200 ರೂ. ನೋಟು ಶೀಘ್ರ; ಖಚಿತಪಡಿಸಿದ ಆರ್ಬಿಐ
Team Udayavani, Aug 24, 2017, 6:05 AM IST
ಹೊಸದಿಲ್ಲಿ: ಹೊಸ 50 ರೂ. ನೋಟು ಬರಲಿದೆ ಎಂಬ ಸುದ್ದಿ ಹೊರಗೆ ಬಿದ್ದಾಗಿದೆ. ಇದರ ಜತೆಗೆ ಸದ್ಯದಲ್ಲೇ 200 ರೂ. ಮುಖಬೆಲೆಯ ನೋಟು ಕೂಡ ಚಾಲ್ತಿಗೆ ಬರಲಿದೆ.ಈ ಸಂಬಂಧ ಹಣಕಾಸು ಸಚಿವಾಲಯ ಮಾಹಿತಿ ನೀಡಿದ್ದು, ಇದನ್ನು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಖಚಿತಪಡಿಸಿದೆ.
ಆದರೆ ಈ ನೋಟು ಯಾವಾಗ ಚಲಾವಣೆಗೆ ಬರಲಿದೆ ಎಂಬ ಬಗ್ಗೆ ಆರ್ಬಿಐ ಮಾಹಿತಿ ನೀಡಿಲ್ಲ. ಕಡಿಮೆ ಮುಖಬೆಲೆಯ ನೋಟುಗಳನ್ನು ಬಿಡುಗಡೆ ಮಾಡುವಂತೆ ಸರಕಾರದ ಮೇಲೆ ಒತ್ತಡ ಇರುವ ಹಿನ್ನೆಲೆಯಲ್ಲಿ, ಸರಕಾರ ಈ ಕುರಿತು ಆರ್ಬಿಐಗೆ ನಿರ್ದೇಶನ ನೀಡಿತ್ತು. ಆದರೆ ನೋಟುಗಳ ಮುದ್ರಣ ವಿಚಾರವಾಗಿ ಹಾಗೂ ಬಿಡುಗಡೆಗೆ ಸಂಬಂಧಿಸಿಯೂ ಅಂತಿಮ ನಿರ್ಣಯ ಕೈಗೊಳ್ಳಬೇಕಿದೆ. ಆರ್ಬಿಐ ಶೀಘ್ರದಲ್ಲಿಯೇ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ವಿತ್ತ ಸಚಿವ ಅರುಣ್ ಜೇಟಿÉ ಹೇಳಿದ್ದಾರೆ. ಇದೇ ವೇಳೆ 2,000 ರೂ. ಮುಖಬೆಲೆಯ ನೋಟುಗಳನ್ನು ನಿಷೇಧಿಸುವ ಯಾವುದೇ ಪ್ರಸ್ತಾವ ಸರಕಾರದ ಮುಂದಿಲ್ಲ ಎಂದು ಸ್ಪಷ್ಟಪಡಿಸಿದರು.·
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.