ಬೆಳೆಗಳಿಗೆ ಕೀಟನಾಶಕ ಸಿಂಪಡಣೆ: ಮಹಾರಾಷ್ಟ್ರದಲ್ಲಿ 20 ರೈತರ ಸಾವು
Team Udayavani, Oct 9, 2017, 6:30 AM IST
ಮುಂಬಯಿ: ಕಳೆದ ಒಂದು ತಿಂಗಳಲ್ಲಿ ಮಹಾರಾಷ್ಟ್ರದ ಯಾವತ್ಮಲ್ ಜಿಲ್ಲೆಯಲ್ಲಿ ಬೆಳೆಗಳಿಗೆ ಕೀಟನಾಶಕ ಸಿಂಪಡಣೆ ಮಾಡಿದ 20ಕ್ಕೂ ಹೆಚ್ಚು ರೈತರು ಸಾವನ್ನಪ್ಪಿದ್ದಾರೆ. ಸುಮಾರು 600 ರೈತರಿಗೆ ಕೀಟನಾಶಕ ಸಿಂಪಡಣೆಯಿಂದ ಆರೋಗ್ಯ ಸಮಸ್ಯೆ ಉಂಟಾಗಿದೆ. ದೃಷ್ಟಿ ಸಮಸ್ಯೆ, ವಾಕರಿಕೆ, ಚರ್ಮದ ದದ್ದುಗಳು, ತಲೆನೋವು ಸಮಸ್ಯೆ ಕಾಣಿಸಿಕೊಂಡಿದೆ. ಸಿಂಪಡಣೆ ವೇಳೆ ರೈತರು ಯಾವುದೇ ಸುರಕ್ಷತಾ ಕವಚವನ್ನು ಧರಿಸಿರಲಿಲ್ಲ. ಹೊಸ ಸಿಂಪಡಣೆ ಯಂತ್ರ ಮತ್ತು ಕೇಂದ್ರ ಕೀಟನಾಶಕ ಮಂಡಳಿಯ ಹೊಸ ನಿಯಮವೇ ಇದಕ್ಕೆ ಕಾರಣ ಎಂದು ಪರಿಣತರು ಹೇಳಿದ್ದಾರೆ.
ಈ ಮಧ್ಯೆ ಪರಿಹಾರ ಕ್ರಮವಾಗಿ ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರವನ್ನು ಮಹಾರಾಷ್ಟ್ರ ಸರಕಾರ ಘೋಷಿಸಿದೆ. ಅಲ್ಲದೆ ಈ ಬಗ್ಗೆ ತನಿಖೆಗೆ ಆದೇಶಿಸಿದೆ. ಸುರಕ್ಷಾ ಕವಚಗಳನ್ನು ವಿತರಿಸದೇ ಕೀಟನಾಶಕಗಳನ್ನು ಮಾರಾಟ ಮಾಡಿದ ಐವರು ಕೃಷಿ ಸೇವಾ ಕೇಂದ್ರದ ಮಾಲಕರ ವಿರುದ್ಧ ದೂರು ದಾಖಲಿಸಲಾಗಿದೆ. ಇನ್ನೊಂದೆಡೆ ಈ ಸಂಬಂಧ ಬಾಂಬೆ ಹೈಕೋರ್ಟ್ ಪ್ರಕರಣದ ವಿಚಾರಣೆ ನಡೆಸಿ, ಸಂಬಂಧಿತ ಅಧಿಕಾರಿಗಳು ಮತ್ತು ಕೀಟನಾಶಕ ಕಂಪೆನಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ನಿರ್ದೇಶಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸೊಸೆಯಾಗಿ ಬರಬೇಕಾಗಿದ್ದವಳನ್ನೇ ಮದುವೆಯಾದ ಅಪ್ಪ… ಬೇಸರದಿಂದ ಸನ್ಯಾಸಿಯಾಗಲು ಹೊರಟ ಮಗ
Bhopal: ಬಿಜೆಪಿ ಮಾಜಿ ಶಾಸಕ ಸಿಂಗ್ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!
ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದ 12ನೇ ತರಗತಿ ವಿದ್ಯಾರ್ಥಿ
Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್, ಟ್ರಾಫಿಕ್ ಜಾಮ್
Man Fined: ಹೀಗೂ ಉಂಟೇ…! ಹೆಲ್ಮೆಟ್ ಧರಿಸಿಲ್ಲ ಎಂದು ಪಾದಚಾರಿಗೆ ದಂಡ ವಿಧಿಸಿದ ಪೊಲೀಸ್
MUST WATCH
ಹೊಸ ಸೇರ್ಪಡೆ
Divorce: ಚಾಹಲ್ ಬಳಿಕ ಇದೀಗ ಮನೀಶ್ ಪಾಂಡೆ ವಿಚ್ಛೇದನ? ಏನಿದು ವರದಿ
ಸೊಸೆಯಾಗಿ ಬರಬೇಕಾಗಿದ್ದವಳನ್ನೇ ಮದುವೆಯಾದ ಅಪ್ಪ… ಬೇಸರದಿಂದ ಸನ್ಯಾಸಿಯಾಗಲು ಹೊರಟ ಮಗ
ಅರಾಟೆ ಸೇತುವೆ: ಅಪಘಾತ ವಲಯ! ಬೆಳಕಿಲ್ಲ, ಸಿಗ್ನಲ್ ಲೈಟ್ ಉರಿಯುತ್ತಿಲ್ಲ!
Yakshagana: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರ ಯಕ್ಷ ಸೇವೆಗೆ ಪಾರ್ತಿಸುಬ್ಬ ಪ್ರಶಸ್ತಿ ಗರಿ
Gundlupete: ಹುರುಳಿ ಕಾವಲು ಕಾಯುತ್ತಿದ್ದ ರೈತನ ಮೇಲೆ ಆನೆ ದಾಳಿ; ಕೈ ಕುತ್ತಿಗೆಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.