ಉತ್ತರಾಖಂಡದಲ್ಲಿ 3.8 ತೀವ್ರತೆಯ ಭೂಕಂಪನ
Team Udayavani, Jan 22, 2023, 2:20 PM IST
ಪಿಥೋರಗಢ : ಉತ್ತರಾಖಂಡದ ಪಿಥೋರಗಢದಲ್ಲಿ ರಿಕ್ಟರ್ ಮಾಪಕದಲ್ಲಿ 3.8 ತೀವ್ರತೆಯ ಭೂಕಂಪನ ಭಾನುವಾರ ಮುಂಜಾನೆ ದಾಖಲಾಗಿದೆ.
ಬೆಳಗ್ಗೆ 8.58ಕ್ಕೆ ಪಿಥೋರಗಢದಿಂದ ಸುಮಾರು 23 ಕಿ.ಮೀ ದೂರದಲ್ಲಿ ಭೂಮಿ ಕಂಪಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ. ಈ ಭೂಕಂಪದ ಕೇಂದ್ರಬಿಂದು ಭೂಮಿಯಿಂದ 10 ಕಿಲೋಮೀಟರ್ ಆಳದಲ್ಲಿತ್ತು. ಆದರೂ ಯಾವುದೇ ಪ್ರಾಣ ಅಥವಾ ಆಸ್ತಿ ನಷ್ಟದ ಬಗ್ಗೆ ಇನ್ನೂ ವರದಿಯಾಗಿಲ್ಲ.
ಕಳೆದ ಡಿಸೆಂಬರ್ ತಿಂಗಳಿನಲ್ಲಿಯೂ ಉತ್ತರಕಾಶಿ ಮತ್ತು ಉತ್ತರಾಖಂಡದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ತಡರಾತ್ರಿ ಭೂಕಂಪ ಸಂಭವಿಸಿದೆ . ಈ ಭೂಕಂಪದ ತೀವ್ರತೆ ಕಡಿಮೆಯಾಗಿತ್ತು. ಭೂಕಂಪದ ತೀವ್ರತೆಯನ್ನು 3.1 ಎಂದು ಅಳೆಯಲಾಗಿದೆ ಎಂದು ಉತ್ತರಕಾಶಿ ವಿಪತ್ತು ನಿರ್ವಹಣಾ ಅಧಿಕಾರಿ ದೇವೇಂದ್ರ ಪಟ್ವಾಲ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.