![Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?](https://www.udayavani.com/wp-content/uploads/2025/02/6-20-415x249.jpg)
![Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?](https://www.udayavani.com/wp-content/uploads/2025/02/6-20-415x249.jpg)
Team Udayavani, Jan 5, 2024, 2:27 PM IST
ಥಾಣೆ: ಕಳವಳಕಾರಿ ವಿದ್ಯಮಾನವೊಂದರಲ್ಲಿ 12 ವರ್ಷದ ಬಾಲಕಿಯನ್ನು ಮದುವೆಯಾಗಿ, ಪದೇ ಪದೇ ಅತ್ಯಾಚಾರವೆಸಗಿ ಆಕೆಯನ್ನು ಗರ್ಭಿಣಿಯನ್ನಾಗಿ ಮಾಡಿದ ಆರೋಪದ ಮೇಲೆ 29 ವರ್ಷದ ಯುವಕನ ವಿರುದ್ಧ ನವಿ ಮುಂಬೈ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಘಟನೆಯ ಕುರಿತು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಶುಕ್ರವಾರ ಮಾಹಿತಿ ನೀಡಿದ್ದು, ದೇಶದಲ್ಲಿ ಕಾನೂನು ಬಾಹಿರಗಿರುವ ಬಾಲ್ಯವಿವಾಹ ಸುಮಾರು ಆರು ತಿಂಗಳ ಹಿಂದೆ ನಡೆದಿದೆ.
ದುರುಳ ಪದೇ ಪದೇ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಸಣ್ಣ ವಯಸ್ಸಿನಲ್ಲೇ ಗರ್ಭ ಧರಿಸಲು ಕರಣನಾಗಿದ್ದಾನೆ. ಆರೋಪಿ ಯುವಕ ಮತ್ತು ಅಪ್ರಾಪ್ತ ವಯಸ್ಕ ಬಾಲಕಿ ಇಬ್ಬರೂ ಮೂಲತಃ ಮಹಾರಾಷ್ಟ್ರದ ಸತಾರಾ ಜಿಲ್ಲೆಯವರಾಗಿದ್ದಾರೆ.
ಗುರುವಾರ ನಡೆಸಿದ ಪರೀಕ್ಷೆಯಲ್ಲಿ ಪನ್ವೇಲ್‌ನ ಸ್ಥಳೀಯ ವೈದ್ಯರಿಗೆ ಬಾಲಕಿ ನಾಲ್ಕು ತಿಂಗಳ ಗರ್ಭಿಣಿ ಎಂದು ತಿಳಿದುಬಂದಿದೆ. ನಂತರ ಪೊಲೀಸರಿಗೆ ಎಚ್ಚರಿಕೆ ನೀಡಿದರು.ವಿಚಾರ ತಿಳಿದು ಬಂದಿದೆ. ಆರೋಪಿ ವಿರುದ್ಧ ಭಾರತೀಯ ದಂಡ ಸಂಹಿತೆ (ಐಪಿಸಿ), ಪೋಕ್ಸೊ ಕಾಯ್ದೆ(ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಮತ್ತು ಬಾಲ್ಯ ವಿವಾಹ ನಿಷೇಧ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಖಂಡೇಶ್ವರ ಪೊಲೀಸ್ ಠಾಣೆಯ ಠಾಣಾಧಿಕಾರಿ ತಿಳಿಸಿದ್ದಾರೆ.
You seem to have an Ad Blocker on.
To continue reading, please turn it off or whitelist Udayavani.