Derail: ಹಳಿ ತಪ್ಪಿದ್ದ ಸಬರಮತಿ ಎಕ್ಸ್‌ಪ್ರೆಸ್ ರೈಲು… ತಪ್ಪಿದ ಬಾರಿ ದುರಂತ
Team Udayavani, Aug 17, 2024, 9:11 AM IST
ಕಾನ್ಪುರ: ಉತ್ತರ ಪ್ರದೇಶದ ಕಾನ್ಪುರ ಮತ್ತು ಭೀಮಸೇನ್ ನಿಲ್ದಾಣದ ನಡುವೆ ಸಬರಮತಿ ಎಕ್ಸ್‌ಪ್ರೆಸ್ ಹಳಿತಪ್ಪಿದೆ. ಶನಿವಾರ ಬೆಳಗಿನ ಜಾವ 2:30ಸುಮಾರಿಗೆ ಈ ಘಟನೆ ನಡೆದಿದ್ದು ರೈಲಿನ ಕನಿಷ್ಠ 20 ಬೋಗಿಗಳು ಹಳಿ ತಪ್ಪಿವೆ ಎಂದು ವರದಿಯಾಗಿದೆ.
ಘಟನೆಯಲ್ಲಿ ಯಾರಿಗೂ ಗಾಯಗಳಾಗಿರುವ ಕುರಿತು ವರದಿಯಾಗಿಲ್ಲ ಎನ್ನಲಾಗಿದೆ. ರೈಲು ಹಳಿಗಳ ಮೇಲೆ ಬಂಡೆ ಕಲ್ಲುಗಳು ಬಿದ್ದಿದ್ದು ರೈಲಿನ ಮುಂಭಾಗಕ್ಕೆ ಹಾನಿಯಾಗಿದೆ ಎಂದು ಲೋಕೋ ಪೈಲಟ್ ತಿಳಿಸಿದ್ದಾರೆ. ಘಟನೆಯ ನಂತರ ಈ ಮಾರ್ಗದಲ್ಲಿ ಸಂಚರಿಸುವ ಏಳು ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ ಮತ್ತು ಮೂರು ರೈಲುಗಳ ಮಾರ್ಗ ಬದಲಾವಣೆ ಮಾಡಲಾಗಿದೆ ಎಂದು ರೈಲ್ವೆ ಇಲಾಖೆ ತಿಳಿಸಿದೆ. ಘಟನೆಯ ಹಿಂದೆ ವಿಧ್ವಂಸಕ ಕೃತ್ಯದ ಶಂಕೆ ಕೂಡ ವ್ಯಕ್ತವಾಗಿದ್ದು ಈ ಕುರಿತು ತನಿಖೆ ನಡೆಸಲಾಗುವುದು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ರೈಲು ಪ್ರಯಾಣಿಕರನ್ನು ಬಸ್ಸಿನ ಮೂಲಕ ತೆರಳಲು ವ್ಯವಸ್ಥೆ ಮಾಡಿಕೊಡಲಾಯಿತು ಎಂದು ಸಾರ್ವಜನಿಕ ಸಂಪರ್ಕ ಅಧಿಕಾರಿ ಮಾಹಿತಿ ನೀಡಿದ್ದಾರೆ. ಘಟನೆಯಲ್ಲಿ ಒಟ್ಟು ಇಪ್ಪತ್ತು ಬೋಗಿಗಳು ಹಳಿತಪ್ಪಿದ್ದು ಯಾವುದೇ ಅನಾಹುತ ಸಂಭವಿಸಿಲ್ಲ ಎಂದಿದ್ದಾರೆ.
STORY | 20 coaches of Sabarmati Express derail near Kanpur, no injuries reported
READ: https://t.co/lYrjxzG5FJ
VIDEO:
(Source: Third Party pic.twitter.com/ZqgAXNHVYK
— Press Trust of India (@PTI_News) August 17, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.