Self Harming: ಬಿಜೆಪಿ ಶಾಸಕರ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡ 24 ರ ಯುವಕ
Team Udayavani, Sep 25, 2023, 1:46 PM IST
ಲಕ್ನೋ: ಬಿಜೆಪಿ ಶಾಸಕರ ಅಧಿಕೃತ ನಿವಾಸದಲ್ಲಿ ಯುವಕನೊಬ್ಬ ನೇಣುಬಿಗಿದುಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಭಾನುವಾರ (ಸೆ.24 ರಂದು) ರಾತ್ರಿ ನಗರದ ಹಜರತ್‌ಗಂಜ್ ಪ್ರದೇಶದಲ್ಲಿ ನಡೆದಿರುವುದಾಗಿ ವರದಿಯಾಗಿದೆ.
ಬಿಜೆಪಿಯ ಶಾಸಕ ಯೋಗೇಶ್ ಶುಕ್ಲಾ ಅವರ ಅಧಿಕೃತ ನಿವಾಸದಲ್ಲಿ ಈ ಘಟನೆ ನಡೆದಿದ್ದು, ಉತ್ತರ ಪ್ರದೇಶದ ಬಾರಾಬಂಕಿ ಜಿಲ್ಲೆಯ ಹೈದರ್‌ಗಢ ಮೂಲದ ಶ್ರೇಷ್ಠ ತಿವಾರಿ (24) ಆತ್ಮಹತ್ಯೆ ಮಾಡಿಕೊಂಡ ಯುವಕ.
ಶ್ರೇಷ್ಠ ತಿವಾರಿ ಲಕ್ನೋದ ಬಕ್ಷಿ ಕಾ ತಲಾಬ್ (BKT) ಅಸೆಂಬ್ಲಿ ಕ್ಷೇತ್ರದ ಶಾಸಕ ಯೋಗೇಶ್ ಶುಕ್ಲಾ ಅವರಿಗೆ ಸಂಬಂಧಿಸಿದ ಮಾಧ್ಯಮ ತಂಡದ ಸದಸ್ಯರಾಗಿದ್ದರು. ಶುಕ್ಲಾ ಅವರ ಹಜರತ್‌ಗಂಜ್ ನಿವಾಸದಲ್ಲಿ ತಿವಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ಕೌಟುಂಬಿಕ ಕಲಹದಿಂದ ಯುವಕ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ ತಿವಾರಿಯ ಪ್ರಿಯತಮೆ ವಿರುದ್ಧ ಕಿರುಕುಳ ಹಾಗೂ ನಿಂದನೆ ಆರೋಪ ಮಾಡಿ ಮೃತರ ಕುಟುಂಬ ಪೊಲೀಸರಿಗೆ ದೂರು ನೀಡಿದೆ.
ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಸದ್ಯ ದೂರು ದಾಖಲಿಸಿಕೊಂಡು ಈ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಯುವಕರನ್ನು ಆಕರ್ಷಿಸಲು ನಾನಾ “ರಜೆ’ಗಳ ಸುರಿಮಳೆ; ಸಾಕುಪ್ರಾಣಿಗಳ ಜತೆ ಕಾಲ ಕಳೆಯಲೂ ರಜೆ
Decision Awaited: 2025ಕ್ಕೆ ನೀಟ್ ಆನ್‌ಲೈನ್: ಶೀಘ್ರವೇ ನಿರ್ಧಾರ
Tata Steel: ಟಾಟಾ ಗಣಿಯ ಪೂರ್ಣ ಹೊಣೆ ಮಹಿಳೆಯರಿಗೆ:ದೇಶದಲ್ಲೇ ಮೊದಲು!
Parliament Session: ಮೀಸಲಾತಿ ಪರಾಮರ್ಶೆ: ದೇವೇಗೌಡರ ಆಗ್ರಹ
Noida: ಕಚೇರಿಯಲ್ಲಿ ವೃದ್ಧನನ್ನು ಕಾಯಿಸಿದ ಸಿಬ್ಬಂದಿಗೆ ನಿಂತು ಕೆಲಸ ಮಾಡೋ ಶಿಕ್ಷೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.