2024 Election; ಪ್ರಧಾನಿ ಮೋದಿ ರಣತಂತ್ರ: NDA ಮೈತ್ರಿಕೂಟದ ಸಂಸದರೊಂದಿಗೆ ಸರಣಿ ಸಭೆಗಳು

ಇದೇ ಮೊದಲ ಬಾರಿ....160 ಕ್ಷೇತ್ರಗಳಲ್ಲಿ ನಿಕಟವಾಗಿ ಕೆಲಸ ಮಾಡಲು ಈ ಕಸರತ್ತು...!

Team Udayavani, Jul 27, 2023, 6:37 PM IST

PM Mod

ಹೊಸದಿಲ್ಲಿ: ಜುಲೈ 18 ರಂದು ಮೈತ್ರಿಕೂಟದ 25 ವರ್ಷಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ 39 ರಾಷ್ಟ್ರೀಯ ಎನ್‌ಡಿಎ ಮಿತ್ರ ಪಕ್ಷಗಳು ಒಗ್ಗೂಡಿದ ನಂತರ, ಪ್ರಧಾನಿ ನರೇಂದ್ರ ಮೋದಿ ಅವರು ಜುಲೈ 31 ರಿಂದ ಆಗಸ್ಟ್ 10 ರವರೆಗೆ ದೆಹಲಿಯಲ್ಲಿ 430 ಎನ್‌ಡಿಎ ಸಂಸದರನ್ನು ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ. 2024ರ ಲೋಕಸಭೆ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸುತ್ತಿರುವ ವೇಳೆ ಈ ಸಭೆ ಮಹತ್ವ ಪಡೆದುಕೊಂಡಿದೆ.

ಬಿಜೆಪಿ 430 ಸಂಸದರನ್ನು 11 ಕ್ಲಸ್ಟರ್‌ಗಳಾಗಿ ವಿಂಗಡಿಸಿದೆ. ಜುಲೈ 31ರಂದು ಮೊದಲ ದಿನ ಪ್ರಧಾನಿ ಮೋದಿ ಅವರು ಎರಡು ಕ್ಲಸ್ಟರ್‌ಗಳಿಂದ 83 ಸಂಸದರ ಎರಡು ಸಭೆಗಳನ್ನು ನಡೆಸಲಿದ್ದಾರೆ. ಉತ್ತರ ಪ್ರದೇಶದ ಪಶ್ಚಿಮ ಯುಪಿ, ಬ್ರಜ್, ಕಾನ್ಪುರ, ಬುಂದೇಲ್‌ಖಂಡ್, ಪಶ್ಚಿಮ ಬಂಗಾಳ, ಜಾರ್ಖಂಡ್ ಮತ್ತು ಒಡಿಶಾ ಸಂಸದರ ಸಭೆ ನಡೆಯಲಿದೆ. ಮೊದಲ ಸಭೆ ಸಂಜೆ 6.30ಕ್ಕೆ, ಇನ್ನೊಂದು ಸಭೆ ಸಂಜೆ 7.30ಕ್ಕೆ ನಡೆಯಲಿದೆ.

ಮೊದಲ ಸಭೆಯಲ್ಲಿ, ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ ಮತ್ತು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಪ್ರಧಾನಿ ಮೋದಿಯವರೊಂದಿಗೆ ಉಪಸ್ಥಿತರಿದ್ದರೆ, ಎರಡನೆಯ ಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ರಕ್ಷಣ ಸಚಿವ ರಾಜನಾಥ್ ಸಿಂಗ್ ಅವರು ಉಪಸ್ಥಿತರಿರಲಿದ್ದಾರೆ. ಈ ಸಭೆಗಳನ್ನು ಕೇಂದ್ರ ಸಚಿವರಾದ ಸಂಜೀವ್ ಬಲ್ಯಾನ್, ಬಿಎಲ್ ವರ್ಮಾ, ಧರ್ಮೇಂದ್ರ ಪ್ರಧಾನ್ ಮತ್ತು ಶಾಂತನು ಠಾಕೂರ್ ಅವರು ಭಾಗಿಯಾಗಲಿದ್ದಾರೆ.

ಮೂರನೇ ಮತ್ತು ನಾಲ್ಕನೇ ಕ್ಲಸ್ಟರ್ ಸಭೆಗಳು ಆಗಸ್ಟ್ 2 ರಂದು ನಡೆಯಲಿದ್ದು, ಯುಪಿಯ ಕಾಶಿ, ಗೋರಖ್‌ಪುರ ಮತ್ತು ಅವಧ್, ತೆಲಂಗಾಣ, ಆಂಧ್ರಪ್ರದೇಶ, ತಮಿಳುನಾಡು, ಕರ್ನಾಟಕ, ಕೇರಳ, ಪುದುಚೇರಿ, ಅಂಡಮಾನ್ ಮತ್ತು ನಿಕೋಬಾರ್ ಮತ್ತು ಲಕ್ಷದ್ವೀಪದ  96 ಸಂಸದರು ಭಾಗವಹಿಸಲಿದ್ದಾರೆ. ಕೇಂದ್ರ ಸಚಿವರಾದ ಅನುಪ್ರಿಯಾ ಪಟೇಲ್, ಮಹೇಂದ್ರ ನಾಥ್ ಪಾಂಡೆ, ಪ್ರಹ್ಲಾದ ಜೋಶಿ ಮತ್ತು ವಿ. ಮುರಳೀಧರನ್ ಅವರು ಭಾಗಿಯಾಗಲಿದ್ದಾರೆ.

