನಕ್ಕೆ ಗುಡ್‌ ಬೈ ಹೇಳಿದ ಆರ್‌ಸಿಬಿ ಮಾಜಿ ಆಟಗಾರ

14-bbk

Bigg Boss ಶೋ ಸ್ಥಗಿತಗೊಳಿಸಿ: ಬೆಂಗಳೂರು ಜಿಪಂ ಸಿಇಒ ಸೂಚನೆ

Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್

Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್

ಕಂಬಳದಲ್ಲಿ ನಿಯಮಗಳು ಆಟಕ್ಕುಂಟು ಲೆಕ್ಕಕ್ಕಿಲ್ಲ..? ಸಮಸ್ಯೆ ನೂರು- ಪರಿಹಾರ ಕೊಡುವವರು ಯಾರು?

ಕಂಬಳದಲ್ಲಿ ನಿಯಮಗಳು ಆಟಕ್ಕುಂಟು ಲೆಕ್ಕಕ್ಕಿಲ್ಲ..? ಸಮಸ್ಯೆ ನೂರು- ಪರಿಹಾರ ಕೊಡುವವರು ಯಾರು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Henley Passport Index: Singapore tops: How strong is India’s passport?

Henley Passport Index: ಸಿಂಗಾಪುರಕ್ಕೆ ಮೊದಲ ಸ್ಥಾನ: ಭಾರತದ ಪಾಸ್‌ಪೋರ್ಟ್ ಎಷ್ಟು ಸದೃಢ?

Dense Fog: ದೆಹಲಿ-ಲಖನೌ ಹೆದ್ದಾರಿಯಲ್ಲಿ ಸರಣಿ ಅಪಘಾತ, ವಿಮಾನ, ರೈಲು ಸಂಚಾರದಲ್ಲಿ ವ್ಯತ್ಯಯ

Dense Fog: ದೆಹಲಿ-ಲಖನೌ ಹೆದ್ದಾರಿಯಲ್ಲಿ ಸರಣಿ ಅಪಘಾತ, ವಿಮಾನ, ರೈಲು ಸಂಚಾರದಲ್ಲಿ ವ್ಯತ್ಯಯ

ಸೊಸೆಯಾಗಿ ಬರಬೇಕಾಗಿದ್ದವಳನ್ನೇ ಮದುವೆಯಾದ ಅಪ್ಪ… ಬೇಸರದಿಂದ ಸನ್ಯಾಸಿಯಾಗಲು ಹೊರಟ ಮಗ

ಸೊಸೆಯಾಗಿ ಬರಬೇಕಾಗಿದ್ದವಳನ್ನೇ ಮದುವೆಯಾದ ಅಪ್ಪ… ಬೇಸರದಿಂದ ಸನ್ಯಾಸಿಯಾಗಲು ಹೊರಟ ಮಗ

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23 ಶಾಲೆಗೆ ಬಾಂಬ್ ಬೆದರಿಕೆ ಹಾಕಿದ 12ನೇ ತರಗತಿ ವಿದ್ಯಾರ್ಥಿ

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದ 12ನೇ ತರಗತಿ ವಿದ್ಯಾರ್ಥಿ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

CT Ravi attacks the state government

Vijayapura: ಕರ್ನಾಟಕ ಸಾವಿನ ಮನೆಯಾಗಿದೆ: ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

Viral: ಇದು ಇರುವೆಗಳ ಎಂಜಿನಿಯರಿಂಗ್‌ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ

Viral: ಇದು ಇರುವೆಗಳ ಎಂಜಿನಿಯರಿಂಗ್‌ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ

Indian Cricket: Former RCB player said goodbye to cricket life

Indian Cricket: ಕ್ರಿಕೆಟ್‌ ಜೀವನಕ್ಕೆ ಗುಡ್‌ ಬೈ ಹೇಳಿದ ಆರ್‌ಸಿಬಿ ಮಾಜಿ ಆಟಗಾರ

17-uv-fusion

Nature: ಶ್ರೀಮಂತನಾದರೂ, ಬಡವನಾದರೂ ಪ್ರಕೃತಿಗೆ ಅವಲಂಬಿಯೇ ಅಲ್ಲವೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.