![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Dec 31, 2022, 11:51 AM IST
ನವದೆಹಲಿ: 2022ಕ್ಕೆ ಗುಡ್ ಬೈ ಹೇಳಿ ಹೊಸ ವರ್ಷಕ್ಕೆ ಕಾಲಿಡಲು ಸಜ್ಜಾಗಿದ್ದು, 2023 ಭಾರತ ರಾಜಕೀಯವಾಗಿ ಭಾರೀ ಮಹತ್ವ ಪಡೆದುಕೊಂಡಿದೆ. ಅದಕ್ಕೆ ಕಾರಣ ಹಲವು ರಾಜ್ಯಗಳಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆ. ಈ ವಿಧಾನಸಭೆ ಚುನಾವಣೆಯ ಫಲಿತಾಂಶ 2024ರಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆ ಮೇಲೆ ಮಹತ್ವದ ಪರಿಣಾಮ ಬೀರಲಿದೆ ಎಂಬುದು ಗಮನಾರ್ಹ ಅಂಶವಾಗಿದೆ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ:ಅಪಘಾತದ ವೇಳೆ ಪಂತ್ ಗೆ ಸಹಾಯ ಮಾಡಿದವರಿಗೆ ಸರ್ಕಾರದಿಂದ ಗೌರವ
ಕರ್ನಾಟಕ, ರಾಜಸ್ಥಾನ, ಮಧ್ಯಪ್ರದೇಶ, ಚತ್ತೀಸ್ ಗಢ್, ತೆಲಂಗಾಣ, ತ್ರಿಪುರಾ, ಮೇಘಾಲಯ, ನಾಗಾಲ್ಯಾಂಡ್ ಮತ್ತು ಮಿಜೋರಾಂ ಸೇರಿದಂತೆ 9 ರಾಜ್ಯಗಳಲ್ಲಿ 2023ರಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ.
ಈ ರಾಜ್ಯಗಳ ಚುನಾವಣಾ ಫಲಿತಾಂಶ ತುಂಬಾ ಮುಖ್ಯವಾಗಿದೆ. ಯಾಕೆಂದರೆ ಇದು 2024ರಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಗೆ ಮತದಾರರ ತೀರ್ಪಿನ ದಿಕ್ಸೂಚಿಯಾಗಲಿದೆ. 9 ರಾಜ್ಯಗಳ ಚುನಾವಣಾ ಫಲಿತಾಂಶ ರಾಷ್ಟ್ರರಾಜಕಾರಣದ ಭವಿಷ್ಯವನ್ನು ನಿರ್ಧರಿಸಲು ನೆರವಾಗಲಿದೆ ಎಂದು ವರದಿ ವಿವರಿಸಿದೆ.
2023ರಲ್ಲಿ 9 ರಾಜ್ಯಗಳಲ್ಲಿ ಚುನಾವಣೆ:
2023ರಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಗಳು ಬಿಜೆಪಿ ವಿರೋಧಿ ಪಕ್ಷಗಳಿಗೆ ಮಹತ್ವದ್ದಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ವಿಪಕ್ಷಗಳು ಆಡಳಿತಾರೂಢ ಪಕ್ಷದ ವಿರುದ್ಧ ಒಗ್ಗೂಡುವ ಮೂಲಕ ಸವಾಲು ಹಾಕಲು ಸಿದ್ಧತೆ ನಡೆಸಿವೆ. 2014ರಿಂದ ಕೇಂದ್ರದಲ್ಲಿ ಭಾರತೀಯ ಜನತಾ ಪಕ್ಷ ಅಧಿಕಾರದ ಗದ್ದುಗೆಯಲ್ಲಿದೆ. ಇತ್ತೀಚೆಗೆ ನಡೆದ ರಾಜ್ಯ ವಿಧಾನಸಭೆ ಚುನಾವಣೆಯಗಳಲ್ಲಿಯೂ ಬಿಜೆಪಿ ಮೇಲುಗೈ ಸಾಧಿಸಿದೆ. ಇದೀಗ 2023ರ ವಿಧಾನಸಭೆ ಚುನಾವಣೆಯಲ್ಲಿ ವಿಪಕ್ಷಗಳು ಪ್ರಬಲ ಪ್ರತಿಸ್ಪರ್ಧೆ ಒಡ್ಡಲು ರಣತಂತ್ರ ಹೆಣೆಯುತ್ತಿರುವುದಾಗಿ ವರದಿ ತಿಳಿಸಿದೆ. ಈ ಮೂಲಕ ಲೋಕಸಭಾ ಚುನಾವಣೆಗೆ ಪಕ್ಷವನ್ನು ಬಲಿಷ್ಠವಾಗಿ ಸಿದ್ದಗೊಳಿಸಲು ವಿಪಕ್ಷಗಳು ಸಿದ್ಧತೆ ನಡೆಸುತ್ತಿವೆ.
2023ರ ಚುನಾವಣಾ ಫಲಿತಾಂಶ 2024ರ ಲೋಕಸಭೆ ಚುನಾವಣೆಗೆ ದಿಕ್ಸೂಚಿ:
ಪ್ರಸ್ತುತ ರಾಜಸ್ಥಾನ ಮತ್ತು ಚತ್ತೀಸ್ ಗಢದಲ್ಲಿ ಮಾತ್ರ ಕಾಂಗ್ರೆಸ್ ಅಧಿಕಾರದಲ್ಲಿದೆ. ಈ ಹಿನ್ನೆಲೆಯಲ್ಲಿ ವಿಧಾನಸಭಾ ಚುನಾವಣಾ ಫಲಿತಾಂಶ ಪಕ್ಷಗಳ ಜನಪ್ರಿಯತೆ ಎಷ್ಟರ ಮಟ್ಟಿಗೆ ಇದೆ ಎಂಬ ಅಗ್ನಿಪರೀಕ್ಷೆ ನಡೆಯಲಿದೆ. ಮಧ್ಯಪ್ರದೇಶದಲ್ಲಿ ಬಿಜೆಪಿ ಆಡಳಿತ ಹೊಂದಿದ್ದು, ಕಾಂಗ್ರೆಸ್ ಪ್ರತಿಪಕ್ಷ ಸ್ಥಾನದಲ್ಲಿದೆ. ಮಧ್ಯಪ್ರದೇಶದಲ್ಲಿಯೂ ಕಾಂಗ್ರೆಸ್, ಬಿಜೆಪಿ ನಡುವೆ ತೀವ್ರ ಸ್ಪರ್ಧೆ ಇದೆ. ಕರ್ನಾಟಕದಲ್ಲಿಯೂ ಬಿಜೆಪಿ ಅಧಿಕಾರದಲ್ಲಿದ್ದು, ಕಾಂಗ್ರೆಸ್, ಬಿಜೆಪಿ ಮತ್ತೆ ಅಧಿಕಾರ ಹಿಡಿಯಲು ರಣತಂತ್ರ ಹೆಣೆಯುತ್ತಿವೆ. ಒಟ್ಟಾರೆ 2023ರಲ್ಲಿ ನಡೆಯಲಿರುವ 9 ರಾಜ್ಯಗಳ ಚುನಾವಣಾ ಫಲಿತಾಂಶ 2024ರ ಸಾರ್ವತ್ರಿಕ ಚುನಾವಣೆಗೆ ದಿಕ್ಸೂಚಿಯಾಗಲಿದೆ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.