ಆಗಸ್ಟ್ 3 ರಂದು, ಬಿಹಾರ, ದೆಹಲಿ, ಹಿಮಾಚಲ ಪ್ರದೇಶ, ಪಂಜಾಬ್, ಚಂಡೀಗಢ, ಹರಿಯಾಣ, ಉತ್ತರಾಖಂಡ, ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್‌ನ 63 ಸಂಸದರ ಐದನೇ ಮತ್ತು ಆರನೇ ಕ್ಲಸ್ಟರ್ ಸಭೆಗಳಲ್ಲಿ ಕೇಂದ್ರ ಸಚಿವರಾದ ನಿತ್ಯಾನಂದ ರಾಯ್ , ಅನುರಾಗ್ ಠಾಕೂರ್ ಮತ್ತು ಅಜಯ್ ಭಟ್ ಅವರು ಭಾಗಿಯಾಗಲಿದ್ದಾರೆ.

ರಾಜಸ್ಥಾನ, ಮಹಾರಾಷ್ಟ್ರ ಮತ್ತು ಗೋವಾದ 76 ಸಂಸದರ ಎರಡು ಗುಂಪುಗಳು ಆಗಸ್ಟ್ 8 ರಂದು ಪ್ರಧಾನಿಯನ್ನು ಭೇಟಿಯಾಗಲಿವೆ. ಅಲ್ಲದೆ, ಗುಜರಾತ್, ದಾದ್ರಾ ಮತ್ತು ನಗರ ಹವೇಲಿ ಮತ್ತು ದಮನ್ ಮತ್ತು ದಿಯು ಕ್ಲಸ್ಟರ್ ಜೊತೆಗೆ ಈ ವರ್ಷದ ಅಂತ್ಯದ ವೇಳೆಗೆ ವಿಧಾನಸಭೆ ಚುನಾವಣೆ ನಡೆಯಲಿರುವ ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢದ 81 ಸಂಸದರು ಆಗಸ್ಟ್ 9 ರಂದು ಭೇಟಿಯಾಗಲಿದ್ದಾರೆ. ಈಶಾನ್ಯ ಕ್ಲಸ್ಟರ್‌ನ ಉಳಿದ 31 ಸಂಸದರ ಸಭೆಯ ದಿನಾಂಕ ಇನ್ನೂ ಅಂತಿಮಗೊಂಡಿಲ್ಲ.

ಎನ್‌ಡಿಎಯ ಸಂಸದರು ಪ್ರದೇಶವಾರು ಪ್ರಧಾನಿಯನ್ನು ಭೇಟಿಯಾಗುತ್ತಿರುವುದು ಇದೇ ಮೊದಲ ಬಾರಿಯಾಗಿದೆ. ನಿರ್ಣಾಯಕ ಲೋಕಸಭೆ ಸಾರ್ವತ್ರಿಕ ಚುನಾವಣೆಯ ಪೂರ್ವದಲ್ಲಿ ಚರ್ಚೆ ನಡೆಸಲಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಮಿತ್ರಪಕ್ಷಗಳ ಜತೆಗೂಡಿ ಶೇ 50ರಷ್ಟು ಮತ ಗಳಿಸಲು ಬಿಜೆಪಿ ರಣತಂತ್ರ ರೂಪಿಸುತ್ತಿದೆ. ದುರ್ಬಲ ಎಂದು ಗುರುತಿಸಲಾಗಿರುವ 160 ಕ್ಷೇತ್ರಗಳಲ್ಲಿ ನಿಕಟವಾಗಿ ಕೆಲಸ ಮಾಡಲು ಈ ಕಸರತ್ತು ಮಾಡುತ್ತಿದೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯ ಹೊರ ಹಾಕಿದ್ದಾರೆ.

ಟಾಪ್ ನ್ಯೂಸ್

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

1-pk

Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

adani (2)

Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ

Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ

Viral Video: ನೀರಿನಿಂದ ಜಿಗಿದು ಹಾವನ್ನೇ ಬೇಟೆಯಾಡಲು ಹೋದ ಮೀನು… ಕೊನೆಗೆ ಆಗಿದ್ದೇನು?

Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.