ಸೋನಿಯಾ ನಿವಾಸದಲ್ಲಿ ಔತಣಕೂಟ : 20 ಪಕ್ಷಗಳ ನಾಯಕರು ಭಾಗಿ
Team Udayavani, Mar 14, 2018, 2:48 PM IST
ನವದೆಹಲಿ: ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಪ್ರತಿಪಕ್ಷಗಳ ನಾಯಕರಿಗಾಗಿ ಮಂಗಳವಾರ ರಾತ್ರಿ ಏರ್ಪಡಿಸಿದ್ದ ಔತಣಕೂಟದಲ್ಲಿ, 20 ಪಕ್ಷಗಳ ನಾಯಕರು ಪಾಲ್ಗೊಂಡಿದ್ದರು. 2019ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ಹೊಸ ರಂಗವನ್ನು ಸ್ಥಾಪಿಸುವ ಕುರಿತು ಇಲ್ಲಿ ಚರ್ಚೆ ನಡೆಯುವ ಸಾಧ್ಯತೆಯಿದೆ.
ಎನ್‌ಸಿಪಿ, ಆರ್‌ಜೆಡಿ, ಸಮಾಜವಾದಿ ಪಕ್ಷ, ಬಿಎಸ್‌ಪಿ, ತೃಣಮೂಲ ಕಾಂಗ್ರೆಸ್, ಡಿಎಂಕೆ ಮತ್ತು ಎಡಪಕ್ಷಗಳ ನಾಯಕರು ಸೇರಿದಂತೆ ಅನೇಕರು ಈ ಔತಣಕೂಟದಲ್ಲಿ ಭಾಗಿಯಾಗಿದ್ದರು ಎಂದು ಮೂಲಗಳು ತಿಳಿಸಿವೆ. ಆರ್‌ಜೆಡಿಯಿಂದ ಲಾಲು ಪ್ರಸಾದ್ ಅವರ ಮಕ್ಕಳಾದ ತೇಜಸ್ವಿ ಯಾದವ್ ಮತ್ತು ಮಿಸಾ ಭಾರ್ತಿ ಪಾಲ್ಗೊಂಡಿದ್ದರು. ಈ ಹಿಂದೆಯೇ ಪ್ರತಿಪಕ್ಷಗಳ ಒಗ್ಗಟ್ಟಿಗೆ ಕರೆ ನೀಡಿದ್ದ ಸೋನಿಯಾ ಅವರು, ಬಿಜೆಪಿಯನ್ನು ಅಧಿಕಾರದಿಂದ ದೂರವಿಡುವ ಸಲುವಾಗಿ ಪ್ರತಿಪಕ್ಷಗಳೆಲ್ಲ ತಮ್ಮ ನಡುವಿನ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳನ್ನು ಬದಿಗಿಡಬೇಕು ಎಂದಿದ್ದರು. ಈ ಹಿನ್ನೆಲೆಯಲ್ಲಿ ಮಂಗಳವಾರದ ಔತಣಕೂಟ ಮಹತ್ವ ಪಡೆದಿದೆ. ಇದೇ ವೇಳೆ, ಟಿಡಿಪಿ, ಬಿಜೆಡಿ ಮತ್ತು ಟಿಆರ್‌ಎಸ್‌ಗೆ ಸೋನಿಯಾ ಗಾಂಧಿ ಆಹ್ವಾನ ನೀಡಿರಲಿಲ್ಲ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.