Gujarat ; ಸಿಡಿಲಿಗೆ 20 ಮಂದಿ ಮೃತ್ಯು: ಅಮಿತ್ ಶಾ ಸಂತಾಪ
Team Udayavani, Nov 27, 2023, 5:40 PM IST
ಅಹ್ಮದಾಬಾದ್ : ಗುಜರಾತ್ ನಲ್ಲಿ ಅಕಾಲಿಕವಾಗಿ ಸಿಡಿಲಿನ ಆರ್ಭಟದೊಂದಿಗೆ ಸುರಿದ ವ್ಯಾಪಕ ಮಳೆಯ ಸಂದರ್ಭದಲ್ಲಿ 20 ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.
ಗುಜರಾತ್‌ನ ವಿವಿಧ ಭಾಗಗಳಲ್ಲಿ ಸಿಡಿಲು ಬಡಿದು ಹಲವರು ಪ್ರಾಣ ಕಳೆದುಕೊಂಡಿದ್ದಾರೆ. ದಾಹೋದ್ ಜಿಲ್ಲೆಯಲ್ಲಿ ನಾಲ್ವರು, ಭರೂಚ್‌ನಲ್ಲಿ ಮೂವರು, ತಾಪಿಯಲ್ಲಿ ಇಬ್ಬರು ಮತ್ತು ಅಹಮದಾಬಾದ್, ಅಮ್ರೇಲಿ, ಬನಸ್ಕಾಂತ, ಬೊಟಾಡ್, ಖೇಡಾ, ಮೆಹ್ಸಾನಾ, ಪಂಚಮಹಲ್, ಸಬರ್ಕಾಂತ, ಸೂರತ್, ಸುರೇಂದ್ರನಗರ ಮತ್ತು ದೇವಭೂಮಿ ದ್ವಾರಕಾದಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆ ಎಂದು ಎಸ್‌ಇಒಸಿ ಅಧಿಕಾರಿ ತಿಳಿಸಿದ್ದಾರೆ.
IMD ಅಹಮದಾಬಾದ್ ಕೇಂದ್ರದ ನಿರ್ದೇಶಕಿ ಮನೋರಮಾ ಮೊಹಂತಿ ಅವರು ಸೋಮವಾರ ಮಳೆ ಕಡಿಮೆಯಾಗಲಿದ್ದು, ದಕ್ಷಿಣ ಗುಜರಾತ್ ಮತ್ತು ಸೌರಾಷ್ಟ್ರ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಕೇಂದ್ರೀಕೃತವಾಗಿರಲಿದೆ. ಈಶಾನ್ಯ ಅರಬ್ಬಿ ಸಮುದ್ರ ಮತ್ತು ಪಕ್ಕದ ಸೌರಾಷ್ಟ್ರ ಮತ್ತು ಕಚ್ ಪ್ರದೇಶಗಳಲ್ಲಿ ಚಂಡಮಾರುತದ ಪರಿಚಲನೆಯಿಂದಾಗಿ ಮಳೆಯಾಗುತ್ತಿದೆ ಎಂದು ತಿಳಿಸಿದೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ, ಸಾವನ್ನಪ್ಪಿದವರಿಗೆ ಸಂತಾಪ ಸೂಚಿಸಿದ್ದು, ಸ್ಥಳೀಯ ಆಡಳಿತವು ಪರಿಹಾರ ಕಾರ್ಯದಲ್ಲಿ ತೊಡಗಿದೆ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pawan Kalyan: ಕಾನೂನು ಎಲ್ಲರಿಗೂ ಒಂದೇ: ಅಲ್ಲು ಬಂಧನಕ್ಕೆ ಆಂಧ್ರ ಡಿಸಿಎಂ ಪ್ರತಿಕ್ರಿಯೆ
Delhi: 9 ವರ್ಷಗಳಲ್ಲೇ ಡಿಸೆಂಬರ್ ತಿಂಗಳಲ್ಲಿ ಅತ್ಯಂತ ಸ್ವಚ್ಛ ಗಾಳಿ!
Tamil Nadu: ಸ್ತ್ರೀಯರಿಗೆ ರಕ್ಷಣೆ ಕಲ್ಪಿಸಿ: ತಮಿಳುನಾಡು ಗೌರ್ನರ್‌ಗೆ ನಟ ವಿಜಯ್ ಮನವಿ
ರೊಹಿಂಗ್ಯಾಗಳಿಗೆ ನೆಲೆ: ಕೇಜ್ರಿವಾಲ್, ಕೇಂದ್ರ ಸಚಿವ ಮಧ್ಯೆ ವಾಗ್ಯುದ್ಧ
Mumbai: ಮಹಾರಾಷ್ಟ್ರದಲ್ಲಿ ಅಸುನೀಗಿದ ಹುಲಿ ಮರಿ ಶವ ಪತ್ತೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
America: ಎಚ್-1ಬಿ ವೀಸಾ ವ್ಯವಸ್ಥೆ ಸುಧಾರಣೆ ಬೇಕು: ಒಂದೇ ದಿನದಲ್ಲಿ ಮಸ್ಕ್ ಉಲ್ಟಾ!
Authortiy: ವರ್ಷದಲ್ಲಿ ದಾಖಲೆಯ 17 ಪರೀಕ್ಷೆ ನಡೆಸಿ ಫಲಿತಾಂಶ ಪ್ರಕಟಿಸಿದ ಕೆಇಎ
ಫ್ರಾನ್ಸ್ ಮೂಲದ ಸಂಸ್ಕೃತ ವಿದ್ವಾಂಸ ಪಿಯರಿ ಸಿಲ್ವೇನ್ ಫಿಲಿಯೋಜಾ ನಿಧನ
ಸಿ.ಟಿ.ರವಿ ಪ್ರಕರಣದ ತನಿಖೆ ಸಭಾಪತಿಯೇ ನಡೆಸಲಿ: ಮಾಜಿ ಸಚಿವ ಕಿಮ್ಮನೆ ರತ್ನಾಕರ್
Mangaluru; ಪ್ರತ್ಯೇಕ ಚೆಕ್‌ಬೌನ್ಸ್ ಪ್ರಕರಣ: ಇಬ್ಬರು ಖುಲಾಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.