Uttarakhand: ಕಮರಿಗೆ ಉರುಳಿದ ಬಸ್… 28 ಮಂದಿ ಮೃತ್ಯು… ಹಲವರ ಸ್ಥಿತಿ ಗಂಭೀರ
Team Udayavani, Nov 4, 2024, 11:53 AM IST
ಉತ್ತರಾಖಂಡ: ಚಾಲಕನ ನಿಯಂತ್ರಣ ತಪ್ಪಿದ ಬಸ್ಸೊಂದು ಕಮರಿಗೆ ಉರುಳಿ ಬಿದ್ದ ಪರಿಣಾಮ ಕನಿಷ್ಠ 28 ಪ್ರಯಾಣಿಕರು ಮೃತಪಟ್ಟು ಹಲವು ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಉತ್ತರಾಖಂಡದ ಅಲ್ಮೋರಾದಲ್ಲಿ ಸೋಮವಾರ (ನ.4) ಸಂಭವಿಸಿದೆ.
ಸೋಮವಾರ ಬೆಳಿಗ್ಗೆ ಸುಮಾರು 9 ಗಂಟೆಯ ವೇಳೆಗೆ ಅಪಘಾತ ಸಂಭವಿಸಿದ್ದು 35 ಪ್ರಯಾಣಿಕರನ್ನು ಹೊತ್ತ ಬಸ್ಸು ಗರ್ವಾಲ್‌ನಿಂದ ಕುಮಾವೂನ್‌ಗೆ ಪ್ರಯಾಣಿಸುತ್ತಿದ್ದಾಗ ಮಾರ್ಚುಲಾ ಬಳಿ ಚಾಲಕನ ನಿಯಂತ್ರಣ ತಪ್ಪಿ 200 ಅಡಿ ಆಳದ ಕಮರಿಗೆ ಉರುಳಿ ಬಿದ್ದಿದೆ
ಘಟನೆ ಸಂಭವಿಸಿದ ವಿಚಾರ ತಿಳಿಯುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ಪೊಲೀಸರು ಮತ್ತು ಸ್ಥಳೀಯರ ತಂಡಗಳು ಮಾರ್ಚುಲಾ ಸಾಲ್ಟ್ ಪ್ರದೇಶದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ.
ಬಸ್ಸಿನಲ್ಲಿ ಮೃತದೇಹಗಳನ್ನು ಹೊರತೆಗೆಯುವ ಕಾರ್ಯ ನಡೆಯುತ್ತಿದ್ದು ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅಲ್ಮೋರಾ ಪೊಲೀಸ್ ವರಿಷ್ಠಾಧಿಕಾರಿ ದೇವೇಂದ್ರ ಪಿಂಚಾ ತಿಳಿಸಿದ್ದಾರೆ. ಅಲ್ಲದೆ ಗಂಭೀರ ಗಾಯಗೊಂಡವರನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದಿದ್ದಾರೆ.
WATCH | Uttarakhand: A Garwal Motors user’s bus fell into a gorge near Kupi in Ramnagar at the Pauri-Almora border. Deaths and injuries are feared. Search and rescue operations are underway. Details awaited.#BusAccident #Uttarakhand #BusFell pic.twitter.com/G05yrnIY0v
— TIMES NOW (@TimesNow) November 4, 2024
ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ವಿಪತ್ತು ನಿರ್ವಹಣಾ ಕಾರ್ಯದರ್ಶಿ, ಕುಮಾವೂನ್ ವಿಭಾಗದ ಕಮಿಷನರ್ ಮತ್ತು ಅಲ್ಮೋರಾದ ಜಿಲ್ಲಾ ಮ್ಯಾಜಿಸ್ಟ್ರೇಟ್ ಅವರೊಂದಿಗೆ ಮಾತನಾಡಿ ಅಪಘಾತದ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ ಅಲ್ಲದೆ ಅಪಘಾತದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದ್ದು ಗಾಯಗೊಂಡವರಿಗೆ ಉತ್ತಮ ಚಿಕಿತ್ಸೆ ನೀಡುವಂತೆ ಸೂಚನೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
Mumbai; ಚುನಾವಣೆಗೆ ಏಕಾಂಗಿ ಸ್ಪರ್ಧೆ: ಉದ್ಧವ್ ಶಿವಸೇನೆ ಇಂಗಿತ!
Kota; ಮತ್ತೊಬ್ಬ ವಿದ್ಯಾರ್ಥಿ ಆತ್ಮಹ*ತ್ಯೆ: ವರ್ಷದ 17ನೇ ಕೇಸು
Ambedkar; ಅವಮಾನ ಖಂಡಿಸಿ ಕಾಂಗ್ರೆಸ್ ಆಂದೋಲನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.