ಪಾಕ್ನ 4 ಸೇರಿ 22 ಯೂಟ್ಯೂಬ್ ಚಾನೆಲ್ ಬ್ಲಾಕ್; ಕೇಂದ್ರ ಸರ್ಕಾರದಿಂದ ಆದೇಶ
ಸುಳ್ಳು ಸುದ್ದಿ, ಭಾರತ ವಿರೋಧಿ ಕಂಟೆಂಟ್ ಹಿನ್ನೆಲೆ ಈ ಕ್ರಮ
Team Udayavani, Apr 6, 2022, 7:50 AM IST
ನವದೆಹಲಿ: ಸುಳ್ಳು ಸುದ್ದಿಗಳನ್ನು ಹಬ್ಬಿಸುತ್ತಿರುವ ಪಾಕಿಸ್ತಾನದ 4 ಚಾನೆಲ್ಗಳು ಹಾಗೂ ಭಾರತದ 18 ಯೂಟ್ಯೂಬ್ ಆಧರಿತ ಸುದ್ದಿವಾಹಿನಿಗಳನ್ನು ಬ್ಲಾಕ್ ಮಾಡುವಂತೆ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಸೂಚಿಸಿದೆ.
ಕಳೆದ ವರ್ಷದ ಫೆಬ್ರವರಿಯಲ್ಲಿ ಐಟಿ ನಿಯಮಗಳು-2021 ಜಾರಿಯಾದ ಬಳಿಕ, ಭಾರತೀಯ ಯೂಟ್ಯೂಬ್ ಆಧರಿತ ನ್ಯೂಸ್ ಪಬ್ಲಿಷರ್ಗಳ ವಿರುದ್ಧ ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದ್ದು ಇದೇ ಮೊದಲು.
22 ಯೂಟ್ಯೂಬ್ ಚಾನೆಲ್ಗಳು, 3 ಟ್ವಿಟರ್ ಖಾತೆಗಳು, ಒಂದು ಫೇಸ್ಬುಕ್ ಖಾತೆ ಮತ್ತು ಒಂದು ನ್ಯೂಸ್ ವೆಬ್ಸೈಟ್ ಅನ್ನು ಬ್ಲಾಕ್ ಮಾಡುವಂತೆ ಸೋಮವಾರವೇ ಸಚಿವಾಲಯ ಆದೇಶ ಹೊರಡಿಸಿದೆ. ಈ ಮೂಲಕ, 2021ರ ಡಿಸೆಂಬರ್ನಿಂದ ಈವರೆಗೆ ಕೇಂದ್ರ ಸರ್ಕಾರವು ರಾಷ್ಟ್ರೀಯ ಭದ್ರತೆ, ಸಾರ್ವಭೌಮತೆ ಮತ್ತು ಸಮಗ್ರತೆ, ಕಾನೂನು ಸುವ್ಯವಸ್ಥೆ ಇತ್ಯಾದಿಗಳ ಹೆಸರಲ್ಲಿ ಒಟ್ಟಾರೆ 78 ಯೂಟ್ಯೂಬ್ ಆಧರಿತ ಸುದ್ದಿವಾಹಿನಿಗಳು ಹಾಗೂ ಹಲವು ಸಾಮಾಜಿಕ ಜಾಲತಾಣಗಳ ಖಾತೆಗಳನ್ನು ನಿಷೇಧಿಸಿದಂತಾಗಿದೆ.
ಇದನ್ನೂ ಓದಿ:ಸಿಟಿ ಮಾರ್ಕೆಟ್ ಮೇಲ್ಸೇತುವೆಯಲ್ಲಿ ಅಪಘಾತ : ಟೌನ್ ಹಾಲ್ ಸುತ್ತಮುತ್ತ ಸಂಚಾರ ದಟ್ಟಣೆ
ಬ್ಲಾಕ್ ಆಗಿರುವ ಯೂಟ್ಯೂಬ್ ಚಾನೆಲ್ಗಳು ಸರಾಸರಿ ಸುಮಾರು 260 ಕೋಟಿ ವೀಕ್ಷಕರನ್ನು ಹೊಂದಿವೆ. ರಾಷ್ಟ್ರೀಯ ಭದ್ರತೆಯ ವಿಚಾರದಲ್ಲಿ ಅತ್ಯಂತ ಸೂಕ್ಷ್ಮವಾಗಿರುವ, ಭಾರತ ವಿರೋಧಿ ಕಂಟೆಂಟ್ಗಳಿರುವ, ದೇಶದ ವಿದೇಶಾಂಗ ನೀತಿಯನ್ನು ಟೀಕಿಸುವಂಥ ಸುಳ್ಳು ಸುದ್ದಿಗಳನ್ನು ಇವುಗಳು ಪ್ರಕಟಿಸುತ್ತಿದ್ದವು ಎಂದೂ ಸಚಿವಾಲಯ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.