ಜಮ್ಮು-ಕಾಶ್ಮೀರದಲ್ಲಿ 2G ಇಂಟರ್ನೆಟ್ ಸೇವೆ ಪುನರಾರಂಭ: ಸಾಮಾಜಿಕ ಜಾಲತಾಣಗಳಿಗೆ ನಿರ್ಬಂಧ
Team Udayavani, Jan 15, 2020, 8:08 AM IST
ಶ್ರೀನಗರ: ಕಾಶ್ಮೀರ ಕಣಿವೆಯಲ್ಲಿ ಐದು ತಿಂಗಳಿಗೂ ಹೆಚ್ಚು ಕಾಲ ಸ್ಥಗಿತಗೊಂಡಿದ್ದ ಬ್ರಾಡ್ ಬ್ಯಾಂಡ್ ಇಂಟರ್ ನೆಟ್ ಸೇವೆ ಪುನರಾರಂಭವಾಗಲಿದೆ. ಮೊದಲಿಗೆ 5 ಜಿಲ್ಲೆಗಳಲ್ಲಿ ಹಂತಹಂತವಾಗಿ ಈ 2G ಇಂಟರ್ನೆಟ್ ಸೇವೆ ಜಾರಿಗೆ ಬರಲಿದ್ದು ಅದಾಗ್ಯೂ ಸಾಮಾಜಿಕ ಜಾಲತಾಣಗಳಿಗೆ ನಿರ್ಬಂಧ ವಿಧಿಸಲಾಗಿದೆ ಎಂದು ಸರ್ಕಾರ ತಿಳಿಸಿದೆ.
ಅತ್ಯಗತ್ಯ ಸೇವೆಯನ್ನು ಒದಗಿಸುವ ಆಸ್ಪತ್ರೆಗಳು, ಬ್ಯಾಂಕ್ ಗಳು, ಸರ್ಕಾರಿ ವೆಬ್ ಸೈಟ್ ಗಳು, ಇತ್ಯಾದಿ ಹಲವು ಸಂಸ್ಥೆಗಳಿಗೆ ಬ್ರಾಡ್ ಬ್ಯಾಂಡ್ ಸೌಲಭ್ಯ ಒದಗಿಸಲಾಗುವುದು. ಆದರೇ ಇದರ ದುರುಪಯೋಗವನ್ನು ತಡೆಗಟ್ಟಲು ಆಯಾ ಸಂಸ್ಥೆಗಳೇ ಜವಾಬ್ದಾರರಾಗಿರುತ್ತವೆ. ಮತ್ತು ದಾಖಲೆ ಮತ್ತು ಬಳಕೆಯನ್ನು ಮೇಲ್ಚಿಚಾರಣೆ ಮಾಡಲು, ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಲು ನೋಡಲ್ ಅಧಿಕಾರಿಗಳ ನೇಮಕ ಮಾಡಬೇಕು ಎಂದು ಸರ್ಕಾರ ತನ್ನ ಆದೇಶದಲ್ಲಿ ತಿಳಿಸಿದೆ.
ಶ್ರೀನಗರ ಸೇರಿದಂತೆ ಮಧ್ಯ ಕಾಶ್ಮೀರದಲ್ಲಿ ಇಂದಿನ 2G ಮೊಬೈಲ್ ಸಂಪರ್ಕ ಆರಂಭವಾದರೆ ಎರಡು ದಿನಗಳ ನಂತರ ಕುಪ್ವಾರಾ, ಬಂಡಿಪೋರಾ, ಮತ್ತು ಬಾರಾಮುಲ್ಲಾ ದಲ್ಲಿ, ತದನಂತರ ಪುಲ್ವಾಮ, ಕುಲ್ಗಂ , ಅನಂತ್ ನಾಗ್ ನಲ್ಲಿ ಹಂತಹಂತವಾಗಿ ಜಾರಿಗೆ ತರಲಾಗುವುದು ಎಂದು ಗೃಹ ಇಲಾಖೆ ತಿಳಿಸಿದೆ.
ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ನಂತರ ಅಂತರ್ಜಾಲ ಸೇವೆಯನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿತ್ತು. ಇದೀಗ ಮರುಸ್ಥಾಪನೆಗೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
MUST WATCH
ಹೊಸ ಸೇರ್ಪಡೆ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.