ವಿವಿಗಳಲ್ಲಿ ವಿದೇಶಿ ವಿದ್ಯಾರ್ಥಿಗಳಿಗೆ ಶೇ.25 ಹೆಚ್ಚುವರಿ ಸೀಟು
ಯುಜಿ-ಪಿಜಿ ಕೋರ್ಸ್‌ಗಳಿಗೆ ಪ್ರವೇಶ ಪರೀಕ್ಷೆ ಬರೆಯಬೇಕಾಗಿಲ್ಲ
Team Udayavani, Aug 21, 2022, 8:42 PM IST
ನವದೆಹಲಿ: ಇನ್ನು ಮುಂದೆ, ದೇಶದ ವಿಶ್ವವಿದ್ಯಾನಿಲಯಗಳು ಮತ್ತು ಉನ್ನತ ಶಿಕ್ಷಣ ಸಂಸ್ಥೆಗಳು ತಮ್ಮ ಯುಜಿ ಮತ್ತು ಪಿಜಿ ಕೋರ್ಸ್‌ಗಳಲ್ಲಿ ವಿದೇಶಿ ವಿದ್ಯಾರ್ಥಿಗಳಿಗೆ ಶೇ.25ರಷ್ಟು ಹೆಚ್ಚುವರಿ ಸೀಟುಗಳನ್ನು ಸೃಷ್ಟಿಸಬಹುದು. ಅಷ್ಟೇ ಅಲ್ಲ, ಈ ಪ್ರವೇಶಾತಿಗೆ ಯಾವುದೇ ಪ್ರವೇಶ ಪರೀಕ್ಷೆಗಳು ಇರುವುದಿಲ್ಲ ಎಂದು ಯುಜಿಸಿ ಮುಖ್ಯಸ್ಥ ಎಂ.ಜಗದೀಶ್ ಕುಮಾರ್ ಕುಮಾರ್ ಹೇಳಿದ್ದಾರೆ.
ದೇಶದ ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ವಿದೇಶಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿಸುವ ನಿಟ್ಟಿನಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಕಳೆದ ವಾರ ನಡೆದ ಯುಜಿಸಿ ಸಭೆಯಲ್ಲಿ ಈ ಕುರಿತು ನಿರ್ಧರಿಸಲಾಗಿದೆ. ಪ್ರಸ್ತುತ ಇರುವ ಒಟ್ಟಾರೆ ಸೀಟುಗಳನ್ನು ಹೊರತುಪಡಿಸಿ ಹೆಚ್ಚುವರಿಯಾಗಿ ಶೇ.25ರಷ್ಟು ಸೀಟುಗಳನ್ನು ಸೃಷ್ಟಿಸಿ, ವಿದೇಶಿ ವಿದ್ಯಾರ್ಥಿಗಳಿಗೆ ಪ್ರವೇಶ ಕಲ್ಪಿಸಬೇಕು. ಈ ಸೀಟುಗಳ ಕುರಿತ ನಿರ್ಧಾರವನ್ನು ಆಯಾ ಶಿಕ್ಷಣ ಸಂಸ್ಥೆಗಳೇ ಕೈಗೊಳ್ಳತಕ್ಕದ್ದು ಎಂದೂ ಜಗದೀಶ್ ತಿಳಿಸಿದ್ದಾರೆ.
ಉನ್ನತ ಶಿಕ್ಷಣ ಸಂಸ್ಥೆಗಳು ಅಂತಾರಾಷ್ಟ್ರೀಯ ವಿದ್ಯಾರ್ಥಿಗಳ ಪ್ರವೇಶಕ್ಕೆ ಪಾರದರ್ಶಕ ಪ್ರವೇಶ ಪ್ರಕ್ರಿಯೆಯನ್ನು ಅಳವಡಿಸಿಕೊಳ್ಳಬಹುದು. ವಿದೇಶಿ ವಿದ್ಯಾರ್ಥಿಗಳಿಗೆಂದು ಮೀಸಲಿಟ್ಟ “ಹೆಚ್ಚುವರಿ’ ಸೀಟುಗಳು ಭರ್ತಿಯಾಗದಿದ್ದರೆ, ಅದನ್ನು ಬೇರೆ ವಿದ್ಯಾರ್ಥಿಗಳಿಗೆ ಹಂಚಿಕೆ ಮಾಡುವಂತಿಲ್ಲ. ಪ್ರತಿ ಕೋರ್ಸ್‌ನಲ್ಲಿ ವಿದೇಶಿ ವಿದ್ಯಾರ್ಥಿಗಳಿಗೆಂದು ಇರುವ ಸೀಟುಗಳ ಸಂಖ್ಯೆ, ಶುಲ್ಕ, ಪ್ರವೇಶ ಪ್ರಕ್ರಿಯೆ, ಅರ್ಹತಾ ಷರತ್ತುಗಳನ್ನು ಆಯಾ ಶಿಕ್ಷಣ ಸಂಸ್ಥೆಗಳ ವೆಬ್‌ಸೈಟ್‌ನಲ್ಲಿ ಪ್ರಕಟಿಸಬೇಕು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್, ಟ್ರಾಫಿಕ್ ಜಾಮ್
Man Fined: ಹೀಗೂ ಉಂಟೇ…! ಹೆಲ್ಮೆಟ್ ಧರಿಸಿಲ್ಲ ಎಂದು ಪಾದಚಾರಿಗೆ ದಂಡ ವಿಧಿಸಿದ ಪೊಲೀಸ್
BJP; ಅಮಿತ್ ಶಾ ಹೇಳಿಕೆ ಪರ ನಿಲ್ಲಲು ಸಂತೋಷ್ ಸೂಚನೆ
INDIA Bloc ಖತಂ?: ದಿಲ್ಲಿ ವಿಧಾನಸಭಾ ಚುನಾವಣೆ ಕಾವೇರಿರುವಾಗಲೇ ಬಿರುಕು
Mahakumbh; ಕುಂಭ ಮೇಳ ಸನಾತನ ಗರ್ವ: ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್
MUST WATCH
ಹೊಸ ಸೇರ್ಪಡೆ
Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್, ಟ್ರಾಫಿಕ್ ಜಾಮ್
Uchila: ಕಾರು ಢಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವು
Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು
Bengaluru: 7 ಮದುವೆ ಮುಚ್ಚಿಟ್ಟು 8ನೇ ಮದುವೆಯಾಗಿ ಪತಿಗೆ ವಂಚನೆ!
Udupi: 2024ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಆಯ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.